Get Updates
Get notified of breaking news, exclusive insights, and must-see stories!

Bengaluru: ಹೆಣ್ಣೂರು - ಬಾಗಲೂರು ರಸ್ತೆಯ ಅರ್ಧಭಾಗ ಸಂಚಾರ ನಿರ್ಬಂಧ: ವಾಹನ ಸವಾರರೇ ಗಮನಿಸಿ

Bengaluru Traffic advisory: ಬೆಂಗಳೂರಿನ ಕೆಲವೊಂದು ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ವಿಪರೀತವಾಗಿದೆ, ಅದರಲ್ಲಿ ಹೆಣ್ಣೂರು-ಬಾಗಲೂರು ರಸ್ತೆಯು ಒಂದು. ಈ ಭಾಗದಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ವಿಪರೀತವಾಗುತ್ತಿದ್ದು, ಇದೀಗ ಈ ಭಾಗದಲ್ಲಿ ಮಹತ್ವದ ಯೋಜನೆಯನ್ನು ಕೈಗೆತ್ತಿಕೊಳ್ಳುವುದಕ್ಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ಮುಂದಾಗಿದ್ದಾರೆ. ಈ ಮಾರ್ಗದಲ್ಲಿ ಏನೆಲ್ಲಾ ಬದಲಾವಣೆಗಳು ಆಗುತ್ತಿದೆ ಎನ್ನುವ ವಿವರ ಇಲ್ಲಿದೆ.

ಬೆಂಗಳೂರು ಹಾಗೂ ಬೆಂಗಳೂರಿನ ಹೊರ ವರ್ತುಲ ರಸ್ತೆಯಲ್ಲಿ ರಸ್ತೆಗುಂಡಿಗಳ ಸಂಖ್ಯೆ ಹೆಚ್ಚಳ, ಟ್ರಾಫಿಕ್ ಜಾಮ್ ಸಮಸ್ಯೆ ವಿಪರೀತವಾಗಿದೆ ಎಂದು ಸಾರ್ವಜನಿಕರು ದೂರುತ್ತಿದ್ದು, ಇದೀಗ ಬೆಂಗಳೂರಿನ ಹೊರ ವರ್ತುಲ ರಸ್ತೆಯಲ್ಲಿ ಕೆಲವೊಂದು ಪ್ರಮುಖ ಬದಲಾವಣೆಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮುಂದಾಗಿದೆ. ಹೆಣ್ಣೂರು-ಬಾಗಲೂರು ರಸ್ತೆಯ ಅರ್ಧಭಾಗ ವಾಹನ ಸಂಚಾರ ನಿರ್ಬಂಧಿಸಿಕೊಂಡು ವೈಟ್ ಟಾಪಿಂಗ್ ಕಾಮಗಾರಿಯನ್ನು ನಡೆಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Bengaluru Traffic advisory Traffic restricted on half of Hennur - Bagalur road Motorists beware

ಜಿಬಿಎ ವ್ಯಾಪ್ತಿಯಲ್ಲಿ ಹೆಣ್ಣೂರು-ಬಾಗಲೂರಿನ ರಸ್ತೆಯ ವೈಟ್ ಟಾಪಿಂಗ್ ಕಾಮಗಾರಿ, ಹೊರ ವರ್ತುಲ ರಸ್ತೆ/ಇತರೆ ರಸ್ತೆಗಳಲ್ಲಿ ಡಾಂಬರೀಕರಣ, ಹೊಸಕೆರೆ ಹಳ್ಳಿ ಮೇಲ್ಸೇತುವೆ ಹಾಗೂ ಜೆ.ಸಿ ರಸ್ತೆಗೆ ನಿನ್ನೆ ರಾತ್ರಿ 11.30 ಗಂಟೆಯಿಂದ ಮಧ್ಯರಾತ್ರಿ 2.45 ಗಂಟೆಯವರೆಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ಮಾಡಿದ್ದಾರೆ.

ಪೂರ್ವ ನಗರ ಪಾಲಿಕೆ ವ್ಯಾಪ್ತಿಯ ಹೆಣ್ಣೂರು-ಬಾಗಲೂರು ರಸ್ತೆಯಲ್ಲಿ ಸುಮಾರು 5 ಕಿ.ಮೀ ಉದ್ದದ ರಸ್ತೆಗೆ ವೈಟ್‌ ಟಾಪಿಂಗ್ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು, ಕಳೆದ ವಾರ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಗೆ ವೇಗ ನೀಡಲು ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ.

ಅರ್ಧ ರಸ್ತೆ ಸಂಚಾರ ನಿರ್ಬಂಧಿಸಿ ವೈಟ್ ಟಾಪಿಂಗ್

ಹೆಣ್ಣೂರು-ಬಾಗಲೂರಿನ 5 ಕಿ.ಮೀ‌ ಉದ್ದದ ರಸ್ತೆಯ ಪೈಕಿ, ಅರ್ಧ ಭಾಗದಲ್ಲಿ 1 ಕಿ.ಮೀ ಮತ್ತು ಮತ್ತರ್ಧ ಭಾಗದಲ್ಲಿ 600 ಮೀ. ಉದ್ದದ ರಸ್ತೆಗೆ ವೈಟ್‌ ಟಾಪಿಂಗ್ ಕಾಮಗಾರಿ ಪೂರ್ಣಗೊಳಿಸಲಾಗಿದೆ. ಉಳಿದ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವ ಸಲುವಾಗಿ, ಪೂರ್ಣ ಪ್ರಜ್ಞ ಸ್ಕೂಲ್ ನಿಂದ ಗುಬ್ಬಿ ಕ್ರಾಸ್ ವರೆಗಿನ 1.2 ಕಿ.ಮೀ ಉದ್ದದ ಅರ್ಧ ರಸ್ತೆಯಲ್ಲಿ ಸಂಚಾರ ನಿರ್ಬಂಧಿಸಿಕೊಂಡು, ಉಳಿದರ್ಧ ರಸ್ತೆಯಲ್ಲಿ ದ್ವಿಮುಖ ಸಂಚಾರಕ್ಕೆ ಅವಕಾಶ ಕಲ್ಪಿಸಿ, 25 ದಿನದಲ್ಲಿ ಕಾಮಗಾರಿ ಪೂರ್ಣಗೊಳಿಸಿ, ಆ ಭಾಗದಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಬೇಕು.

ಅನಂತರ ಅದೇ ಮಾದರಿಯಲ್ಲಿ ಹಂತ-ಹಂತವಾಗಿ 1 ರಿಂದ 1.5 ಕಿ.ಮೀ ರಸ್ತೆಗೆ ಸಂಚಾರ ನಿರ್ಬಂಧಿಸಿ ಕಾಮಗಾರಿ ಪೂರ್ಣಗೊಳಿಸಲು ಸಂಚಾರಿ ಪೊಲೀಸ್ ಅನುಮತಿ ನೀಡಿದ್ದಾರೆ ಎಂದು ಜಿಬಿಎ ಅಧಿಕಾರಿಗಳು ಹೇಳಿದ್ದಾರೆ. ಹೀಗಾಗಿ, ಈ ಮಾರ್ಗದಲ್ಲಿ ಶೀಘ್ರವೇ ಕಾಮಗಾರಿ ಪ್ರಾರಂಭವಾಗಲಿದೆ.

ಕಾಮಗಾರಿ ನಡೆಸುವ ವೇಳೆ ರಸ್ತೆಯಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡಿದರೆ ಸಂಚಾರ ದಟ್ಟಣೆ ಹೆಚ್ಚಾಗಲಿದೆ. ಈ ಸಂಬಂಧ ಹೋಮ್ ಗಾರ್ಡ್ ಗಳನ್ನು ನಿಯೋಜಿಸಿ ರಸ್ತೆಯಲ್ಲಿ ಪಾರ್ಕಿಂಗ್ ಮಾಡದಂತೆ ಹಾಗೂ ಸಂಚಾರ ದಟ್ಟಣೆ ಆಗದಂತೆ ಕ್ರಮವಹಿಸಲು ಡಿಸಿಪಿ ಅವರಿಗೆ ಸೂಚನೆ ನೀಡಲಾಗಿದೆ. ಹೆಣ್ಣೂರು ಬಾಗಲೂರು ರಸ್ತೆಯಲ್ಲಿ ರಸ್ತೆ ಗುಂಡಿಗಳನ್ನು ಸಂಪೂರ್ಣವಾಗಿ ಮುಚ್ಚಲಾಗಿದ್ದು, ರಸ್ತೆ ಬದಿಯಿದ್ದ ಭಗ್ನಾವಶೇಷಗಳನ್ನು ತೆರವುಗೊಳಿಸಲಾಗಿದೆ. ವೈಟ್ ಟಾಪಿಂಗ್ ಕಾಮಗಾರಿಯನ್ನು ದಿನದ 24 ಗಂಟೆಯೂ ಕೆಲಸ ಮಾಡಿ ಕಾಲಮಿತಿಯೊಳಗಾಗಿ ಪೂರ್ಣಗೊಳಿಸಲು ತಿಳಿಸಲಾಗಿದೆ.

Bengaluru Traffic advisory Traffic restricted on half of Hennur - Bagalur road Motorists beware

ಹೊಸಕೆರೆ ಹಳ್ಳಿ ಮೇಲ್ಸೇತುವೆ ಕಾಮಗಾರಿ ಪೂರ್ಣ

ಹೊಸಕೆರೆ ಹಳ್ಳಿ ಮೇಲ್ಸೇತುವೆ ಕಾಮಗಾರಿಯು ಪೂರ್ಣಗೊಂಡಿದ್ದು, ಬಾಕಿಯಿರುವ ಲೈನ್ ಮಾರ್ಕಿಂಗ್ ಸೇರಿದಂತೆ ಸಣ್ಣ-ಪುಟ್ಟ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ತಿಳಿಸಲಾಗಿದೆ. ಇನ್ನು ಜೆ.ಸಿ ರಸ್ತೆಯ ಮಿನರ್ವ ವೃತ್ತದಿಂದ ಟೌನ್ ಹಾಲ್ ವರೆಗೆ 1 ಕಿ.ಮೀ ಉದ್ದದ ರಸ್ತೆಯನ್ನು ವೈಟ್ ಟಾಪಿಂಗ್ ಕಾಮಗಾರಿ ಕೈಗೆತ್ತಿಕೊಂಡಿದ್ದು, ರಸ್ತೆಯ ಅರ್ಧ ಭಾಗ ಕಾಮಗಾರಿ ಪೂರ್ಣಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

ಉಳಿದರ್ಧ ಭಾಗದಲ್ಲಿ 250 ಮೀಟರ್ ಮಾತ್ರ ಬಾಕಿಯಿದ್ದು, 4 ದಿನಗಳಲ್ಲಿ ಕಾಂಕ್ರೀಟ್ ಅಳವಡಿಸುವ ಕಾಮಗಾರಿ ಪೂರ್ಣಗೊಳ್ಳಲಿದೆ. ಕಾಮಗಾರಿ ನಡೆಯುವುದನ್ನು ವೀಕ್ಷಿಸಿ ಕಾಂಕ್ರೀಟ್ ಗುಟಮಟ್ಟ ಪರಿಶೀಲಿಸಿ ತ್ವರಿತವಾಗಿ ಪೂರ್ಣಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲು ನಿರ್ದೇಶನ ನೀಡಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+