ಬೆಂಗಳೂರಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ 'ನಮ್ಮೂರ ಹೆಮ್ಮೆ' ಸನ್ಮಾನ: ಅರ್ಜಿ ಸಲ್ಲಿಕೆಗೆ ಆ.25 ಕೊನೆ ದಿನ

ಬೆಂಗಳೂರು: ನಾಡಿನ ಪ್ರತಿಭಾವಂತ ಯುವಕರು ನಮ್ಮೂರ ಹೆಮ್ಮೆ, ನಮ್ಮ ಸಮಾಜದ ಆಸ್ತಿ. ಹೀಗಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮತ್ತು ಬೆಂಗಳೂರು ಜಿಲ್ಲಾ ಪಂಚಾಯತ್ ವತಿಯಿಂದ ಬೆಂಗಳೂರಿನಲ್ಲಿ ನೆಲೆಸಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ 'ನಮ್ಮೂರ ಹೆಮ್ಮೆ ಪೌರ ಸನ್ಮಾನ' ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ.

ಎಸ್ಎಸ್ಎಲ್ಸಿಯಲ್ಲಿ 621 ಅಥವಾ ಅದಕ್ಕಿಂತ ಹೆಚ್ಚು ಅಂಕಗಳು, ಪಿಯುಸಿಯಲ್ಲಿ 596 ಅಥವಾ ಹೆಚ್ಚು ಅಂಕಗಳು ಮತ್ತು ಸೆಂಟ್ರಲ್ ಸಿಲಬಸ್‌ನ 10 ಮತ್ತು 12 ನೇ ತರಗತಿಯಲ್ಲಿ 496 ಅಥವಾ ಅದಕ್ಕಿಂತ ಹೆಚ್ಚು ಅಂಕ ಪಡೆದಿರುವಂತಹ ವಿದ್ಯಾರ್ಥಿಗಳಿಗೆ ನಾವು 'ನಮ್ಮೂರ ಹೆಮ್ಮೆ' ಸನ್ಮಾನ ಮಾಡಿ ಗೌರವಿಸಲಾಗುವುದು ಎಂದರು.

Bengaluru

ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳು ಆಗಸ್ಟ್ 25ರ ಒಳಗಡೆ ಅರ್ಜಿ ಸಲ್ಲಿಸಬೇಕು‌. ಆಗಸ್ಟ್ 29ರಂದು ಜಿಬಿಎ ಸೇರಿದಂತೆ ನಾವೆಲ್ಲ ಸನ್ಮಾನ ಕಾರ್ಯಕ್ರಮ ನಡೆಸಲಿದ್ದೇವೆ. ಶೈಕ್ಷಣಿಕವಾಗಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡುವುದು ನಮಗೆ ಒಂದು ಕಡೆ ಸಂತೋಷ, ಆದರೆ ಅದರ ಜೊತೆಗೆ ಅಂತಹ ವಿದ್ಯಾರ್ಥಿಗಳ ಪರಿಶ್ರಮವನ್ನ ಗುರುತಿಸಿ ಅವರಿಗೆ ಗೌರವ ನೀಡೋದರ ಜೊತೆಗೆ ಸಮಾಜದ ಇತರ ಯುವಕರಿಗೂ ಕೂಡ ಒಂದು ಸ್ಫೂರ್ತಿ ನೀಡುವಂತದ್ದು ಈ ಕಾರ್ಯಕ್ರಮದ ಉದ್ದೇಶ. ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳ ಜೊತೆಗೆ ಅವರ ಕುಟುಂಬದವರನ್ನು ನಾವು ಆಹ್ವಾನಿಸುತ್ತಿದ್ದೇವೆ. ಬನ್ನಿ ಪ್ರತಿಭೆ ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳ ಸಾಧನೆಯನ್ನು ಸಂಭ್ರಮಿಸೋಣ ಎಂದು ಸಚಿವರು ಕರೆ ನೀಡಿದ್ದಾರೆ.

SIR-2026 ತರಬೇತಿ ಕಾರ್ಯಾಗಾರ

ವಿಶೇಷ ಸಮಗ್ರ ಪರಿಷ್ಕರಣೆ-2026 (SIR-2026)ರ ಅಂಗವಾಗಿ ಕರಡು ಮತದಾರರ ಪಟ್ಟಿ ಪ್ರಕಟಣೆ ಹಾಗೂ ಕರಡು ಪಟ್ಟಿ ಪ್ರಕಟಿಸಲಾಗಿದೆ. ಇದೀಗ ನೋ ಮ್ಯಾಪಿಂಗ್ ಮತ್ತು ಆರ್ಟಿಕಲ್ ಡೆಸ್ಕ್ರಿಪೆನ್ಸಿಸ್ ಅಂತ ಮತದಾರರಿಗೆ ನೋಟಿಸ್ ನೀಡುವ ಜವಾಬ್ದಾರಿ, ನಂತರದ ವಿಲೇವಾರಿ ಕಾರ್ಯಚಟುವಟಿಕೆಗಳ ಕುರಿತು ಹೆಚ್ಚುವರಿ ಸಹಾಯಕ ಮತದಾರರ ನೋಂದಣಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ ನಡೆಸಲಾಯಿತು.

ಬೆಂಗಳೂರಿನ ಯಲಹಂಕದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ತರಬೇತಿ ಕಾರ್ಯಾಗಾರದಲ್ಲಿ ಜಂಟಿ ಮುಖ್ಯ ಚುನಾವಣಾಧಿಕಾರಿ ಯೋಗೇಶ್ವರ್ ಅವರು ಮಾತನಾಡಿದರು. SIR-2026ರ ಅನುಷ್ಠಾನ, ಕರಡು ಮತದಾರರ ಪಟ್ಟಿ ಪ್ರಕಟಣೆ ಹಾಗೂ ನಂತರದ ಕಾರ್ಯಚಟುವಟಿಕೆಗಳ ಕುರಿತು ಅಧಿಕಾರಿಗಳಿಗೆ ಅಗತ್ಯ ಮಾರ್ಗದರ್ಶನ ನೀಡಿದರು.

ಕಾರ್ಯಾಗಾರದಲ್ಲಿ ಅಪರ ಜಿಲ್ಲಾ ಚುನಾವಣಾಧಿಕಾರಿ, ಬೆಂಗಳೂರು ಉತ್ತರ ಹಾಗೂ ಬೆಂಗಳೂರು ಉತ್ತರ ನಗರ ಪಾಲಿಕೆಯ ಆಯುಕ್ತರಾದ ಶ್ರೀ ಪೊಮ್ಮಲ ಸುನೀಲ್ ಕುಮಾರ್ ಅವರು ಹೆಚ್ಚುವರಿ ಸಹಾಯಕ ಮತದಾರರ ನೋಂದಣಾಧಿಕಾರಿಗಳಿಗೆ ಮಹತ್ವದ ಸೂಚನೆ ಕೊಟ್ಟರು. ಹೆಚ್ಚುವರಿ ಸಹಾಯಕ ಮತದಾರರ ನೋಂದಣಾಧಿಕಾರಿಗಳು BLOಗಳ ಕಾರ್ಯನಿರ್ವಹಣೆಯ ಮೇಲೆ ನಿರಂತರ ನಿಗಾ ವಹಿಸಿ, ಅವರಿಗೆ ಅಗತ್ಯ ಮಾರ್ಗದರ್ಶನ ನೀಡಬೇಕು. BLOಗಳು ತಮಗೆ ವಹಿಸಿರುವ ಜವಾಬ್ದಾರಿಗಳನ್ನು ಸಂಪೂರ್ಣವಾಗಿ ಅರ್ಥಮಾಡಿಕೊಂಡು, ಯಾವುದೇ ಲೋಪಗಳಿಗೆ ಅವಕಾಶವಿಲ್ಲದಂತೆ ಕಾರ್ಯನಿರ್ವಹಿಸುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದರು.

SIR ಕಾರ್ಯದಲ್ಲಿ ಗಂಭೀರತೆ ಮತ್ತು ಜವಾಬ್ದಾರಿಯ ಕೊರತೆಯಿಂದ ಸಣ್ಣಪುಟ್ಟ ಲೋಪಗಳೂ ಸಾರ್ವಜನಿಕರಿಂದ ಹೆಚ್ಚಿನ ಅಹವಾಲುಗಳಿಗೆ ಕಾರಣವಾಗಬಹುದು. ಇದರಿಂದ ಸಾರ್ವಜನಿಕರಿಗೆ ಮಾತ್ರವಲ್ಲದೆ ಸಂಬಂಧಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಗೂ ಅನಗತ್ಯ ತೊಂದರೆ ಉಂಟಾಗುವ ಸಾಧ್ಯತೆ ಇದೆ. ಆದ್ದರಿಂದ ಪ್ರತಿಯೊಬ್ಬ ಅಧಿಕಾರಿಯೂ ಹಾಗೂ ಸಿಬ್ಬಂದಿಯೂ ತಮಗೆ ವಹಿಸಿರುವ ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.

ಗೊಂದಲವಿದ್ದಲ್ಲಿ ಸೂಕ್ತ ಮಾರ್ಗದರ್ಶನ

ಅಧಿಕಾರಿಗಳು ಮತ್ತು ಸಿಬ್ಬಂದಿಗೆ ತಮ್ಮ ಕರ್ತವ್ಯ ಅಥವಾ ಕಾರ್ಯವಿಧಾನದ ಕುರಿತು ಸ್ಪಷ್ಟತೆ ಇಲ್ಲದಿದ್ದಲ್ಲಿ, ಸ್ವಯಂ ನಿರ್ಧಾರ ಕೈಗೊಂಡು ತಪ್ಪುಗಳಿಗೆ ಅವಕಾಶ ನೀಡದೆ ಸಂಬಂಧಿಸಿದ ಮೇಲಾಧಿಕಾರಿಗಳಿಂದ ಮಾರ್ಗದರ್ಶನ ಪಡೆದು ಕಾರ್ಯ ನಿರ್ವಹಿಸಬೇಕು ಎಂದು ಅಪರ ಜಿಲ್ಲಾ ಚುನಾವಣಾಧಿಕಾರಿ, ಬೆಂಗಳೂರು ಉತ್ತರ ಹಾಗೂ ಬೆಂಗಳೂರು ಉತ್ತರ ನಗರ ಪಾಲಿಕೆಯ ಆಯುಕ್ತರು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+