Bengaluru Traffic Boost: ಬೆಂಗಳೂರು ಟ್ರಾಫಿಕ್ ಜಾಮ್‌ಗೆ ಮುಕ್ತಿ; ಜಿಬಿಎ ಗುಡ್‌ನ್ಯೂಸ್: ಈ ವಿಷಯಕ್ಕೆ ಹೊಸ ಡೆಡ್‌ಲೈನ್

Bengaluru Traffic Boost: ಬೆಂಗಳೂರಿನ ಜನರಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಕೊನೆಗೂ ಗುಡ್‌ನ್ಯೂಸ್ ಕೊಟ್ಟಿದೆ. ನಗರದಲ್ಲಿ ಪ್ರಗತಿಯಲ್ಲಿರುವ ಈಜೀಪುರ ಮೇಲ್ಸೇತುವೆ, ಯಲಹಂಕ ಮೇಲ್ಸೇತುವೆ, ವಿಂಡ್ ಟನಲ್ ಕೆಳಸೇತುವೆ ಹಾಗೂ ಓಕಳೀಪುರಂ ಅಷ್ಟಪಥ ಕಾರಿಡಾರ್‌ನ ಬಾಕಿ ಕಾಮಗಾರಿಗಳಿಗೆ ವೇಗ ನೀಡಿ, ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಿಬಿಎ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಪ್ರಮುಖ ಮೇಲ್ಸೇತುವೆ ಹಾಗೂ ಕೆಳಸೇತುವೆ ಕಾಮಗಾರಿಗಳ ಪ್ರಗತಿ ಕುರಿತು ವರ್ಚುವಲ್ ಮೂಲಕ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಈಜೀಪುರ ಮೇಲ್ಸೇತುವೆ, ಯಲಹಂಕ ಮೇಲ್ಸೇತುವೆ, ವಿಂಡ್ ಟನಲ್ ಕೆಳಸೇತುವೆ ಹಾಗೂ ಓಕಳೀಪುರಂ ಅಷ್ಟಪಥ ಕಾರಿಡಾರ್ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

Bengaluru Traffic Boost

Bengaluru Traffic Boost: ಈಜೀಪುರ ಮೇಲ್ಸೇತುವೆ ಕಾಮಗಾರಿ

ಈಜೀಪುರ ಮೇಲ್ಸೇತುವೆಯ ಪ್ರಗತಿಯಲ್ಲಿರುವ ಕಾಮಗಾರಿಗಳಿಗೆ ವೇಗ ನೀಡಿ, ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ಪೋರ್ಟಲ್ ಫ್ರೇಮ್‌ 6 ಅನ್ನು ತ್ವರಿತವಾಗಿ ಅಳವಡಿಸಬೇಕು. ಇಂದಿರಾನಗರ ರ‍್ಯಾಂಪ್‌ನಲ್ಲಿ ವೆಟ್ ಮಿಕ್ಸ್ ಹಾಕುವ ಕಾಮಗಾರಿ ನಡೆಯುತ್ತಿದ್ದು, ರ‍್ಯಾಂಪ್ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ. ಜೊತೆಗೆ ಮಡಿವಾಳ ಭಾಗದ ರ‍್ಯಾಂಪ್ ಕಾಮಗಾರಿಯನ್ನು ಬೇಗ ಮುಗಿಸಲು ಸೂಚನೆ ನೀಡಿದ್ದಾರೆ. ಬೇರಿಂಗ್‌ಗಳನ್ನು ಅಳವಡಿಸಲು ಹೆಚ್ಚಿನ ಜ್ಯಾಕ್‌ಗಳ ಅಗತ್ಯವಿರುವುದರಿಂದ, ಅವುಗಳನ್ನು ಬಾಡಿಗೆ ಆಧಾರದ ಮೇಲೆ ಹೆಚ್ಚಿನ ಸಂಖ್ಯೆಯಲ್ಲಿ ಪಡೆದು ತ್ವರಿತವಾಗಿ ಅಳವಡಿಸುವಂತೆ ಗುತ್ತಿಗೆದಾರರಿಗೆ ನಿರ್ದೇಶನ ನೀಡಿದ್ದಾರೆ.

ಓಕಳೀಪುರಂ ಅಷ್ಟಪಥ ಕಾರಿಡಾರ್

ಚೆನ್ನೈ ರೈಲು ಹಳಿಯ ಕೆಳಭಾಗದಲ್ಲಿ ರೈಲ್ವೆ ಇಲಾಖೆ ವತಿಯಿಂದ ಎರಡು ಬಾಕ್ಸ್ ಪುಶಿಂಗ್ ಕಾಮಗಾರಿಗಳು ಪೂರ್ಣಗೊಂಡಿವೆ. ಇದೇ ಸ್ಥಳದಲ್ಲಿ ರೈಲು ನಿಲ್ದಾಣದ ಕಡೆಗೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣ, ಮಳೆನೀರು ಸರಾಗವಾಗಿ ಹರಿಯಲು 1200 ಮಿ.ಮೀ. ವ್ಯಾಸದ ಚರಂಡಿ ನಿರ್ಮಾಣ ಹಾಗೂ ರಿಟೈನಿಂಗ್ ವಾಲ್ ಕಾಮಗಾರಿಗಳಿಗೆ ವೇಗ ನೀಡಿ, ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅಲ್ಲದೆ ರೈಲ್ವೆ ಪ್ರದೇಶದಲ್ಲಿ ಸಂಗ್ರಹವಾಗಿರುವ ಮಣ್ಣು, ಭಗ್ನಾವಶೇಷಗಳು, ರೈಲ್ವೆ ಇಲಾಖೆಯ ಬೃಹತ್ ಕಾಂಕ್ರೀಟ್ ಸ್ಲ್ಯಾಬ್‌ಗಳು ಹಾಗೂ ಇತರೆ ತ್ಯಾಜ್ಯವನ್ನು ಕೂಡಲೇ ತೆರವುಗೊಳಿಸಬೇಕು. ಈ ಸಂಬಂಧ ರೈಲ್ವೆ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ, ಸೂಕ್ತ ಯೋಜನೆ ರೂಪಿಸಿ ಸ್ವಚ್ಛತಾ ಕಾರ್ಯ ಕೈಗೊಳ್ಳುವಂತೆ ಸೂಚನೆ ಕೊಟ್ಟಿದ್ದಾರೆ.

ವಿಂಡ್ ಟನಲ್ ಕೆಳಸೇತುವೆ

ವಿಂಡ್ ಟನಲ್ ಕೆಳಸೇತುವೆ ಕಾಮಗಾರಿ ಪ್ರಗತಿಯಲ್ಲಿದ್ದು, ಒಂದು ಭಾಗದಲ್ಲಿ ನಿರ್ಮಾಣವಾಗುತ್ತಿರುವ 74.23 ಮೀಟರ್ ಉದ್ದದ ರಿಟೈನಿಂಗ್ ವಾಲ್ ಪೈಕಿ ಈಗಾಗಲೇ 35.23 ಮೀಟರ್ ಕಾಮಗಾರಿ ಪೂರ್ಣಗೊಂಡಿದೆ. ಉಳಿದ ಸುಮಾರು 40 ಮೀಟರ್ ತಡೆಗೋಡೆ ಕಾಮಗಾರಿ ಅರ್ಧಕ್ಕಿಂತ ಹೆಚ್ಚು ಪೂರ್ಣಗೊಂಡಿದ್ದು, ಒಂದು ವಾರದೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ತಿಳಿಸಲಾಗಿದೆ. ಮಣಿಪಾಲ್ ಆಸ್ಪತ್ರೆ ಭಾಗದಲ್ಲಿ 174.04 ಮೀಟರ್ ಉದ್ದದ ತಡೆಗೋಡೆ ಪೈಕಿ ಸುಮಾರು 100 ಮೀಟರ್ ಕಾಮಗಾರಿ ಪ್ರಗತಿಯಲ್ಲಿದೆ. ಎಲ್ಲಾ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ, ನವೆಂಬರ್ ವೇಳೆಗೆ ಸಂಪೂರ್ಣ ಯೋಜನೆಯನ್ನು ಮುಕ್ತಾಯಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಯಲಹಂಕ ಮೇಲ್ಸೇತುವೆ

ಯಲಹಂಕ ಮೇಲ್ಸೇತುವೆ ಕಾಮಗಾರಿ ಶೇ. 80ರಷ್ಟು ಪೂರ್ಣಗೊಂಡಿದೆ. ಒಂದು ಭಾಗದಲ್ಲಿ ಕೆಪಿಟಿಸಿಎಲ್‌ನ ಉಪಯುಕ್ತತೆಗಳನ್ನು ಸ್ಥಳಾಂತರಿಸಬೇಕಿದ್ದು, ಈ ಸಂಬಂಧ ಕೂಡಲೇ ಅಗತ್ಯ ಕ್ರಮಗಳನ್ನು ಕೈಗೊಂಡು ಉಪಯುಕ್ತತೆಗಳನ್ನು ತ್ವರಿತವಾಗಿ ಸ್ಥಳಾಂತರಿಸಿ, ಉಳಿದ ಕಾಮಗಾರಿಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಭೆಯಲ್ಲಿ ವಿಶೇಷ ಆಯುಕ್ತರಾದ ನಿತೀಶ್, ನಗರ ಪಾಲಿಕೆ ಆಯುಕ್ತರಾದ ರಮೇಶ್ ಕೆ.ಎನ್. ಹಾಗೂ ಜಿ. ಜಗದೀಶ್, ಹೆಚ್ಚುವರಿ ಆಯುಕ್ತರಾದ ವೆಂಕಟ ಚಲಪತಿ, ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಪ್ರಹ್ಲಾದ್ ಸೇರಿದಂತೆ ಹಲವರು ಇದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+