ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಲ್ಲಿ ಮಿಡಿಯಲಿದೆ ಮತ್ತೊಂದು ಜೀವಂತ ಹೃದಯ

By Super Admin
|
Google Oneindia Kannada News

ಬೆಂಗಳೂರು, ಏ.21 : ಬೆಂಗಳೂರು ನಗರ ಮತ್ತೊಂದು ಜೀವಂತ ಹೃದಯ ಸಾಗಣೆಗೆ ಸಾಕ್ಷಿಯಾಗಲಿದೆ. ನಿಮ್ಹಾನ್ಸ್ ಆಸ್ಪತ್ರೆಯಿಂದ ಕೆಂಗೇರಿಯಲ್ಲಿರುವ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ಹೃದಯ ಸಾಗಣೆ ಮಾಡಲಾಗುತ್ತದೆ. ಸಂಚಾರಿ ಪೊಲೀಸರು ಇದಕ್ಕಾಗಿ ಗ್ರೀನ್ ಕಾರಿಡಾರ್ ವ್ಯವಸ್ಥೆಯನ್ನು ಮಾಡಿದ್ದಾರೆ.

ಅಪಘಾತದಲ್ಲಿ ಗಾಯಗೊಂಡು ಕಳೆದ ಐದು ದಿನಗಳಿಂದ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಜಯ್ (27) ಅಂಗಾಂಗಗಳನ್ನು ದಾನ ಮಾಡಲು ಕುಟುಂಬದವರು ಒಪ್ಪಿಗೆ ನೀಡಿದ್ದಾರೆ. ವಿಜಯ್ ಜೀವಂತ ಹೃದಯ ಸೇರಿದಂತೆ ಇತರ ಅಂಗಾಂಗಗಳನ್ನು ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ಸಾಗಣೆ ಮಾಡಲಾಗುತ್ತದೆ. [ಕುಡ್ಲದಲ್ಲಿ ಮಿಡಿದ ಜೀವಂತ ಹೃದಯ ಬೆಂಗಳೂರಿಗೆ]

Heart

ಮೈಸೂರು ರಸ್ತೆಯ ಆನಂದಪುರ ನಿವಾಸಿಯಾದ ವಿಜಯ್ ಪೇಂಟರ್ ಆಗಿ ಕೆಲಸ ಮಾಡುತ್ತಿದ್ದರು. ಐದು ದಿನಗಳ ಹಿಂದೆ ನಡೆದ ಅಪಘಾತದಲ್ಲಿ ಗಾಯಗೊಂಡ ವಿಜಯ್ ಮಿದುಳು ನಿಷ್ಕ್ರೀಯವಾದ ಹಿನ್ನೆಲೆಯಲ್ಲಿ ಅಂಗಾಂಗಗಳನ್ನು ದಾನ ಮಾಡಲು ಕುಟುಂಬದವರು ಒಪ್ಪಿಗೆ ನೀಡಿದ್ದಾರೆ. [ಬೆಂಗಳೂರಿನ ಹೃದಯಕ್ಕೆ ಹೈದರಾಬಾದ್ ನಲ್ಲಿ ಜೀವ]

ನಿಮ್ಹಾನ್ಸ್ ಆಸ್ಪತ್ರೆ ವೈದ್ಯರು ಈ ಕುರಿತು ಬೆಂಗಳೂರು ಸಂಚಾರಿ ಪೊಲೀಸರಿಗೂ ಮಾಹಿತಿ ನೀಡಿದ್ದು, ನಿಮ್ಹಾನ್ಸ್‌ನಿಂದ ಬಿಜಿಎಸ್ ಆಸ್ಪತ್ರೆ ತನಕ ಪೊಲೀಸರು ಗ್ರೀನ್ ಕಾರಿಡಾರ್ ವ್ಯವಸ್ಥೆ ಕಲ್ಪಿಸಿದ್ದಾರೆ. ಆಂಬ್ಯುಲೆನ್ಸ್ ಸಾಗಲು ಎಲ್ಲಾ ಸಿಗ್ನಲ್‌ಗಳಲ್ಲಿ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಡಲಿದ್ದಾರೆ.

ಜೀವಂತ ಹೃದಯ ಸಾಗಣೆ ಹೊಸದೇನಲ್ಲ : ಬೆಂಗಳೂರಿಗರಿಗೆ ಜೀವಂತ ಹೃದಯ ಸಾಗಣೆ ಹೊಸದೇನಲ್ಲ ಈಗಾಗಲೇ 4 ಬಾರಿ ಇಂತಹ ಪ್ರಯತ್ನಗಳು ಯಶಸ್ವಿಯಾಗಿ ನಡೆದಿವೆ.

* 2014ರಲ್ಲಿ ಎರಡು ಬಾರಿ ಬೆಂಗಳೂರಿನಿಂದ ಚೆನ್ನೈಗೆ ಜೀವಂತ ಹೃದಯವನ್ನು ಸಾಗಣೆ ಮಾಡಲಾಗಿತ್ತು.
* 2015ರ ಜನವರಿಯಲ್ಲಿ ಎಂಎಸ್ ರಾಮಯ್ಯ ಆಸ್ಪತ್ರೆಯಿಂದ ಬಿಜಿಎಸ್ ಆಸ್ಪತ್ರೆಗೆ ಹೃದಯ ಸಾಗಣೆ ಮಾಡಲಾಗಿತ್ತು.
* 2015 ಫೆ. 28ರಂದು ಬೆಂಗಳೂರಿನಿಂದ ಹೈದರಾಬಾದ್‌ ಜೀವಂತ ಹೃದಯವನ್ನು ಸಾಗಣೆ ಮಾಡಿ ಯಶಸ್ವಿಯಾಗಿ ಕಸಿ ಮಾಡಲಾಗಿತ್ತು.
* 2015 ಏ.13ರಂದು ಮಂಗಳೂರಿನಿಂದ ಜೀವಂತ ಹೃದಯವನ್ನು ಬಿಜಿಎಸ್ ಆಸ್ಪತ್ರೆಗೆ ತೆಗೆದುಕೊಂಡು ಬರಲಾಗಿತ್ತು.

English summary
Bengaluru to witness for another live heart and vital organs transplant on Tuesday, April 21.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X