ಬೆಂಗಳೂರಿನ ರಸ್ತೆಗಳಿಗೆ ಹೊಸ ಮಾದರಿಯ ಡಾಂಬರೀಕರಣ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅಪ್ಡೇಟ್ಸ್
ಬೆಂಗಳೂರು: ಬೆಂಗಳೂರಿನಲ್ಲಿ ರಸ್ತೆಗುಂಡಿಗಳ ಸಮಸ್ಯೆ ಹಾಗೂ ಪ್ಲಾಸ್ಟಿಕ್ ಸಮಸ್ಯೆಗೆ ಏಕಕಾಲಕ್ಕೆ ಪರಿಹಾರ ಕಂಡುಕೊಳ್ಳುವುದಕ್ಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಮುಂದಾಗಿದೆ. ಇನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ 369 ವಾರ್ಡ್ಗಳಲ್ಲಿಯೂ ಒಣ ತ್ಯಾಜ್ಯ ಸಂಗ್ರಹಣಾ ಘಟಕ ಸ್ಥಾಪಿಸುವುದಕ್ಕೂ ನಿರ್ಧರಿಸಲಾಗಿದೆ. ಮುಖ್ಯ ಆಯುಕ್ತರು ಪೌರಕಾರ್ಮಿಕರೊಂದಿಗೆ ಚಹಾ ಸಂವಾದ ಸಹ ನಡೆಸಿದ್ದಾರೆ. ಇದರ ಸಂಪೂರ್ಣ ವಿವರ ಇಲ್ಲಿದೆ.
ಬೆಂಗಳೂರಿನ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಉತ್ಪತ್ತಿಯಾಗುವ ಕಡಿಮೆ ಮೌಲ್ಯಯುತ ಪ್ಲಾಸ್ಟಿಕ್ ಅನ್ನು ಇನ್ಮುಂದೆ ರಸ್ತೆ ಡಾಂಬರೀಕರಣಕ್ಕೆ ಬಳಸಿಕೊಳ್ಳಲು ಕ್ರಮ ಕೈಗೊಳ್ಳುವಂತೆ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸ್ವಚ್ಛ ಸರ್ವೇಕ್ಷಣಾ 2025-26 ರ ಅಂಗವಾಗಿ ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಅಂಜನಾಪುರ ವಾರ್ಡ್ ವ್ಯಾಪ್ತಿಯ ಪೌರಕಾರ್ಮಿಕರ ಮಸ್ಟರಿಂಗ್ ಕೇಂದ್ರಕ್ಕೆ ಇಂದು ಭೇಟಿ ನೀಡಿದ ಅವರು "ಮುಖ್ಯ ಆಯುಕ್ತರಿಂದ ಪೌರಕಾರ್ಮಿಕರೊಂದಿಗೆ ಚಹಾ ಸಂವಾದ"ದಲ್ಲಿ ಭಾಗವಹಿಸಿ ಮಾತನಾಡಿದರು.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಈಗಾಗಲೇ ಪ್ರತಿದಿನ 520 ಮೆಟ್ರಿಕ್ ಟನ್ ಕಡಿಮೆ ಮೌಲ್ಯಯುತ ಪ್ಲಾಸ್ಟಿಕ್ (ಆರ್.ಡಿ.ಎಫ್) ಸಂಗ್ರಹಿಸಲಾಗುತ್ತಿದೆ. ಅದನ್ನು ಸಿಮೆಂಟ್ ತಯಾರಿಕಾ ಘಟಕಗಳಿಗೆ ಕಳುಹಿಸಿ ಅದರಿಂದ ಇ.ಪಿ.ಆರ್ ಕ್ರೆಡಿಟ್ ಪಡೆಯಲಾಗುತ್ತಿದೆ. ಇದೇ ಮಾದರಿಯಲ್ಲಿ ಸಾರ್ವಜನಿಕರಲ್ಲಿ ಮತ್ತಷ್ಟು ಜಾಗೃತಿ ಮೂಡಿಸಿ, ಮೂಲದಲ್ಲಿಯೇ ತ್ಯಾಜ್ಯವನ್ನು ವಿಂಗಡಿಸಿ ನೀಡುವ ಮೂಲಕ ಕಡಿಮೆ ಮೌಲ್ಯಯುತ ಪ್ಲಾಸ್ಟಿಕ್ ಉತ್ಪತ್ತಿ ಪ್ರಮಾಣವನ್ನು ಹೆಚ್ಚಿಸಬೇಕು. ಇದನ್ನು ರಸ್ತೆ ಡಾಂಬರೀಕರಣ ಕಾರ್ಯಗಳಲ್ಲಿ ಬಳಸಿಕೊಳ್ಳಲು ಮುಂದಾಗಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಪೌರಕಾರ್ಮಿಕರೊಂದಿಗೆ ಚಹಾ ಸಂವಾದ
ಅಂಜನಾಪುರ ವಾರ್ಡ್ ಮಸ್ಟರಿಂಗ್ ಕೇಂದ್ರಕ್ಕೆ ಭೇಟಿ ನೀಡಿದ ಮುಖ್ಯ ಆಯುಕ್ತರು ಪೌರಕಾರ್ಮಿಕರೊಂದಿಗೆ ಚಹಾ ಸೇವಿಸಿ, ಕೆಲಕಾಲ ಅವರೊಂದಿಗೆ ಸಂವಾದ ನಡೆಸಿದರು. ಯಾವ ಸಮಯಕ್ಕೆ ಕೆಲಸಕ್ಕೆ ಬರುತ್ತೀರಿ, ಎಷ್ಟು ಸಮಯ ಕೆಲಸ ಮಾಡುತ್ತೀರಿ, ಹಾಜರಾತಿ ಹೇಗೆ ಹಾಕುತ್ತೀರಿ, ಸುರಕ್ಷತಾ ಪರಿಕರಗಳನ್ನು ಬಳಸುತ್ತೀರಾ ಎಂಬ ವಿಷಯಗಳ ಬಗ್ಗೆ ವಿಚಾರಿಸಿದರು.
ಸ್ವಚ್ಛ ಸರ್ವೇಕ್ಷಣಾ ಕುರಿತು ಜಾಗೃತಿ
ಸ್ವಚ್ಛ ಸರ್ವೇಕ್ಷಣಾ 2025-26ರಲ್ಲಿ ಬೆಂಗಳೂರಿಗೆ ಉತ್ತಮ ಅಂಕ ತಂದುಕೊಡುವಲ್ಲಿ ಪೌರಕಾರ್ಮಿಕರ ಪಾತ್ರ ಅತ್ಯಂತ ಪ್ರಮುಖವಾಗಿದೆ. ನಿಮಗೆ ವಹಿಸಲಾದ ಕೆಲಸವನ್ನು ಪರಿಣಾಮಕಾರಿಯಾಗಿ ನಿರ್ವಹಿಸಿ, ನೀವು ಸ್ವಚ್ಛಗೊಳಿಸುವ ಬೀದಿಗಳು ಪ್ರತಿದಿನ ಸ್ವಚ್ಛವಾಗಿರುವಂತೆ ನೋಡಿಕೊಳ್ಳಬೇಕು. ಅದಲ್ಲದೆ ರಸ್ತೆ ಬದಿ, ಪಾದಚಾರಿ ಮಾರ್ಗಗಳು ಹಾಗೂ ಖಾಲಿ ಜಾಗಗಳಲ್ಲಿ ಯಾರಾದರೂ ಕಸ ಎಸೆಯುತ್ತಿರುವುದು ಕಂಡುಬಂದಲ್ಲಿ, ಅಂತಹವರಿಗೆ ಮನೆಗಳ ಹತ್ತಿರ ಬರುವ ಆಟೋ ಟಿಪ್ಪರ್ಗಳಿಗೆ ಹಸಿ ಮತ್ತು ಒಣ ತ್ಯಾಜ್ಯವನ್ನು ಪ್ರತ್ಯೇಕಿಸಿ ನೀಡುವಂತೆ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದು ನಿರ್ದೇಶನ ನೀಡಿದ್ದಾರೆ.
ಸಮಗ್ರ ಯೋಜನೆ ಸಿದ್ಧಪಡಿಸಲು ಸೂಚನೆ
ಅಂಜನಾಪುರ ವ್ಯಾಪ್ತಿಯ ಒಣ ತ್ಯಾಜ್ಯ ಸಂಗ್ರಹಣಾ ಘಟಕ ಹಾಗೂ ಮಿನಿ ಟ್ರಾನ್ಸ್ಫರ್ ಸ್ಟೇಷನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ಸ್ಥಳದಲ್ಲಿ ಒಣ ತ್ಯಾಜ್ಯ ಸಂಗ್ರಹಣಾ ಘಟಕ, ಆರ್.ಆರ್.ಆರ್ ಕೇಂದ್ರ, ಬಯೋಮಿಥನೈಜೇಶನ್ ಪ್ಲಾಂಟ್ ಸೇರಿದಂತೆ ವಿವಿಧ ಸೌಲಭ್ಯಗಳನ್ನು ನಿರ್ಮಿಸಲು ಸುಮಾರು 1.20 ಎಕರೆ ಖಾಲಿ ಜಾಗ ಲಭ್ಯವಿದ್ದು, ಕಟ್ಟಡ ನಿರ್ಮಾಣ ಭಗ್ನಾವಶೇಷಗಳ ಸಂಸ್ಕರಣೆ ಮತ್ತು ಬಯೋಮಿಥನೈಜೇಶನ್ ಪ್ಲಾಂಟ್ ನಿರ್ಮಾಣ ಮಾಡುವ ಯೋಜನೆಯಿದೆ. ಈ ಸಂಬಂಧ ಸಮಗ್ರ ಯೋಜನೆ ಸಿದ್ಧಪಡಿಸಿ ವರದಿ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
369 ವಾರ್ಡ್ಗಳಲ್ಲಿಯೂ ಘಟಕ ಸ್ಥಾಪಿಸಿ
ಬೆಂಗಳೂರಿನ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಈಗಾಗಲೇ 190 ಸ್ಥಳಗಳಲ್ಲಿ ಒಣ ತ್ಯಾಜ್ಯ ಸಂಗ್ರಹಣಾ ಘಟಕಗಳಿದ್ದು, ಪ್ರತಿಯೊಂದು ವಾರ್ಡ್ಗೆ ಒಂದರಂತೆ 369 ವಾರ್ಡ್ಗಳಲ್ಲಿಯೂ ಒಣ ತ್ಯಾಜ್ಯ ಸಂಗ್ರಹಣಾ ಘಟಕ ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು. ಈ ಸಂಬಂಧ ಯಾವ ವಾರ್ಡ್ಗಳಲ್ಲಿ ಘಟಕಗಳ ಅವಶ್ಯಕತೆ ಇದೆ ಎಂಬುದನ್ನು ಪರಿಶೀಲಿಸಿ ಸ್ಥಳಗಳನ್ನು ಗುರುತಿಸಲು ಸೂಚನೆ ನೀಡಿದ್ದಾರೆ.
ಪರಿಶೀಲನೆ ವೇಳೆ ನೀಡಿದ ಇತರೆ ಸೂಚನೆಗಳು
1. ಪೌರಕಾರ್ಮಿಕರು ವಿಶ್ರಾಂತಿ ಪಡೆಯಲು ಎಲ್ಲಾ ಮಸ್ಟರಿಂಗ್ ಕೇಂದ್ರಗಳಲ್ಲಿ ಸುವಿಧಾ ಕ್ಯಾಬಿನ್ಗಳನ್ನು ನಿರ್ಮಿಸಬೇಕು. ಜೊತೆಗೆ ಕಣ್ಗಾವಲಿಗಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು ಸೂಚನೆ
2. ಅಂಜನಾಪುರದ ಬಳಿ ರಸ್ತೆ ಬದಿಯಲ್ಲಿ ನಿಲ್ಲಿಸಿರುವ ಅನಾಥ ವಾಹನಗಳನ್ನು ತೆರವುಗೊಳಿಸಿ, ಸಂಬಂಧಪಟ್ಟವರನ್ನು ಗುರುತಿಸಿ ಅವರಿಗೆ ದಂಡ ವಿಧಿಸಲು ಸೂಚಿಸಿದರು.
3. ಬನಶಂಕರಿ ಮಾರುಕಟ್ಟೆ ಬಳಿ ರಸ್ತೆ ಬ್ಲಾಕ್ ಮಾಡಿಕೊಂಡು ವ್ಯಾಪಾರ ನಡೆಸುತ್ತಿರುವುದರಿಂದ ಸಂಚಾರ ದಟ್ಟಣೆ ಹೆಚ್ಚುತ್ತಿದೆ. ಜೊತೆಗೆ ರಸ್ತೆ ಬದಿಯಲ್ಲೇ ತ್ಯಾಜ್ಯವನ್ನು ಎಸೆಯಲಾಗುತ್ತಿದೆ. ಈ ಸಂಬಂಧ ಜೆ.ಎಚ್.ಐ ಮತ್ತು ಮಾರ್ಷಲ್ಗಳಿಗೆ ಜವಾಬ್ದಾರಿ ನೀಡಿ ರಸ್ತೆ ಬ್ಲಾಕ್ ಮಾಡದಂತೆ ಹಾಗೂ ಶುಚಿತ್ವ ಕಾಪಾಡುವಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.
4. ಗೊಟ್ಟಿಗೆರೆ ಮುಖ್ಯರಸ್ತೆ ಹಾಗೂ ಬನ್ನೇರಘಟ್ಟ ಮುಖ್ಯರಸ್ತೆಯಲ್ಲಿ ಬಿಳೇಕಹಳ್ಳಿಯಿಂದ ವೇಗಾ ಸಿಟಿ ಮಾಲ್ ವರೆಗೆ ಧೂಳು ಹೆಚ್ಚಿರುವುದನ್ನು ಗಮನಿಸಿ, ಯಾಂತ್ರಿಕೃತ ಕಸ ಗುಡಿಸುವ ಯಂತ್ರಗಳ ಮೂಲಕ ಸ್ವಚ್ಛತೆ ಕಾಪಾಡಲು ಸೂಚನೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಆಯುಕ್ತರಾದ ಕೆ.ಎನ್. ರಮೇಶ್, ಜಂಟಿ ಆಯುಕ್ತರಾದ ಮಧು ಪಾಟೀಲ್, ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ ಅಧಿಕಾರಿಗಳು ಸೇರಿದಂತೆ ಹಲವರು ಹಾಜರಿದ್ದರು.
-
GBA: ಬೆಂಗಳೂರಲ್ಲಿ ದೇವಸ್ಥಾನಗಳ ಸ್ವಚ್ಛತೆಗೆ ಮುಂದಾದ ಜಿಬಿಎ, ಕಾರಣವೇನು -
Bengaluru Karaga: ಬೆಂಗಳೂರು ಕರಗ ಮಹೋತ್ಸವ ಅವಧಿಯಲ್ಲಿ 12 ದಿನಗಳಲ್ಲಿ 455 ಟನ್ ತ್ಯಾಜ್ಯ ವಿಲೇವಾರಿ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ












Click it and Unblock the Notifications