Nandi Hills Train: ನಂದಿ ಹಿಲ್ಸ್‌ವರೆಗೆ ಮೆಮು ರೈಲುಗಳ ಸಂಚಾರ ವಿಸ್ತರಣೆ

ಬೆಂಗಳೂರಿನಿಂದ ನಂದಿ ಬೆಟ್ಟಕ್ಕೆ ಪ್ರವಾಸ ಹೋಗುವ ಆಸಕ್ತರಿಗೆ ರೈಲ್ವೆ ಇಲಾಖೆ ಸಿಹಿ ಸುದ್ದಿ ಕೊಟ್ಟಿದೆ. ಇನ್ಮುಂದೆ ನಂದಿ ಬೆಟ್ಟಕ್ಕೆ ಮೆಮು ರೈಲಿನಲ್ಲಿ ಕೂಡ ಪ್ರಯಾಣ ಮಾಡಬಹುದಾಗಿದೆ. ಡಿಸೆಂಬರ್ 11ರಿಂದ ಈ ರೈಲು ಸೇವೆ ಆರಂಭವಾಗಲಿದೆ.

ಬೆಂಗಳೂರಿನ ನಿವಾಸಿಗಳು ನಗರದಿಂದ 60 ಕಿಮೀ ದೂರದಲ್ಲಿರುವ ಜನಪ್ರಿಯ ವಾರಾಂತ್ಯದ ತಾಣವಾದ ನಂದಿ ಹಿಲ್ಸ್‌ಗೆ ಮೆಮು ರೈಲಿನಲ್ಲಿ ಪ್ರಯಾಣಿಸುವ ಆನಂದ ಅನುಭವಿಸಬಹುದು.

 Bengaluru to Nandi Hills: First Electric Train to Nandi Hills Launches on December 11

ನೈಋತ್ಯ ರೈಲ್ವೆ (SWR) ಡಿಸೆಂಬರ್ 11 ರಿಂದ ದೇವನಹಳ್ಳಿಯಿಂದ ಚಿಕ್ಕಬಳ್ಳಾಪುರಕ್ಕೆ ವಿಮಾನ ನಿಲ್ದಾಣದ ಮಾರ್ಗದಲ್ಲಿ ಕಾರ್ಯನಿರ್ವಹಿಸುವ ಮೆಮು (ಮೇನ್‌ಲೈನ್ ಎಲೆಕ್ಟ್ರಿಕ್ ಮಲ್ಟಿಪಲ್ ಯುನಿಟ್) ರೈಲುಗಳನ್ನು ನಂದಿ ಬೆಟ್ಟದವರೆಗೆ ವಿಸ್ತರಿಸಲು ನಿರ್ಧರಿಸಿದೆ.

06531/06532 ಬೆಂಗಳೂರು ಕಂಟೋನ್ಮೆಂಟ್-ಚಿಕ್ಕಬಳ್ಳಾಪುರ-ಕಂಟೋನ್ಮೆಂಟ್, 06535/06583 ಬೆಂಗಳೂರು ಕಂಟೋನ್ಮೆಂಟ್-ಚಿಕ್ಕಬಳ್ಳಾಪುರ, ಮತ್ತು 06593/06594 ಯಶವಂತಪುರ-ಚಿಕ್ಕಬಳ್ಳಾಪುರ-ಯಶವಂತಪುರ ರೈಲುಗಳು ಇನ್ನು ಮುಂದೆ ನಂದಿ ಹಿಲ್ಸ್‌ವರೆಗೆ ಚಲಿಸಲಿವೆ.

 Bengaluru to Nandi Hills: First Electric Train to Nandi Hills Launches on December 11

ನಂದಿ ನಿಲ್ದಾಣದಲ್ಲಿ ನಿಲುಗಡೆ

ಯಲಹಂಕ ಮತ್ತು ಚಿಕ್ಕಬಳ್ಳಾಪುರ ನಡುವಿನ ವಿದ್ಯುದ್ದೀಕರಣವು ಮಾರ್ಚ್ 2022 ರಲ್ಲಿ ಪೂರ್ಣಗೊಂಡಿತು, ಆದರೆ ಈ ಮಾರ್ಗದಲ್ಲಿ ವಿದ್ಯುತ್ ರೈಲುಗಳ ಪರಿಚಯವು ಅನೇಕ ಕಾರಣಗಳಿಂದಾಗಿ ನೈಋತ್ಯ ರೈಲ್ವೆಯಿಂದ ವಿಳಂಬವಾಯಿತು.

ಪ್ರಸ್ತುತ, 06387/06388 ಕೆಎಸ್‌ಆರ್ ಬೆಂಗಳೂರು-ಕೋಲಾರ-ಕಂಟೋನ್ಮೆಂಟ್ ಡೀಸೆಲ್ ಮಲ್ಟಿಪಲ್ ಯುನಿಟ್ (ಡೆಮು) ಮತ್ತು 16549/16550 ಕೆಎಸ್‌ಆರ್ ಬೆಂಗಳೂರು - ಕೋಲಾರ- ಕೆಎಸ್‌ಆರ್ ಬೆಂಗಳೂರು ಡೆಮು ರೈಲುಗಳು ನಂದಿ ನಿಲ್ದಾಣದಲ್ಲಿ ನಿಲುಗಡೆ ಮಾಡುತ್ತವೆ.

ಪ್ರವಾಸಿಗರು ಹೇಳೋದೇನು?

ನಂದಿ ನಿಲ್ದಾಣದಿಂದ ನಂದಿ ಬೆಟ್ಟದ ತಪ್ಪಲಿನಲ್ಲಿರುವ ಭೋಗನಂದೀಶ್ವರ ದೇವಸ್ಥಾನಕ್ಕೆ ಸುಮಾರು 1.4 ಕಿ.ಮೀ ದೂರವಿದೆ. ನಂದಿ ಬೆಟ್ಟದ ತುದಿಯನ್ನು ತಲುಪಲು, ಹೆಚ್ಚುವರಿ 15-18 ಕಿಮೀ ಕ್ರಮಿಸಬೇಕಾಗುತ್ತದೆ. ನಂದಿ ರೈಲು ನಿಲ್ದಾಣದಿಂದ ಈ ಸ್ಥಳಗಳಿಗೆ ಬಹು-ಮಾದರಿ ಸಾರ್ವಜನಿಕ ಅಥವಾ ಸಾಮಾನ್ಯ ಸಾರಿಗೆ ಕಡಿಮೆ ಇದ್ದು ಪ್ರವಾಸಿಗರಿಗೆ ಹೆಚ್ಚು ಅನುಕೂಲವಾಗುವುದಿಲ್ಲ ಎನ್ನಲಾಗಿದೆ.

ನಂದಿ ಬೆಟ್ಟದಲ್ಲಿ ಸೂರ್ಯೋದಯವನ್ನು ನೋಡಲು ಹೋಗುವವರು ಬೆಳಗ್ಗೆ 6.37ಕ್ಕೆ ಅಲ್ಲಿರುತ್ತಾರೆ. ಅಂತಹ ಪ್ರವಾಸಿಗರಿಗೆ ಮೆಮು ರೈಲುಗಳ ಸಂಚಾರದಿಂದ ಉಪಯೋಗ ಇಲ್ಲ ಎಂದು ಹೇಳಲಾಗಿದೆ.

ಚಿಕ್ಕಬಳ್ಳಾಪುರದ (ಈಶಾ ಫೌಂಡೇಶನ್) 112 ಅಡಿ ಎತ್ತರದ ಆದಿಯೋಗಿ ಪ್ರತಿಮೆಗೆ ವಿದ್ಯಾರ್ಥಿಗಳು, ರೈತರು ಮತ್ತು ಭೇಟಿ ನೀಡುವವರಿಗೆ ಚಿಕ್ಕಬಳ್ಳಾಪುರಕ್ಕೆ ಸೇವೆಗಳನ್ನು ವಿಸ್ತರಿಸುವುದರಿಂದ ಪ್ರಯೋಜನವಾಗಲಿದೆ ಎಂದು ಹೇಳಲಾಗಿದೆ.

ಈ ರೈಲುಗಳಿಗೆ ಬೆಟ್ಟಹಲಸೂರು, ದೊಡ್ಡಜಾಲ, ಚನ್ನಸಂದ್ರದಂತಹ ನಿಲ್ದಾಣಗಳಲ್ಲಿ ನಿಲುಗಡೆ ಇರುವುದಿಲ್ಲ. ಈ ರೈಲುಗಳು ಬೆಟ್ಟಹಲಸೂರು ಸೇರಿದಂತೆ ಮಧ್ಯಂತರ ನಿಲ್ದಾಣಗಳಲ್ಲಿ ನಿಲ್ಲಬೇಕು, ಆದರೆ ನೈಋತ್ಯ ರಯಲ್ವೆ ಈ ನಿಲ್ದಾಣಗಳಲ್ಲಿ ನಿಲುಗಡೆ ನೀಡುತ್ತಿಲ್ಲ.

ಹೆಚ್ಚುವರಿ ವಿಭಾಗೀಯ ವ್ಯವಸ್ಥಾಪಕಿ (ಬೆಂಗಳೂರು ವಿಭಾಗ) ಕುಸುಮಾ ಹರಿಪ್ರಸಾದ್ ಮಾತನಾಡಿ "ನೈಋತ್ಯ ರೈಲ್ವೆ, ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಅಂಡ್ ಕಲ್ಚರಲ್ ಹೆರಿಟೇಜ್ (ಇಂಟಾಚ್) ಜೊತೆಗೆ ಈಗಾಗಲೇ ಈ ಮಾರ್ಗದಲ್ಲಿ ಮೂರು ಪಾರಂಪರಿಕ ಕೇಂದ್ರಗಳನ್ನು ಪುನಃಸ್ಥಾಪಿಸಲಾಗಿದೆ, ದೊಡ್ಡಜಾಲ, ದೇವನಹಳ್ಳಿ ಮತ್ತು ಆವತಿಹಳ್ಳಿ, ಮತ್ತು ನಂದಿ ನಿಲುಗಡೆಯ ಮರುಸ್ಥಾಪನೆ ಕಾರ್ಯವು ಎರಡು ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ಅದು ಪೂರ್ಣಗೊಂಡ ನಂತರ, ನಾವು ಬೇಗನೆ ರೈಲು ಓಡಿಸುತ್ತೇವೆ, ಆದ್ದರಿಂದ ಪ್ರವಾಸಿಗರು ನಂದಿ ಬೆಟ್ಟದಲ್ಲಿ ಸೂರ್ಯೋದಯವನ್ನು ವೀಕ್ಷಿಸಬಹುದು." ಎಂದು ಹೇಳಿರುವುದಾಗಿ ಮನಿ ಕಂಟ್ರೋಲ್ ವರದಿ ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+