Get Updates
Get notified of breaking news, exclusive insights, and must-see stories!

ಬೆಂಗಳೂರಲ್ಲಿ ವಿದ್ಯುತ್ ಚಾಲಿತ ವಾಹನಗಳಿಗಾಗಿ 112 ಚಾರ್ಜಿಂಗ್ ಕೇಂದ್ರ

ಬೆಂಗಳೂರು, ಫೆಬ್ರವರಿ 2: ನಗರದಲ್ಲಿ ವಿದ್ಯುತ್ ಚಾಲಿತ ವಾಹನಗಳನ್ನು ಪ್ರೋತ್ಸಾಹಿಸುವುದು ಹಾಗೆಯೇ ವಾಯು ಮಾಲಿನ್ಯವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ 112 ಇ ಚಾರ್ಜಿಂಗ್ ಕೇಂದ್ರವನ್ನು ತೆರೆಯಲು ರಾಜ್ಯ ಸರ್ಕಾರ ಮುಂದಾಗಿದೆ.

112 ನಿಲ್ದಾಣಗಳಲ್ಲಿ 12 ನೇರ ಚಾರ್ಜಿಂಗ್ ಕೇಂದ್ರಗಳಾಗಿದ್ದು ಉಳಿದ ಕೇಂದ್ರಗಳು ಎಸಿ ಕೇಂದ್ರಗಳು ಅಕ್ಟೋಬರ್ ಅಥವಾ ನವೆಂಬರ್ ವೇಳೆಗೆ ಸಿದ್ದವಾಗಲಿದೆ. ಪ್ರತಿ ಎಸಿ ಕೇಂದ್ರಗಳು ತಲಾ 1 ಲಕ್ಷ ರೂಪಾಯಿ ವೆಚ್ಚದಲ್ಲಿ ತಯಾರಾಗುತ್ತಿದೆ.

ವಿದ್ಯುತ್ ಚಾರ್ಜ್ ಮಾಡುವ 12 ಕೇಂದ್ರಗಳನ್ನು ಸ್ಥಾಪಿಸುವ ಕೆಲಸ ವಿವಿಧ ಸ್ಥಳಗಳಲ್ಲಿ ಕಳೆದ ವರ್ಷ ಆರಂಭಗೊಂಡಿದ್ದು ಅದು ಜೂನ್ ವೇಳೆಗೆ ಮುಕ್ತಾಯವಾಗುವ ನಿರೀಕ್ಷೆಯಿದೆ.

Bengaluru to get 112 charging stations for electric vehicles

ಇತ್ತೀಚೆಗೆ ಬೆಂಗಳೂರು ವಿದ್ಯುತ್ ಪೂರೈಕೆ ನಿಗಮ 100 ಇವಿ ಚಾರ್ಜಿಂಗ್ ಕೇಂದ್ರಗಳನ್ನು ಆಯ್ದ ಸರ್ಕಾರಿ ಕೇಂದ್ರಗಳಲ್ಲಿ ಸ್ಥಾಪಿಸಲು ಟೆಂಡರ್ ಕರೆಯಲಾಗಿತ್ತು. ಎಸಿ ಚಾರ್ಜಿಂಗ್ ವ್ಯವಸ್ಥೆಯನ್ನು ಸರ್ಕಾರಿ ಕಚೇರಿಗಳು, ಶಿಕ್ಷಣ ಸಂಸ್ಥೆಗಳು, ಬಿಬಿಎಂಪಿ, ಬಿಎಂಆರ್ ಸಿಎಲ್, ಬಿಎಂಟಿಸಿಗಳಲ್ಲಿ ಅಳವಡಿಸಲಾಗುತ್ತಿದ್ದು ಸರ್ಕಾರಿ ನೌಕರರು ಎಲೆಕ್ಟ್ರಾನಿಕ್ ವಾಹನಗಳ ಸವಾರರು ತಮ್ಮ ಬ್ಯಾಟರಿಗಳನ್ನು ಸುಲಭವಾಗಿ ಚಾರ್ಜ್ ಮಾಡಿಕೊಳ್ಳಬಹುದಾಗಿದೆ.

ದ್ವಿಚಕ್ರ ವಾಹನಗಳ ಚಾರ್ಜಿಂಗ್ ಗೆ ಒಂದೂವರೆ ಗಂಟೆಗಳು ಮತ್ತು ನಾಲ್ಕು ಚಕ್ರದ ವಾಹನಗಳ ಚಾರ್ಜಿಂಗ್ ಗೆ 5 ರಿಂದ 6 ಗಂಟೆಗಳು ಬೇಕಾಗಬಹುದು. 12 ನೇರ ಚಾರ್ಜಿಂಗ್ ಕೇಂದ್ರಗಳ ಸ್ಥಾಪನೆಯ ವೆಚ್ಚ ಸುಮಾರು 3.94 ಕೋಟಿ ವೆಚ್ಚವಾಗಬಹುದು ಎಂದು ಅಂದಾಜಿಸಲಾಗಿದೆ. ಮತ್ತು ಈ ಕೇಂದ್ರಗಳಲ್ಲಿ ನಾಲ್ಕು ಚಕ್ರದ ವಾಹನಗಳನ್ನು ಕೇವಲ 90 ನಿಮಿಷಗಳಲ್ಲಿ ಚಾರ್ಜ್ ಮಾಡಬಹುದಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+