ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು ಮತ್ತೊಂದು ಬ್ರೆಜಿಲ್ ಆಗಲಿದೆ: ಕುಮಾರಸ್ವಾಮಿ ಎಚ್ಚರಿಕೆ

|
Google Oneindia Kannada News

ಬೆಂಗಳೂರು, ಜೂನ್ 23: ಕರ್ನಾಟಕದಲ್ಲಿ ಕೊರೊನಾ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಲಾಕ್‌ಡೌನ್ ಸಡಿಲಗೊಳಿಸಿದ ಬಳಿಕ ಬೆಂಗಳೂರಿನಲ್ಲಿ ಏಕಾಏಕಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗಿದೆ.

Recommended Video

ಜನರ ಜೀವದ ಜೊತೆ ಚೆಲ್ಲಾಟವಾಡೋದನ್ನು ನಿಲ್ಲಿಸಿ ಎಂದು ಸರ್ಕಾರಕ್ಕೆ‌ ಎಚ್ಚರಿಸಿದ ಎಚ್ ಡಿಕೆ | HD KumarSwamy

ಈ ಕುರಿತು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಕಳವಳ ವ್ಯಕ್ತಪಡಿಸಿದ್ದು, ಕೇವಲ ಕೆಲವು ಪ್ರದೇಶಗಳಲ್ಲಿ ಲಾಕ್‌ಡೌನ್ ಮಾಡಿದರೆ ಪ್ರಯೋಜನವಿಲ್ಲ ಸುಮಾರು 20 ದಿನವಾದರೂ ಸಂಪೂರ್ಣ ಲಾಕ್‌ಡೌನ್ ಮಾಡಲೇಬೇಕು, ಇಲ್ಲವಾದಲ್ಲಿ ಬೆಂಗಳೂರು ಮತ್ತೊಂದು ಬ್ರೆಜಿಲ್ ಆಗುವುದರಲ್ಲಿ ಸಂಶಯವಿಲ್ಲ ಎಂದಿದ್ದಾರೆ. ಈ ಕುರಿತು ಎಚ್‌ಡಿ ಕುಮಾರಸ್ವಾಮಿ ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ.

ಸಚಿವ ಡಾ.ಕೆ.ಸುಧಾಕರ್ ಪತ್ನಿ ಹಾಗೂ ಪುತ್ರಿಗೂ ಕೊರೊನಾವೈರಸ್ ಪಾಸಿಟಿವ್ಸಚಿವ ಡಾ.ಕೆ.ಸುಧಾಕರ್ ಪತ್ನಿ ಹಾಗೂ ಪುತ್ರಿಗೂ ಕೊರೊನಾವೈರಸ್ ಪಾಸಿಟಿವ್

ಕರ್ನಾಟಕದಲ್ಲಿ 9399 ಕೊರೊನಾ ಸೋಂಕಿತರಿದ್ದಾರೆ, 5730 ಮಂದಿ ಗುಣಮುಖರಾಗಿದ್ದಾರೆ.3523 ಪ್ರಕರಣಗಳು ಸಕ್ರಿಯವಾಗಿವೆ. ಒಟ್ಟು 142 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಒಟ್ಟು 1398 ಪ್ರಕರಣಗಳಿವೆ, ಹೊಸದಾಗಿ ಜೂನ್ 22 ರಂದು 126 ಪ್ರಕರಣಗಳು ಪತ್ತೆಯಾಗಿವೆ. 67 ಮಂದಿ ಮೃತಪಟ್ಟಿದ್ದಾರೆ.

ಜನರ ಪ್ರಾಣದ ಜೊತೆ ಚೆಲ್ಲಾಟ ನಿಲ್ಲಿಸಿ

ಜನರ ಪ್ರಾಣದ ಜೊತೆ ಚೆಲ್ಲಾಟ ನಿಲ್ಲಿಸಿ

ಜನರ ಪ್ರಾಣದ ಜೊತೆ ಚೆಲ್ಲಾಟ ನಿಲ್ಲಿಸಿ. ಕೆಲವೇ ಪ್ರದೇಶಗಳಲ್ಲಿ ಸೀಲ್ ಡೌನ್ ಲಾಕ್ ಡೌನ್ ಮಾಡಿದರೆ ಪ್ರಯೋಜನವಿಲ್ಲ.‌ ಬೆಂಗಳೂರು ನಿವಾಸಿಗಳು ಬದುಕುಳಿಯಬೇಕಾದರೆ ಈ ಕೂಡಲೇ ಕನಿಷ್ಟ 20 ದಿನ‌ ಸಂಪೂರ್ಣ ಲಾಕ್ ಡೌನ್ ಮಾಡಿ. ಇಲ್ಲವಾದಲ್ಲಿ ಬೆಂಗಳೂರು ಮತ್ತೊಂದು ಬ್ರೆಜಿಲ್ ಆಗಲಿದೆ. ಜನರ ಆರೋಗ್ಯ ಮುಖ್ಯವೇ ಹೊರತು ಆರ್ಥಿಕತೆಯಲ್ಲ ಎಂದು ಟ್ವೀಟ್ ಮಾಡಿದ್ದಾರೆ.

ಬಡವರು, ಕಾರ್ಮಿಕರಿಗೆ ಕೂಡಲೇ ಪಡಿತರ ವಿತರಿಸಿ

ಬಡವರು, ಕಾರ್ಮಿಕರಿಗೆ ಕೂಡಲೇ ಪಡಿತರ ವಿತರಿಸಿ

ಬಡವರು, ಕಾರ್ಮಿಕರಿಗೆ ಕೂಡಲೇ ಪಡಿತರ ವಿತರಿಸಿ. ರಾಜ್ಯದ 50 ಲಕ್ಷ ಮಂದಿ ಶ್ರಮಿಕ ವರ್ಗಕ್ಕೆ ತಲಾ ಐದು ಸಾವಿರ ರೂಪಾಯಿ ಪರಿಹಾರ ನೀಡಬೇಕು. ಚಾಲಕರು, ನೇಕಾರರು, ಮಡಿವಾಳರು ಸೇರಿದಂತೆ ವಿವಿಧ ವರ್ಗಕ್ಕೆ ರಾಜ್ಯ ಸರ್ಕಾರ ಈಗಾಗಲೇ ಘೋಷಿಸಿರುವ ಪರಿಹಾರ ದಕ್ಕಿಲ್ಲ.

ಕೇವಲ ಪ್ಯಾಕೇಜ್ ಘೋಷಣೆ ಮಾಡಿದರೆ ಸಾಲದು

ಕೇವಲ ಪ್ಯಾಕೇಜ್ ಘೋಷಣೆ ಮಾಡಿದರೆ ಸಾಲದು

ಬರೀ ಪ್ಯಾಕೇಜ್ ಘೋಷಣೆ ಮಾಡಿದರೆ ಸಾಲದು. ಅದರ ಅನುಷ್ಠಾನಕ್ಕೆ ತಕ್ಷಣ ಕಾರ್ಯೋನ್ಮುಖವಾಗಬೇಕು. ಪ್ಯಾಕೇಜ್ ಘೋಷಣೆ ಮಾಡಿ, ಸರ್ಕಾರ ಅಂಗೈಯಲ್ಲಿ ಅರಮನೆ ತೋರಿಸಬಾರದು.

ಸಂಕಷ್ಟದಲ್ಲಿರುವವರ ರಕ್ಷಣೆ ಆದ್ಯ ಕರ್ತವ್ಯವಾಗಬೇಕು

ಸಂಕಷ್ಟದಲ್ಲಿರುವವರ ರಕ್ಷಣೆ ಆದ್ಯ ಕರ್ತವ್ಯವಾಗಬೇಕು

ಕೊವಿಡ್ -19 ಸಾಂಕ್ರಾಮಿಕ ರೋಗದ ಕಷ್ಟದ ಈ ದಿನಗಳಲ್ಲಿ ಸಂಕಷ್ಟದಲ್ಲಿರುವವರ ರಕ್ಷಣೆ ಮಾಡುವುದು ಸರ್ಕಾರದ ಆದ್ಯ ಕರ್ತವ್ಯವಾಗಿರುತ್ತದೆ. ಮಾನ್ಯ ಮುಖ್ಯಮಂತ್ರಿಗಳು ಈ ನಿಟ್ಟಿನಲ್ಲಿ ಗಮನ ಹರಿಸುತ್ತಾರೆ ಎಂಬ ನಂಬಿಕೆ ನನ್ನದು.

English summary
Former Chief Minister HD Kumaraswamy Tweeted that Lockdown in certain Bengaluru areas is not usefull but it should be a full lockdown for at least 20 days, otherwise Bengaluru will not become another Brazil.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X