ಫೆಬ್ರವರಿ 28ರಿಂದ ಮಾರ್ಚ್ 7ರ ವರೆಗೆ ಬೆಂಗಳೂರಿನ ಈ ರಸ್ತೆಯಲ್ಲಿ ವಾಹನ ಸಂಚಾರ ಬಂದ್: ಪರ್ಯಾಯ ಮಾರ್ಗಗಳ ವಿವರ
ಬೆಂಗಳೂರು, ಫೆಬ್ರವರಿ, 26: ರಸ್ತೆ ಕಾಮಗಾರಿ ಸೇರಿದಂತೆ ಇನ್ನಿತರೆ ಕಾಮಗಾರಿ ನಡೆಯುವಂತಹ ಭಾಗಗಳಲ್ಲಿ ವಾಹನ ಸಂಚಾರನ್ನು ಬಂದ್ ಮಾಡಲಾಗುತ್ತದೆ. ಹಾಗೆಯೇ ಫೆಬ್ರವರಿ 28ರಿಂದ ಬೆಂಗಳೂರಿನ ಈ ಭಾಗದ ರಸ್ತೆಗಳನ್ನು ಬಂದ್ ಮಾಡಲಾಗುತ್ತದೆ. ಹಾಗಾದರೆ ಕಾರಣ ಏನು ಹಾಗೂ ಯಾವ ಮಾರ್ಗದಲ್ಲಿ ರಸ್ತೆಗಳಳು ಮುಚ್ಚಲಿವೆ ಹಾಗೂ ಪರ್ಯಾಯ ಮಾರ್ಗಗಳ ವಿವರವನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಎಚ್‌ಎಎಲ್ ಏರ್‌ಪೋರ್ಟ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡುಬೀಸನಹಳ್ಳಿ ಜಂಕ್ಷನ್‌ನಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸುವ ಹಿನ್ನೆಲೆ ಫೆಬ್ರವರಿ 28, 2025ರಿಂದ ಒಂದು ವಾರ ವಾಹನ ಸಂಚಾರವನ್ನು ರದ್ದುಪಡಿಸಲಾಗುತ್ತದೆ. ಸಾರ್ವಜನಿಕರು ಮತ್ತು ವಾಹನ ಸವಾರರ ಹಿತದೃಷ್ಟಿಯಿಂದ ಈ ಕೆಳಕಂಡಂತೆ ಪ್ರಾಯೋಗಿಕವಾಗಿ ಸಂಚಾರ ಮಾರ್ಪಾಡು ಮಾಡಲಾಗಿರುತ್ತದೆ.

ಎಲ್ಲೆಲ್ಲಿ ವಾಹನ ಸಂಚಾರಕ್ಕ ನಿರ್ಬಂಧ?: ಕಾಡುಬಿಸನಹಳ್ಳಿ ಜಂಕ್ಷನ್ ಕಡೆಯಿಂದ ಕರಿಯಮ್ಮನ ಅಗ್ರಹಾರ ಕಡೆಗೆ ಸಂಚರಿಸುವ ಎಲ್ಲಾ ಮಾದರಿಯ ವಾಹನಗಳನ್ನು ನಿರ್ಬಂಧಿಸಲಾಗಿರುತ್ತದೆ. ಇನ್ನು ಪರ್ಯಾಯ ಮಾರ್ಗಗಗಳನ್ನು ನೋಡೋದಾದ್ರೆ, ಕಾಡುಬಿಸನಹಳ್ಳಿ ಜಂಕ್ಷನ್ ಕಡೆಯಿಂದ ಕರಿಯಮ್ಮನ ಅಗ್ರಹಾರ ಕಡೆಗೆ ಸಂಚರಿಸುವ ವಾಹನಗಳು ದೇವರಬೀಸನಹಳ್ಳಿ ಜಂಕ್ಷನ್ ಕಡೆಗೆ ಸಂಚರಿಸಿ ಯು ಟರ್ನ್ ಪಡೆದು ಸಕ್ರಾ ಆಸ್ಪತ್ರೆ ಮುಖ್ಯ ರಸ್ತೆ ಮೂಲಕ ಕರಿಯಮ್ಮನ ಅಗ್ರಹಾರ ಕಡೆಗೆ ಸಂಚರಿಸಬಹುದಾಗಿದೆ.
ವಾಹನ ಸಂಚಾರ ನಿರ್ಬಂಧ: ಇಂದು (ಫೆಬ್ರವರಿ 26) ಮಹಾಶಿವರಾತ್ರಿ ಹಬ್ಬ ಹಿನ್ನೆಲೆ ಬೆಂಗಳೂರು ನಗರದಲ್ಲಿನ ಶಿವನ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಉತ್ಸವಗಳು ನಡೆಯುತ್ತಿವೆ. ದೇವಸ್ಥಾನಕ್ಕೆ ಭಕ್ತರ ದಂಡೇ ಹರಿದುಬರುವ ನಿರೀಕ್ಷೆಯಿದೆ. ಈ ಹಿನ್ನೆಲೆ ಹಲವು ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆಯಿದೆ. ಆದ್ದರಿಂದ ಹಲವೆಡೆ ವಾಹನ ಸಂಚಾರ ನಿರ್ಬಂಧಿಸಲಾಗಿದ್ದು, ಮಾರ್ಗ ಬದಲಾವಣೆ ಬಗ್ಗೆ ಬೆಂಗಳೂರು ಸಂಚಾರಿ ಪೊಲೀಸರು ತಿಳಿಸಿದ್ದಾರೆ.
ಯಮಲೂರು ಮುಖ್ಯರಸ್ತೆಯಲ್ಲಿರುವ ಶಿವನ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಹಬ್ಬ ಮತ್ತು ಊರು ಹಬ್ಬದ ಪ್ರಯುಕ್ತ ಪೂಜಾ ಹಾಗೂ ಪಲ್ಲಕ್ಕಿ ಉತ್ಸವ ಕಾರ್ಯಕ್ರಮ ನಡೆಯುತ್ತಿದೆ. ಈ ವೇಳೆ ಸಾರ್ವಜನಿಕರ ಮತ್ತು ವಾಹನ ಸವಾರರ ಹಿತದೃಷ್ಟಿಯಿಂದ ಸಂಚಾರ ಮಾರ್ಪಾಡು ಮಾಡಲಾಗಿದೆ. ಇಂದು ಬೆಳಗ್ಗೆ 6 ಗಂಟೆಯಿಂದ ಗುರುವಾರ ಮಧ್ಯಾಹ್ನ 3 ಗಂಟೆಯವರೆಗೆ ಯಮಲೂರು ಮುಖ್ಯ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.
ಪರ್ಯಾಯ ಮಾರ್ಗಗಳು: ವರ್ತೂರು ರಸ್ತೆ ಕಡೆಯಿಂದ ಯಮಲೂರು ಕೋಡಿ ರಸ್ತೆ ಕಡೆಗೆ ಸಂಚರಿಸುವ ವಾಹನಗಳು ರೋಹನ್ ಅಪಾರ್ಟ್‌ಮೆಂಟ್ ಪಕ್ಕದ ರಸ್ತೆ ಮುಖಾಂತರ ಸಂಚರಿಸಿ ಕೆಂಪಾಪುರ ಮುಖ್ಯ ರಸ್ತೆಯ ಮೂಲಕ ಸಾಗಿ ಯಮಲೂರು ಕೋಡಿ ಕಡೆಗೆ ಸಂಚರಿಸಬಹುದಾಗಿದೆ.
ಇನ್ನು ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಶಿವೋಹಂ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮ ನಡೆಯುತ್ತಿದೆ. ಸಾರ್ವಜನಿಕರ ಮತ್ತು ವಾಹನ ಸವಾರರ ಹಿತದೃಷ್ಟಿಯಿಂದ ಬುಧವಾರ ಬೆಳಗ್ಗೆ 5 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ, ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗುವ ಸಾಧ್ಯತೆಯಿರುವುದರಿಂದ ಪರ್ಯಾಯವಾಗಿ ಸುರಂಜನ್ ದಾಸ್ ರಸ್ತೆ, ಹಳೇ ಮದ್ರಾಸ್ ರಸ್ತೆ ಮತ್ತು ಜೆ.ಬಿ.ನಗರ ಮುಖ್ಯ ರಸ್ತೆಗಳಲ್ಲಿ ಸಂಚಾರ ಮಾಡಬಹುದಾಗಿದೆ.
ವಾಹನ ನಿಲುಗಡೆಗೆ ನಿಷೇಧ: ಹಳೇ ವಿಮಾನ ನಿಲ್ದಾಣ ರಸ್ತೆಯ ಎರಡು ಬದಿಗಳಲ್ಲಿ ವಾಹನಗಳ ನಿಲುಗಡೆಗೆ ಸಂಪೂರ್ಣವಾಗಿ ನಿಷೇಧ ಹೇರಲಾಗಿದೆ. ಮತ್ತೊಂದೆಡೆ ಪರ್ಯಾಯ ಮಾರ್ಗಗಳನ್ನು ನೋಡೋದಾದರೆ, ದೇವಸ್ಥಾನಕ್ಕೆ ವಾಹನಗಳಲ್ಲಿ ಆಗಮಿಸುವ ಭಕ್ತಾದಿಗಳಿಗೆ ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಸರ್.ಎಂ ವಿಶ್ವೇಶ್ವರಯ್ಯ ಕಾಲೇಜು ಮೈದಾನ, ಹಳೇ ವಿಮಾನ ನಿಲ್ದಾಣ ರಸ್ತೆ ಇಲ್ಲಿ ಪಾರ್ಕಿಂಗ್ ವ್ಯವಸ್ಥೆಯನ್ನು ಮಾಡಲಾಗಿದೆ.












Click it and Unblock the Notifications