ಮಾರ್ಗ ಬದಲಾವಣೆ: ಹಳೆ ಮದ್ರಾಸ್ ರಸ್ತೆ ಬಳಸುವ ಪ್ರಯಾಣಿಕರು ಗಮನಿಸಿ
ಬೆಂಗಳೂರು, ನ.14: ಬೆಂಗಳೂರಿನಲ್ಲಿ ವೈಟ್ ಟಾಪಿಂಗ್ ಕೆಲಸಗಳ ಕಾರಣ ಆಗಾಗ ಸಂಚಾರಿ ಮಾರ್ಗ ಬದಲಾವಣೆಯಾಗುತ್ತಲೆ ಇದೆ. ವಾಹನ ಪ್ರಯಾಣಿಕರು ಈ ಬಗ್ಗೆ ಮಾಹಿತಿ ಪಡೆಯುವುದು ಕೂಡ ಅಷ್ಟೇ ಮುಖ್ಯ. ಈಗ ಹಳೆ ಮದ್ರಾಸ್ ರಸ್ತೆಯನ್ನು ಬಳಸುವ ಪ್ರಯಾಣಿಕರು ಸಂಚಾರಿ ಮಾರ್ಗ ಬದಲಾವಣೆ ಬಗ್ಗೆ ತಿಳಿದುಕೊಳ್ಳಬೇಕಿದೆ.
ಹಳೆ ಮದ್ರಾಸ್ ರಸ್ತೆಯ ಒಂದು ಭಾಗದಲ್ಲಿ ವೈಟ್ ಟಾಪಿಂಗ್ ಕಾಮಗಾರಿ ನಡೆಯುತ್ತಿರುವುದರಿಂದ ಹಳೆ ಮದ್ರಾಸ್ ರಸ್ತೆಯಿಂದ ಬೆಂಗಳೂರಿನ ಇಂದಿರಾನಗರಕ್ಕೆ ವಾಹನಗಳನ್ನು ಚಲಾಯಿಸುವ ಪ್ರಯಾಣಿಕರಿಗೆ ಬೆಂಗಳೂರು ಸಂಚಾರಿ ಪೊಲೀಸರು ಬುಧವಾರದಂದು ಸಲಹೆ ನೀಡಿದ್ದಾರೆ.
ಇಂದಿರಾನಗರ, ಹಲಸೂರು ಮತ್ತು ಜೀವನ್ ಭೀಮಾ ನಗರ ಸೇರಿದಂತೆ ಪೂರ್ವ ಬೆಂಗಳೂರು ಭಾಗಗಳಲ್ಲಿ ಸಂಚಾರ ದಟ್ಟಣೆಯಾಗುವ ಕುರಿತು ಪ್ರಯಾಣಿಕರಿಗೆ ಎಚ್ಚರಿಕೆ ನೀಡಲಾಗಿದೆ.
"ದಿನಾಂಕ 16.11.2022 ರಿಂದ ಹಲಸೂರು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಹಳೇ ಮದ್ರಾಸ್ ರಸ್ತೆಯ ಆಂಜನೇಯ ಜಂಕ್ಷನ್ ನಿಂದ ಇಂದಿರಾನಗರ 100 ಅಡಿ ರಸ್ತೆಯವರೆಗೆ ರಸ್ತೆಯ ಬಲಭಾಗದ ಪಥದಲ್ಲಿ ಬಿಬಿಎಂಪಿ ವತಿಯಿಂದ ವೈಟ್ ಟಾಪಿಂಗ್ ಕಾಮಗಾರಿ ಕೈಗೊಳ್ಳುವುದರಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಈ ಪರ್ಯಾಯ ಸಂಚಾರ ವ್ಯವಸ್ಥೆಯನ್ನು ಕಲ್ಪಿಸಲಾಗಿರುತ್ತದೆ" ಎಂದು ಬೆಂಗಳೂರು ಸಂಚಾರಿ ಪೊಲೀಸರು ಸೂಚನೆ ನೀಡಿದ್ದಾರೆ.
ಹಲಸೂರು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಹಳೇ ಮದ್ರಾಸ್ ರಸ್ತೆ ಲಕ್ಷ್ಮೀಪುರಂ ಸ್ಮಶಾನ (ಆಂಜನೇಯ ಜಂಕ್ಷನ್) ನಿಂದ ಇಂದಿರಾನಗರ 100 ಅಡಿ ರಸ್ತೆಯಲ್ಲಿ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿರುತ್ತದೆ.

ಕೆ.ಆರ್.ಪುರ, ಮಹದೇವಪುರ ಮತ್ತು ವೈಟ್ ಫೀಲ್ಡ್ ಕಡೆಯಿಂದ ಹಳೆ ಮದ್ರಾಸ್ ರಸ್ತೆಯ ಮೂಲಕ ಆಂಜನೇಯ ಜಂಕ್ಷನ್ ನಿರ್ಬಂಧಿಸಲಾಗಿರುತ್ತದೆ. ಕಡೆಗೆ ಸಂಚರಿಸುವ ವಾಹನಗಳ ಮಾರ್ಗವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿರುತ್ತದೆ.
ಇನ್ನು ಭಾರಿ ವಾಹನಗಳು ಕೆ.ಎಸ್.ಆರ್.ಟಿ.ಸಿ, ಬಿ.ಎಂ.ಟಿ.ಸಿ ಮತ್ತು ಖಾಸಗಿ ಬಸ್‌ಗಳು ಎನ್.ಜಿ.ಇ.ಎಫ್ ಜಂಕ್ಷನ್‌ನಲ್ಲಿ ಕಡ್ಡಾಯ ಎಡ ತಿರುವು ಪಡೆದು - ಸುರಂಜನ್ ದಾಸ್ ರಸ್ತೆ ಮೂಲಕ ಸಂಚರಿಸಿ ಹಳೇ ವಿಮಾನ ನಿಲ್ದಾಣ ರಸ್ತೆ ಮೂಲಕ ನಗರದ ಕಡೆಗೆ ಸಂಚರಿಸಬೇಕು.
ಇತರೆ ವಾಹನಗಳು ಇಂದಿರಾನಗರ 80 ಅಡಿ ರಸ್ತೆ ಜಂಕ್ಷನ್ ಅಥವಾ ಇಂದಿರಾನಗರ 100 ಅಡಿ ರಸ್ತೆ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ಬಿ.ಎಂ.ಶ್ರೀ ಜಂಕ್ಷನ್ ಮೂಲಕ ಸಿ.ಎಂ.ಹೆಚ್ ರಸ್ತೆ - ಶಾಂತಿಸಾಗರ್ ಜಂಕ್ಷನ್ - ಆದರ್ಶ ಜಂಕ್ಷನ್ ಮೂಲಕ ನಗರದ ಕಡೆಗೆ ಸಂಚರಿಸಬೇಕು.
ವೈಟ್ ಟಾಪಿಂಗ್ ಕಾಮಗಾರಿಯಿಂದ ಪೂರ್ವ ಬೆಂಗಳೂರಿನ ಇಂದಿರಾನಗರ, ಹಲಸೂರು ಮತ್ತು ಜೀವನ್ ಭೀಮಾ ನಗರ ಟ್ರಾಫಿಕ್ ಪೊಲೀಸ್ ವ್ಯಾಪ್ತಿಯ ಸಿಎಂಎಚ್ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚಾರ ದಟ್ಟಣೆ ನಿರೀಕ್ಷಿಸಲಾಗಿದೆ.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications