ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನಲ್ಲಿ 5 ನೇ ಜಾಗತಿಕ ಸೇವಾ ವಲಯದ ಪ್ರದರ್ಶನ

|
Google Oneindia Kannada News

ಬೆಂಗಳೂರು ನವೆಂಬರ್‌ 06: ಗ್ಲೋಬಲ್ ಎಕ್ಸಿಬಿಷನ್ ಆನ್ ಸರ್ವೀಸಸ್ ಮಾಹಿತಿ ತಂತ್ರಜ್ಞಾನ ಬೆಂಗಳೂರಿನಲ್ಲಿ 2019 ರ ನವೆಂಬರ್ 26 ರಿಂದ 28 ರವರೆಗೆ ನಡೆಯಲಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಮೂರು ದಿನಗಳ ಈ ಪ್ರದರ್ಶನದಲ್ಲಿ ಜಾಗತಿಕ ಮಟ್ಟದ ಸೇವಾ ಸಂಸ್ಥೆಗಳು ಪಾಲ್ಗೊಳ್ಳಲಿದ್ದು, ಎಸ್ಇಪಿಸಿ ಮತ್ತು ಸಿಐಐ ಸಹಯೋಗವನ್ನು ನೀಡಲಿವೆ.

ಈ ಪ್ರದರ್ಶನಕ್ಕೆ ಸಂಬಂಧಿಸಿದಂತೆ ನವದೆಹಲಿಯಲ್ಲಿ ಕರ್ಟೇನ್ ರೈಸರ್ ಕಾರ್ಯಕ್ರಮ ನಡೆಯಿತು. ಇದರಲ್ಲಿ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಸಚಿವರಾದ ಪಿಯೂಷ್‌ ಗೋಯೆಲ್‌, ಕರ್ನಾಟಕದ ವಾಣಿಜ್ಯ ಮತ್ತು ಕೈಗಾರಿಕೆ ಸಚಿವರಾದ ಜಗದೀಶ್ ಶೆಟ್ಟರ್, ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತ, ಕೇಂದ್ರ ಸರ್ಕಾರದ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಜಂಟಿ ಕಾರ್ಯದರ್ಶಿ ದರ್ಪಣ್ ಜೈನ್ ಸೇರಿದಂತೆ ಇನ್ನಿತರೆ ಉನ್ನತಾಧಿಕಾರಿಗಳು ಪಾಲ್ಗೊಂಡಿದ್ದರು.

ಕರ್ಟೇನ್ ರೈಸರ್ ಗೆ ಚಾಲನೆ ನೀಡಿ ಮಾತನಾಡಿದ ರೈಲ್ವೇ ಮತ್ತು ವಾಣಿಜ್ಯ ಹಾಗೂ ಕೈಗಾರಿಕೆ ಸಚಿವ ಪಿಯೂಷ್ ಗೋಯಲ್ ಅವರು, "ಭಾರತೀಯ ಆರ್ಥಿಕತೆ ಬೆಳವಣಿಗೆಯೊಂದಿಗೆ ಸೇವಾ ವಲಯವು ಪ್ರಮುಖವಾದ ಪಾತ್ರ ವಹಿಸುತ್ತಿದೆ. ಈ ದಿಸೆಯಲ್ಲಿ ಭಾರತದ ಸೇವಾವಲಯದಲ್ಲಿ ಹೂಡಿಕೆ ಮಾಡುವಂತೆ ಮತ್ತು ಇಲ್ಲಿರುವ ಸೌಲಭ್ಯಗಳನ್ನು ಬಳಸಿಕೊಂಡು ಈ ಕ್ಷೇತ್ರದ ಸರ್ವಾಂಗೀಣ ಪ್ರಗತಿಗೆ ಕಾರಣರಾಗಬೇಕೆಂದು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಹೂಡಿಕೆದಾರರಿಗೆ ಕರೆ ನೀಡಿದರು".

ಇಲಾಖೆ ಸಚಿವ ಜಗದೀಶ್ ಶೆಟ್ಟರ್

ಇಲಾಖೆ ಸಚಿವ ಜಗದೀಶ್ ಶೆಟ್ಟರ್

ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಸಚಿವ ಜಗದೀಶ್ ಶೆಟ್ಟರ್ ಅವರು, "ಸೇವಾ ವಲಯಕ್ಕೆ ಕರ್ನಾಟಕ ಸರ್ಕಾರ ಅಗತ್ಯ ಸೌಲಭ್ಯಗಳನ್ನು ನೀಡುತ್ತಿದೆ. ಈ ಮೂಲಕ ಕರ್ನಾಟಕ ಸೇವಾ ವಲಯದ ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿ ನಿಲ್ಲುತ್ತದೆ. ಶಿಕ್ಷಣ, ಯೋಗಕ್ಷೇಮ, ಪ್ರವಾಸೋದ್ಯಮ ಸೇರಿದಂತೆ ಇನ್ನಿತರೆ ಪ್ರಮುಖ ಕ್ಷೇತ್ರಗಳ ಅಭಿವೃದ್ಧಿಗೆ ಒತ್ತು ನೀಡುತ್ತಿದ್ದು, ಇದಕ್ಕಾಗಿ ಹತ್ತು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಭಾರತೀಯ ಆರ್ಥಿಕತೆ ಅಭಿವೃದ್ಧಿಗೆ ಪೂರಕವಾಗಿರುವ ರಾಜ್ಯದ ಸೇವಾ ವಲಯದಲ್ಲಿ ಬಂಡವಾಳ ಹೂಡಿಕೆಗೆ ನಮ್ಮ ಸರ್ಕಾರ ಎಲ್ಲಾ ರೀತಿಯ ನೆರವು, ಪ್ರೋತ್ಸಾಹ ಮತ್ತು ವಿಪುಲ ಅವಕಾಶಗಳನ್ನು ನೀಡಲಿದೆ" ಎಂದು ಹೂಡಿಕೆದಾರರಿಗೆ ಭರವಸೆ ನೀಡಿದರು.

ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತ

ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತ

ಇದೇ ವೇಳೆ ಮಾತನಾಡಿದ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತ ಅವರು, "ಕರ್ನಾಟಕ ರಾಜ್ಯದಲ್ಲಿ ಮಾಹಿತಿ ತಂತ್ರಜ್ಞಾನವಷ್ಟೇ ಬೆಳವಣಿಗೆ ಕಾಣುತ್ತಿಲ್ಲ. ಹಲವಾರು ಸೇವಾ ಕ್ಷೇತ್ರಗಳು ಪ್ರಗತಿಯ ಪಥದಲ್ಲಿ ಸಾಗುತ್ತಿವೆ. ಈ ದಿಸೆಯಲ್ಲಿ ಇಂತಹ ಕ್ಷೇತ್ರಗಳನ್ನು ಮತ್ತಷ್ಟು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಉದ್ಯಮಶೀಲತ್ವ ಮತ್ತು ಉದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದೆ" ಎಂದು ತಿಳಿಸಿದರು.

ವಿಶ್ವದ ಗಮನ ಸೆಳೆದ ನಗರ

ವಿಶ್ವದ ಗಮನ ಸೆಳೆದ ನಗರ

"ಜಾಗತಿಕ ಮಟ್ಟದಲ್ಲಿ ಕರ್ನಾಟಕ ನಿರಂತರವಾಗಿ ತನ್ನ ಅಸ್ತಿತ್ವವನ್ನು ಹೊಂದುತ್ತಲೇ ಬಂದಿದೆ. ಇಲ್ಲಿ ಜಾಗತಿಕ ಮಟ್ಟದ ಹಲವಾರು ಕಾರ್ಯಕ್ರಮಗಳು, ಟ್ರೆಂಡ್ ಗಳು ನಡೆಯುತ್ತಲೇ ಇರುತ್ತವೆ. ಈ ಮೂಲಕ ವಿಶ್ವದ ಗಮನ ಸೆಳೆದಿರುವ ನಗರ ಎಂಬ ಖ್ಯಾತಿಗೆ ಬೆಂಗಳೂರು ಪಾತ್ರವಾಗಿದೆ"ಎಂದು ಅವರು ಹೇಳಿದರು.

5ನೇ ಜಿಇಸಿ ಕರ್ನಾಟಕ

5ನೇ ಜಿಇಸಿ ಕರ್ನಾಟಕ

ಇದೇ ವೇಳೆ ಮಾತನಾಡಿದ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಜಂಟಿ ಕಾರ್ಯದರ್ಶಿ ದರ್ಪಣ್ ಜೈನ್ ಅವರು, "5ನೇ ಜಿಇಸಿ ಕರ್ನಾಟಕದಲ್ಲಿ ನಡೆಯುತ್ತಿರುವುದು ಸಂತಸದ ವಿಚಾರವಾಗಿದೆ. ಈ ಮೂಲಕ ಕರ್ನಾಟಕ ಭಾರತದ ಸೇವಾ ವಲಯದ ನಾಯಕನೆನಿಸಿಕೊಂಡಿದೆ. ಐಟಿ, ಮೂಲಸೌಕರ್ಯ ಅಥವಾ ಶಿಕ್ಷಣ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವ ರಾಜ್ಯವಾಗಿದೆ" ಎಂದು ತಿಳಿಸಿದರು.
---------

English summary
5th Edition of the forthcoming Global Exhibition on Services (GES) 2019 flagged off on an exuberant note this afternoon at Hotel ITC Maurya, New Delhi in the presence of Piyush Goel, Minister for Railways and Commerce and Industry, Government of India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X