Bengaluru Roads: ರಸ್ತೆ ಮೂಲಸೌಕರ್ಯ ವಿರುದ್ಧ ಆಕ್ರೋಶ ಬೆನ್ನಲ್ಲೆ ಎಚ್ಚೆತ್ತ GBA, ಆಯುಕ್ತರ ಖಡಕ್ ಸೂಚನೆ
ಬೆಂಗಳೂರು, ಸೆಪ್ಟಂಬರ್ 18: ಬೆಂಗಳೂರಿನಲ್ಲಿ ರಸ್ತೆಗುಂಡಿಗಳ ಸಮಸ್ಯೆಗಳಿಗೆ ಜನರು ಬೇಸತ್ತಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿದ್ದ ಪ್ರಮುಖ 'ಬ್ಲಾಕ್ ಬಕ್' ಕಂಪನಿಯೊಂದು ನಗರ ತೊರೆಯುವುದಾಗಿ ತಿಳಿಸಿತ್ತು. ಆಂಧ್ರಪ್ರದೇಶ ಸರ್ಕಾರದ ಪ್ರತಿನಿಧಿಯೊಬ್ಬರು ತಮ್ಮ ರಾಜ್ಯಕ್ಕೆ ಬರುವಂತೆ ಕಂಪನಿಗೆ ಆಹ್ವಾನ ಇಟ್ಟಿದೆ. ನಗರದ ರಸ್ತೆ ಮೂಲಸೌಕರ್ಯ ಬಗ್ಗೆ ವಾಹನ ಸವಾರರು ಅಸಮಾಧಾನ ಹೊರ ಹಾಕುತ್ತಲೇ ಇದ್ದಾರೆ. ಇದೀಗ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ರಸ್ತೆಗುಂಡಿ ಸಮಸ್ಯೆ ನಿವಾರಣೆಗೆ ಕಟ್ಟುನಿಟ್ಟಿನ ಕ್ರಮ ಜರುಗಿಸಲು ಮುಂದಾಗಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಆಯಾ ನಗರ ಪಾಲಿಕೆಗಳಲ್ಲಿ ತ್ವರಿತಗತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಬಿಎ ವ್ಯಾಪ್ತಿಯ ರಸ್ತೆ ಗುಂಡಿಗಳನ್ನು ಮುಚ್ಚುವ ಸಲುವಾಗಿ ಇಂದು ವರ್ಚ್ಯುವಲ್ ಮೂಲಕ 5 ನಗರ ಪಾಲಿಕೆಗಳ ಅಧಿಕಾರಿಗಳೊಂದಿಗೆ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. 5 ನಗರ ಪಾಲಿಕೆಗಳಿಗೆ ತಲಾ 25 ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದೆ. ಆ ಅನುದಾನದಲ್ಲಿಯೇ ಹಣವನ್ನು ಹೊಂದಿಸಿಕೊಂಡು ರಸ್ತೆ ಗುಂಡಿಗಳನ್ನು ಮುಚ್ಚುವಂತೆ ನಿರ್ದೇಶಿಸಿದರು.

ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಎಷ್ಟು ರಸ್ತೆಗಳು ಬರಲಿವೆ, ರಸ್ತೆ ಗುಂಡಿಗಳ ಸಂಖ್ಯೆ, ಗುತ್ತಿಗೆದಾರರನ್ನು ನಿಯೋಜಿಸಿರುವ, ರಸ್ತೆ ಗುಂಡಿಗಳನ್ನು ಮುಚ್ಚಲು ತಗಲುವ ವೆಚ್ಚ, ಕೆಲಸ ಕೈಗೊಳ್ಳುವ ಮಾದರಿಯ ಕುರಿತು ವಿವರಣಾತ್ಮಕ ವರದಿ ನೀಡಬೇಕು. ಇನ್ನೂ ಬೆಂಗಳೂರಿನ ಆರ್ಟಿರಿಯಲ್, ಸಬ್-ಆರ್ಟಿರಿಯಲ್ ಹಾಗೂ ವಾರ್ಡ್ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ಇದೇ ಶುಕ್ರವಾರದಿಂದ ಪರಿಣಾಮಕಾರಿಯಾಗಿ ಗುಣಮಟ್ಟವನ್ನು ಕಾಪಾಡಿಕೊಂಡು ಮುಚ್ಚಲು ಸೂಚನೆ ಕೊಟ್ಟಿದ್ದಾರೆ.
ಇಂಡೆಂಟ್ ನೀಡಿ ಡಾಂಬರು ಪಡೆಯಿರಿ
ನಗರದಲ್ಲಿ ಆರ್ಟಿರಿಯಲ್, ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿನ ಗುಂಡಿಗಳು ಹಾಗು ಹಾಳಾದ ಭಾಗಗಳಿಗೆ ಡಾಂಬರೀಕರಣ ಮಾಡಲು ಡಾಂಬರು ಮಿಶ್ರಣ ಘಟಕದಿಂದ ಅವಶ್ಯಕ ಡಾಂಬರನ್ನು ಪಡೆದು ಕಾಲಮಿತಿಯೊಳಗಾಗಿ ರಸ್ತೆ ಗುಂಡಿಗಳನ್ನು ಮುಚ್ಚಬೇಕು. ಈ ಸಂಬಂಧ ಉತ್ತರ ನಗರ ಪಾಲಿಕೆಯಿಂದ ಘಟಕಕ್ಕೆ ನೋಡಲ್ ಅಧಿಕಾರಿಯನ್ನು ನಿಯೋಜಿಸಿ, ಆಯಾ ಪಾಲಿಕೆಗಳಿಂದ ಅವಶ್ಯಕತೆಗೆ ಅನುಸಾರ ಇಂಡೆಂಟ್ ಸಲ್ಲಿಸಿ, ಗುತ್ತಿಗೆದಾರರಿಂದ ಗುಂಡಿಗಳನ್ನು ಮುಚ್ಚಲು ಕ್ರಮವಹಿಸಬೇಕು.
ಕೇಂದ್ರ ನಗರ ಪಾಲಿಕೆಯ ಆಯುಕ್ತ ರಾಜೆಂದ್ರ ಚೋಳನ್ ಅವರ ಮಾತನಾಡಿ, ಕೇಂದ್ರ ನಗರ ಪಾಲಿಕೆಯಲ್ಲಿ ಈಗಾಗಲೇ ರಸ್ತೆಗಳಿಗೆ ನೋಡಲ್ ಅಧಿಕಾರಿಗಳನ್ನು ನಿಯೋಜಿಸಿದ್ದಾರೆ. ರಸ್ತೆ ಗುಂಡಿಗಳನ್ನು ಸಮಗ್ರ ಯೋಜನೆಯನ್ನು ರೂಪಿಸಿಕೊಳ್ಳಲಾಗಿದೆ. ಅದರಂತೆ, 30ಕ್ಕೂ ಹೆಚ್ಚು ತಂಡಗಳನ್ನು ನಿಯೋಜನೆ ಮಾಡಿಕೊಂಡು, ಪ್ರತಿ ರಸ್ತೆಗೂ ಪ್ರತ್ಯೇಕ ಏಜೆನ್ಸಿಯನ್ನು ನಿಗದಿಪಡಿಸಿ, ಗಡುವನ್ನು ನೀಡಿ ಸಾಮೂಹಿಕವಾಗಿ ರಸ್ತೆ ಗುಂಡಿಗಳನ್ನು ಮುಚ್ಚಲಾಗುವುದಾಗಿ ಎಂದು ಹೇಳಿದ್ದಾರೆ.












Click it and Unblock the Notifications