Bengaluru Traffic Advisory: ಬೆಂಗಳೂರಿನ ಈ ಮಾರ್ಗದಲ್ಲಿ 21 ದಿನ ವಾಹನ ಸಂಚಾರಕ್ಕೆ ನಿರ್ಬಂಧ
Bengaluru traffic advisory: ಕಾಮಗಾರಿ ನಡೆಯುವಂತಹ ಭಾಗಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗುತ್ತದೆ. ಹಾಗೆಯೇ ಇದೀಗ ರಾಜ್ಯ ರಾಜಧಾನಿ ಬೆಂಗಳೂರಿನ ಈ ಮಾರ್ಗದಲ್ಲಿ 21 ದಿನಗಳವರೆಗೂ ವಾಹನಗಳ ಓಡಾಟ ನಿಷೇಧಿಸಲಾಗಿದೆ. ಜಿತೆಗೆ ಪರ್ಯಾಯ ಮಾರ್ಗಗಳ ಕುರಿತು ಮಾಹಿತಿಯನ್ನು ನಗರ ಸಂಚಾರ ಪೊಲೀಸರು ಸೂಚಿಸಿದ್ದಾರೆ. ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಬೆಂಗಳೂರು ಅಂದ್ರೆ ಸಾಕು ಮೊದಲಿಗೆ ನೆನಪಾಗುವುದೇ ಟ್ರಾಫಿಕ್ ಜಾಮ್.. ನಗರದಲ್ಲಿ ಪ್ರತಿನಿತ್ಯ ವಾಹನ ಸವಾರರು ಟ್ರಾಫಿಕ್ ಜಂಜಾಟದಲ್ಲೇ ವಾಹನ ಸಂಚಾರ ಮಾಡಿಕೊಂಡು ಹೋಗುವಂತಾಗಿದೆ. ಇನ್ನು ಎಲ್ಲಾದರೂ ಕಾಮಗಾರಿ ನಡೆಯುತ್ತಿದ್ದರೆ, ಅಂತಹ ಮಾರ್ಗಗಳಲ್ಲಿ ವಾಹನ ಸಂಚಾರವನ್ನು ನಿಷೇಧಿಸಲಾಗುತ್ತದೆ. ಅಲ್ಲದೆ, ಇದಕ್ಕೆ ಪರ್ಯಾ ಮಾರ್ಗಗಳನ್ನು ಸಹ ಸಂಚಾರ ಪೊಲೀಸರು ಸೂಚಿಸುತ್ತಾರೆ. ಯಾಕಂದ್ರೆ, ವಾಹನ ಸವಾರರಿಗೆ ಸಮಸ್ಯೆ ಆಗಬಾರದೆನ್ನುವ ದೃಷ್ಟಿಯಿಂದ ಒಂದು ದಿನ ಮುಂಚಿತವಾಗಿಯೇ ಈ ಬಗ್ಗೆ ಪೊಲೀಸರು ಮಾಹಿತಿ ನೀಡುತ್ತಾರೆ.

ಎಚ್ಎಎಲ್ ಏರ್ಪೋರ್ಟ್ ಸಂಚಾರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಪಣತ್ತೂರು ಮುಖ್ಯ ರಸ್ತೆಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಆದ್ದರಿಂದ ಬೆಂಗಳೂರಿನ ಈ ಮಾರ್ಗದಲ್ಲಿ 21 ದಿನಗಳ ಕಾಲ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಜೊತೆಗೆ ಬೆಂಗಳೂರು ಸಂಚಾರ ಪೊಲೀಸರು ಪರ್ಯಾಯ ಮಾರ್ಗಗಳ ಕುರಿತು ಮಾಹಿತಿಯನ್ನು ಟ್ವಿಟರ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ಎಲ್ಲೆಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ?: ಬಿಬಿಎಂಪಿ ವತಿಯಿಂದ ಪಣತ್ತೂರು ಮುಖ್ಯ ರಸ್ತೆಯಲ್ಲಿ ವೈಟ್ ಟಾಪಿಂಗ್ ಕಾಮಗಾರಿಯನ್ನು ಕೈಗೊಳ್ಳಲಾಗಿದೆ. ಈ ಹಿನ್ನೆಲೆ ಅಕ್ಟೋಬರ್ 10ರಿಂದ 21 ದಿನಗಳ ಕಾಲ ವಾಹನ ಸಂಚಾರಕ್ಕೆ ಅಡಚಣೆ ಆಗಬಹುದು ಎನ್ನುವ ದೃಷ್ಟಿಯಿಂದ ಬೆಂಗಳೂರು ಸಂಚಾರ ಪೊಲೀಸರು ಸವಾರರಿಗೆ ಮುನ್ಸೂಚನೆ ನೀಡಿದ್ದಾರೆ. ಪಣತ್ತೂರು ಮುಖ್ಯ ರಸ್ತೆಯ ಪಣತ್ತೂರು ರೈಲ್ವೇ ಬ್ರಿಡ್ಜ್ನಿಂದ ಬೋಗನಹಳ್ಳಿ ಜಂಕ್ಷನ್‌ವರೆಗೆ ಎರಡು ಬದಿಯಲ್ಲಿ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.
ಪರ್ಯಾಯ ಮಾರ್ಗಗಳ ವಿವರ: ವೈಟ್ಫೀಲ್ಡ್ ಮತ್ತು ವರ್ತೂರು ಕಡೆಯಿಂದ ಪಣತ್ತೂರು ಮುಖ್ಯ ರಸ್ತೆಯ ಮುಖಾಂತರ ಕಾಡುಬೀಸನಹಳ್ಳಿ ಮತ್ತು ದೇವರಬೀಸನಹಳ್ಳಿ ಕಡೆಗೆ ಬರುವ ವಾಹನಗಳು ಬಳಗೆರೆ ಟಿ ಜಂಕ್ಷನ್ ಹತ್ತಿರ ಬಲತಿರುವು ಪಡೆದು, ವಿಬ್ ಗಯಾರ್ ರಸ್ತೆಯ ಮೂಲಕ ವರ್ತೂರು ಮುಖ್ಯ ರಸ್ತೆ ಕಡೆಗೆ ಸಂಚರಿಸಿ. ಬಳಿಕ ಮಾರತ್ತಹಳ್ಳಿ ಬ್ರಿಡ್ಜ್ ಹತ್ತಿರ ಎಡ ತಿರುವು ಪಡೆದು ಹೊರ ವರ್ತುಲ ರಸ್ತೆ ತಲುಪಿ ಕಾಡುಬೀಸನಹಳ್ಳಿ ಮತ್ತು ದೇವರಬೀಸನಹಳ್ಳಿ ಕಡೆಗೆ ಹೋಗಬಹುದು.
ದೇವರಬೀಸನಹಳ್ಳಿ ಮತ್ತು ಬೆಳ್ಳಂದೂರು ಕಡೆಯಿಂದ ಪಣತ್ತೂರು ಮುಖ್ಯ ರಸ್ತೆಯ ಮುಖಾಂತರ ವರ್ತೂರು ಮತ್ತು ವೈಟ್ಫೀಲ್ಡ್ ಕಡೆಗೆ ಸಂಚಾರ ಮಾಡುವ ವಾಹನಗಳು ಹೊರ ವರ್ತುಲ ರಸ್ತೆಯ ಮುಖಾಂತರ ಮಾರತ್ತಹಳ್ಳಿ ಬ್ರಿಡ್ಜ್ ಕಡೆಗೆ ಸಂಚರಿಸಿ ವರ್ತೂರು ಮುಖ್ಯರಸ್ತೆ ತಲುಪಿ ವರ್ತೂರು ಹಾಗೂ ವೈಟ್ಫೀಲ್ಡ್ ಕಡೆಗೆ ಪ್ರಯಾಣ ಮಾಡಬಹುದು ಎಂದು ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ. ಹೀಗೆ ಬೆಂಗಳೂರಿನಲ್ಲಿ ಎಲ್ಲೇ ರಸ್ತೆ ಕಾಮಗಾರಿ ನಡೆಯುತ್ತಿದ್ದರೂ ಆ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗುತ್ತದೆ. ಅಲ್ಲದೆ, ವಾಹನ ಸವಾರರಿಗೆ ತೊಂದರೆ ಆಗಬಾರದು ಎನ್ನುವ ಕಾರಣದಿಂದ ಸಂಚಾರ ಪೊಲೀಸರು ಪರ್ಯಾಯ ಮಾರ್ಗಗಳನ್ನು ಸೂಚಿಸುವ ಕೆಲಸವನ್ನು ಒಂದು ದಿನ ಮುಂಚಿತವಾಗಿಯೇ ಮಾಡುತ್ತಾರೆ.












Click it and Unblock the Notifications