ಬೇಸಿಗೆ ಆವರಿಸುತ್ತಿದ್ದಂತೆ ಬೆಂಗಳೂರಲ್ಲಿ ಹೆಚ್ಚಿದ ಧಗೆ

ಬೆಂಗಳೂರು, ಮಾರ್ಚ್ 23: ಕಳೆದ ವಾರ ಸುರಿದಿದ್ದ ಮಳೆಗೆ ನಗರ ತಂಪಾಗಿತ್ತು, ಒಂದು ವಾರ ತಂಪಾದ ಗಾಳಿ ಕೂಡ ಬೀಸಿತ್ತು. ಆದರೆ ಇದೀಗ ಮತ್ತೆ ಸೆಕೆ ಪ್ರಾರಂಭವಾಗಿದೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

ಗರಿಷ್ಠ ತಾಪಮಾನ 34ಡಿಗ್ರಿ ಸೆಲ್ಸಿಯಸ್ ಗೆ ಏರಿಕೆಯಾಗಿದೆ.ಇನ್ನೆರೆಡು ದಿನಗಳಲ್ಲಿ ತಾಪಮಾನ ಮತ್ತೆ 2ಡಿಗ್ರಿ ಸೆಲ್ಸಿಯಸ್ ನಷ್ಟು ಹೆಚ್ಚಾಗಲಿದೆ. ಒಂದು ವಾರದಿಂದ 30-32 ಡಿಗ್ರಿ ಸೆಲ್ಸಿಯಸ್ ಇದ್ದ ಗರಿಷ್ಠ ತಾಪಮಾನ ಮಳೆ ಮರೆಯಾಗುತ್ತಿದ್ದಂತೆ 34 ಡಿಗ್ರಿ ಸೆಲ್ಸಿಯಸ್ ಗೆ ಏರಿಕೆಯಾಗಿದೆ.

ಆದರೂ ಹಿಂದಿನ ವರ್ಷಕ್ಕೆ ಹೋಲಿಸಿದರೆ ಈ ತಾಪಮಾನ ಕಡಿಮೆಯೇ ಇದೆ. ಇನ್ನೆರೆಡು ದಿನಗಳಲ್ಲಿ ತಾಪಮಾನ 35-36ಡಿಗ್ರಿ ಸೆಲ್ಸಿಯಸ್ ಗೆ ಏರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಹಾಗೆಯೇ ಮಾರ್ಚ್ ಅಂತ್ಯದಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯೂ ಇದೆ.

Bengaluru temperature on High mode

ಕಳೆದ ವರ್ಷ ಮಾರ್ಚ್ 26ರಂದು 37.2ಡಿಗ್ರಿ ತಾಪಮಾನ ದಾಖಲಾಗಿತ್ತು. ನಗರದಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 22.6ಡಿಗ್ರಿ ಸೆಲ್ಸಿಯಸ್, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗರಿಷ್ಠ 32.9ಡಿಗ್ರಿ ಸೆಲ್ಸಿಯಸ್, ಕನಿಷ್ಠ 22ಡಿಗ್ರಿ ಸೆಲ್ಸಿಯಸ್, ಎಚ್‌ಎಎಲ್ ನಲ್ಲಿ ಗರಿಷ್ಠ 33ಡಿಗ್ರಿ ಸೆಲ್ಸಿಯಸ್ ಕನಿಷ್ಠ 21.4ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

ಕಲಬುರಗಿಯಲ್ಲಿ ಅತಿ ಹೆಚ್ಚು ತಾಪಮಾನ 39.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಬೆಳಗಾವಿ 17.6ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+