ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನ ಪ್ರತಿ ಕ್ಷೇತ್ರದಲ್ಲೂ ಒಂದೊಂದು ಸರ್ಕಾರಿ ಆಸ್ಪತ್ರೆ ನಿರ್ಮಾಣ

|
Google Oneindia Kannada News

ಬೆಂಗಳೂರು, ಜೂನ್ 03: ಕೊರೊನಾ ಸೋಂಕು ಹೆಚ್ಚಳವಾದ ಹಿನ್ನೆಲೆಯಲ್ಲಿ ನಗರದ ಆಸ್ಪತ್ರೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಉಂಟಾಗಿದೆ.

Recommended Video

ಭಾರತೀಯರಿಗೆ ಹೊಸ ಭರವಸೆ ಮೂಡಿಸಿದ ರಷ್ಯಾ ಲಸಿಕೆ | Sputnik light | Oneindia Kannada

ಕೆಲವು ಆಸ್ಪತ್ರೆಗಳಲ್ಲಿ ಆಮ್ಲಜನಕವಿಲ್ಲ, ಇನ್ನು ಕೆಲವು ಆಸ್ಪತ್ರೆಗಳಲ್ಲಿ ಹಾಸಿಗೆಗಲೇ ಖಾಲಿ, ಇನ್ನಷ್ಟು ಆಸ್ಪತ್ರೆಗಳಲ್ಲಿ ನರ್ಸ್‌ಗಳ ಕೊರತೆ ಹೀಗೆ ಹತ್ತು ಹಲವು ಸಮಸ್ಯೆಗಳು ಕಾಡುತ್ತಿವೆ.

ಕೋಲಾರ; 80 ಆಕ್ಸಿಜನ್ ಬೆಡ್ ಕೋವಿಡ್ ಆಸ್ಪತ್ರೆ ಉದ್ಘಾಟನೆಕೋಲಾರ; 80 ಆಕ್ಸಿಜನ್ ಬೆಡ್ ಕೋವಿಡ್ ಆಸ್ಪತ್ರೆ ಉದ್ಘಾಟನೆ

ಹೀಗಾಗಿ ಶಾಸಕರು ಹಾಗೂ ಸಚಿವರು ತಮ್ಮ ಕ್ಷೇತ್ರಗಳಲ್ಲಿ ಒಂದು ಅಥವಾ ಎರಡು ಸರ್ಕಾರಿ ಆಸ್ಪತ್ರೆಗೆ ನಿರ್ಮಿಸುವ ಕುರಿತು ಸರ್ಕಾರಕ್ಕೆ ಬೇಡಿಕೆ ಇಟ್ಟಿದ್ದಾರೆ. ಬೆಂಗಳೂರಲ್ಲಿ ಮುಂದಿನ 2 ಅಥವಾ 3 ವರ್ಷಗಳಲ್ಲಿ 100 ಹಾಸಿಗೆಗಳುಳ್ಳ ಕನಿಷ್ಠ 20 ಸರ್ಕಾರಿ ಆಸ್ಪತ್ರೆಗಳ ನಿರ್ಮಾಣದ ಭರವಸೆ ಹೊಂದಲಾಗಿದೆ.

Bengaluru To Get One Govt Hospital In Each Constituency Soon

ಒಂದೊಮ್ಮೆ ಪ್ರತಿ ಕ್ಷೇತ್ರದಲ್ಲೂ ಒಂದೊಂದು ಸರ್ಕಾರಿ ಆಸ್ಪತ್ರೆಗಳು ನಿರ್ಮಾಣಗೊಂಡರೆ ಆ ಕ್ಷೇತ್ರದ ಜನರು ಎಲ್ಲೋ ಇರುವ ಖಾಸಗಿ ಆಸ್ಪತ್ರೆಗಳ ಮೊರೆ ಹೋಗುವುದು ತಪ್ಪುತ್ತದೆ.

ಈಗ ಕೆಲವು ಸರ್ಕಾರಿ ಆಸ್ಪತ್ರೆಗಳು ಬಿಬಿಎಂಪಿ ವ್ಯಾಪ್ತಿಗೆ ಬರುತ್ತದೆ, ಕೆಲವು ವೈದ್ಯಕೀಯ ಶಿಕ್ಷಣ ಇನ್ನೂ ಕೆಲವು ಆರೋಗ್ಯ ಇಲಾಖೆ ವ್ಯಾಪ್ತಿಗೆ ಬರುತ್ತದೆ. ನಗರದಲ್ಲಿ 140 ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿವೆ.

ಎಲ್ಲಾ 27 ಕ್ಷೇತ್ರಗಳಲ್ಲೂ ಒಂದೊಂದು ಸರ್ಕಾರಿ ಆಸ್ಪತ್ರೆ ನಿರ್ಮಿಸುವ ಕುರಿತು ಶಾಸಕರು ಹಾಗೂ ಸಚಿವರು ಒಲವು ಹೊಂದಿದ್ದಾರೆ. ಕೆಲವು ದಿನಗಳ ಹಿಂದೆ ಸಚಿವ ಅರವಿಂದ್ ಲಿಂಬಾವಳಿ ಮಹಾದೇವಪುರದಲ್ಲಿ 250 ಹಾಸಿಗೆಗಳುಳ್ಳ ಆಸ್ಪತ್ರೆ ನಿರ್ಮಿಸುವುದಾಗಿ ತಿಳಿಸಿದ್ದರು. ದಾಸರಹಳ್ಳಿ ಶಾಸಕ ಮಂಜುನಾಥ್ 100 ಹಾಸಿಗೆಗಳುಳ್ಳ ಆಸ್ಪತ್ರ ನಿರ್ಮಿಸುವುದಾಗಿ ಭರವಸೆ ನೀಡಿದ್ದರು.

English summary
With Covid exposing the failing health infrastructure of the city with patients facing a shortage of beds and ICUs, MLAs from Bengaluru, including ministers, are proposing one or two government hospitals in their constituency.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X