Banners ban in Bengaluru: ಅಕ್ರಮ ಬ್ಯಾನರ್, ಹೋರ್ಡಿಂಗ್ ನಿಷೇಧ: ಉಲ್ಲಂಘಿಸಿದರೆ ₹ 50 ಸಾವಿರ ದಂಡ
ಬೆಂಗಳೂರು, ಆಗಸ್ಟ್ 8: ಹೈಕೋರ್ಟ್ ಆದೇಶದಂತೆ ಮುಂದಿನ 2-3 ದಿನಗಳಲ್ಲಿ ನಗರದಲ್ಲಿ ಎಲ್ಲಾ ರೀತಿಯ ಅಕ್ರಮ ಬ್ಯಾನರ್ ಮತ್ತು ಹೋರ್ಡಿಂಗ್‌ಗಳನ್ನು ನಿಷೇಧಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಘೋಷಿಸಿದ್ದಾರೆ.
ಯಾರೇ ನಿಯಮ ಮೀರಿದರೂ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗುವುದು ಮತ್ತು 50 ಸಾವಿರ ರೂಪಾಯ ದಂಡ ವಿಧಿಸಲಾಗುವುದು ಎಂದು ಹೇಳಿದ್ದಾರೆ. ಇದನ್ನು ಮುಂದಿನ ದಿನಗಳಲ್ಲಿ ಕಾನೂನು ಮಾಡಲಾಗುವುದು. ಸರ್ಕಾರದ ಕಾರ್ಯಕ್ರಮ ಇದ್ದಾಗ ಫ್ಲೆಕ್ಸ್ ಅಳವಡಿಸಲು ನಿಯಮಗಳನ್ನು ರೂಪಿಸಲಾಗುವುದು ಎಂದು ಹೇಳಿದ್ದಾರೆ.

ನಗರದಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಹಾವಳಿ ಮಿತಿ ಮೀರಿದ್ದು ಹೈಕೋರ್ಟ್ ಈ ಬಗ್ಗೆ ಛೀಮಾರಿ ಹಾಕಿದೆ. ನಗರದಲ್ಲಿರುವ ಫ್ಲೆಕ್ಸ್ ನೋಡಿದರೆ ನನಗೆ ಅಸಹ್ಯ ಎನಿಸುತ್ತದೆ. ಇನ್ನೆರಡು ದಿನಗಳಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ ತೆರವು ಮಾಡಲಾಗುವುದು, ಆಗಸ್ಟ್ 15ರ ಒಳಗೆ ಫ್ಲೆಕ್ಸ್, ಬ್ಯಾನರ್ ನಿಷೇಧಿಸಲಾಗುವುದು ಎಂದು ಹೇಳಿದರು.
ಎಫ್‌ಐಆರ್ ದಾಖಲು ಫಿಕ್ಸ್
ಕುಮಾರಕೃಪಾ ಗೆಸ್ಟ್ಹೌಸ್ನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಬೆಂಗಳೂರು ನಗರದ ಸೌಂದರ್ಯ ಕಾಪಾಡಲು ಫ್ಲೆಕ್ಸ್, ಬ್ಯಾನರ್ ನಿಷೇಧಿಸಲಾಗುತ್ತಿದೆ. ಸಿಎಂ, ಡಿಸಿಎಂ, ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಯಾವುದೇ ಪಕ್ಷದ ಪರವಾಗಿಯಾದರೂ, ಮುಖಂಡರ ಪರವಾಗಿ ಆದರೂ ಸರಿ ಅನಧಿಕೃತ ಫ್ಲೆಕ್ಸ್ ಹಾಕುವಂತಿಲ್ಲ ಎಂದು ಹೇಳಿದರು.
ಈ ನಿರ್ಧಾರ ಕಟ್ಟುನಿಟ್ಟಾಗಿ ಜಾರಿ ಮಾಡಲಾಗುವುದು. ಒಂದು ವೇಳೆ ಅನಧಿಕೃತ ಫ್ಲೆಕ್ಸ್ ಹಾಕಿದರೆ ಅವರು ಯಾರೇ ಆದರೂ ಪಾಲಿಕೆ ಅಧಿಕಾರಿಗಳು ಎಫ್ಐಆರ್ ದಾಖಲಿಸಿ, ಒಂದು ಫ್ಲೆಕ್ಸ್ ಗೆ ತಲಾ 50 ಸಾವಿರ ದಂಡ ವಿಧಿಸಲಿದ್ದಾರೆ ಎಂದು ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದರು.
ಅನಧಿಕೃತ ಫ್ಲೆಕ್ಸ್ ತೆರವಿಗೆ ಕೋರ್ಟ್ ಮೂರು ವಾರಗಳ ಗಡವು ನೀಡಿದೆ. ನನ್ನದೂ, ಮುಖ್ಯಮಂತ್ರಿಗಳದ್ದೂ ಸೇರಿದಂತೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನ ಎಲ್ಲ ಅನಧಿಕೃತ ಫ್ಲೆಕ್ಸ್ ಗಳನ್ನು ನಿಷೇಧಿಸಲಾಗುವುದು. ಈ ವಿಚಾರವಾಗಿ ನಮ್ಮ ಸಚಿವರು ಹಾಗೂ ನಾಯಕರಿಗೆ ಮನವಿ ಮಾಡಿದ್ದೇನೆ. ಫ್ಲೆಕ್ಸ್ ನಿಷೇಧ ಕುರಿತು ಮುಂದಿನ ದಿನಗಳಲ್ಲಿ ನೀತಿ ರೂಪಿಸುತ್ತೇವೆ ಎಂದರು.
59 ಸಾವಿರ ಅನಧಿಕೃತ ಫ್ಲೆಕ್ಸ್ ತೆರವು
ಇನ್ನು ಮುಂದೆ ಜನ್ಮದಿನ, ಶ್ರದ್ಧಾಂಜಲಿ, ಶುಭ ಸಂದೇಶ, ಸಾಮಾಜಿಕ, ರಾಜಕೀಯ ಹಾಗೂ ಧಾರ್ಮಿಕ ವಿಚಾರ ಸೇರಿದಂತೆ ಯಾವುದೇ ಅನಧಿಕೃತ ಫ್ಲೆಕ್ಸ್ ಹಾಕುವಂತಿಲ್ಲ. ಇದಕ್ಕೆ ಎಲ್ಲಾ ಪಕ್ಷಗಳು ಹಾಗೂ ನಾಗರೀಕರು ಸಹಕರಿಸಬೇಕು ಎಂದು ಮನವಿ ಮಾಡುತ್ತೇನೆ. ಸರ್ಕಾರದಿಂದ ಫ್ಲೆಕ್ಸ್ ಹಾಕುವುದಿದ್ದರೆ, ಸಮಯ, ಅಳತೆ, ಸ್ಥಳ ನಿಗದಿ ಮಾಡಿ ಅನುಮತಿ ನೀಡಲಾಗುವುದು. ಇದಕ್ಕೂ ನೀತಿ ರೂಪಿಸಲಾಗುತ್ತಿದೆ ಎಂದು ಹೇಳಿದರು.
ಈಗಾಗಲೇ ನಗರದಲ್ಲಿ 59 ಸಾವಿರ ಅನಧಿಕೃತ ಫ್ಲೆಕ್ಸ್, ಬ್ಯಾನರ್ ತೆರವುಗೊಳಿಸಲಾಗಿದೆ. 134 ದೂರುಗಳು ಬಂದಿದ್ದು, 40 ಎಫ್ಐಆರ್ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು. ಖಾಸಗಿ ಸ್ಥಳಗಳಲ್ಲಿ ಫ್ಲೆಕ್ಸ್ ಹಾಕಲು ನಿರ್ಬಂಧ ಇರುವುದಿಲ್ಲ. ಅದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ಅವರು ಹೇಳಿದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications