ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಲಾಕ್‌ಡೌನ್‌: 'ಬೆಂಗಳೂರು ಟೆಕ್ ಸಮ್ಮಿಟ್' ಮುಂದಕ್ಕೆ

|
Google Oneindia Kannada News

ಬೆಂಗಳೂರು, ಮೇ 20: ಬರುವ ಸೆಪ್ಟೆಂಬರ್ 21ರಿಂದ 23 ರವರೆಗೆ ನಡೆಸಲು ತೀರ್ಮಾನಿಸಿದ್ದ ಬೆಂಗಳೂರು ಟೆಕ್ ಸಮ್ಮಿಟ್‌ನ್ನು (ಬಿಟಿಎಸ್) ನವೆಂಬರ್ 18ರಿಂದ 20ರವರೆಗೆ ನಡೆಸಲು ತೀರ್ಮಾನಿಸಲಾಗಿದೆ.

ಐಟಿ-ಬಿಟಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಅಪಾರ್ಟ್‍ಮೆಂಟ್ ಒಕ್ಕೂಟದ ಪ್ರತಿನಿಧಿಗಳ ಜತೆ ಸಂವಾದ ನಡೆಸಿದ ಡಿಸಿಎಂಅಪಾರ್ಟ್‍ಮೆಂಟ್ ಒಕ್ಕೂಟದ ಪ್ರತಿನಿಧಿಗಳ ಜತೆ ಸಂವಾದ ನಡೆಸಿದ ಡಿಸಿಎಂ

ಈ ಹಿಂದೆ ಸೆಪ್ಟೆಂಬರ್ 21ರಿಂದ 23ರವರೆಗೆ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ, ಕೋವಿಡ್-19 ಕಾರಣಕ್ಕೆ ದೇಶ-ವಿದೇಶಗಳಿಂದ ಐಟಿ ಪ್ರತಿನಿಧಿಗಳು ಬರುವುದು ಕಷ್ಟ ಆಗುತ್ತದೆ ಎನ್ನವ ಕಾರಣಕ್ಕೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಅಶ್ವತ್ಥನಾರಾಯಣ ತಿಳಿಸಿದ್ದಾರೆ.

Bengaluru Tech Summit Postfoned To November Says DCM C N Ashwath Narayana

ಈ ಬಾರಿಯ ಟೆಕ್ ಸಮಿಟ್ ವಿಶೇಷವಾಗಿರುತ್ತದೆ. ವೈಯಕ್ತಿಕ ಅಂತರ ಸೇರಿದಂತೆ ಹಲವು ವಿಷಯಗಳಲ್ಲಿ ಮುಂಜಾಗ್ರತೆ ವಹಿಸಲಾಗುತ್ತದೆ. ಕೋವಿಡ್ ಸಂದರ್ಭದಲ್ಲಿ ಜನರು ಎದುರಿಸಿದ ಸಮಸ್ಯೆಗಳು ಮತ್ತು ಅದಕ್ಕೆ ತಂತ್ರಜ್ಞಾನ ಒದಗಿಸಿದ ಉಪಾಯಗಳ ಬಗ್ಗೆಯೂ ಸಮಾವೇಶದಲ್ಲಿ ಚರ್ಚಿಸಲಾಗುತ್ತದೆ. ಹೊಸ ಹೊಸ ತಂತ್ರಜ್ಞಾನಗಳ ಬಗ್ಗೆಯೂ ತಜ್ಞರು ಉಪನ್ಯಾಸ ನೀಡಲಿದ್ದಾರೆ ಎಂದು ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಐಟಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಮಣರೆಡ್ಡಿ, ಉಪ ಮುಖ್ಯಮಂತ್ರಿಯವರ ಕಾರ್ಯದರ್ಶಿ ಪಿ.ಪ್ರದೀಪ್, ಐಟಿ ನಿರ್ದೇಶಕಿ ಮೀನಾ ನಾಗರಾಜ ಮತ್ತಿತರರು ಸಭೆಯಲ್ಲಿ ಹಾಜರಿದ್ದರು.

English summary
Bengaluru Tech Summit Postfoned To November Says DCM C N Ashwath Narayana on wedesday. before this program was sheduled on september.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X