Get Updates
Get notified of breaking news, exclusive insights, and must-see stories!

Bengaluru Traffic Jam: ಗುಡ್‌ ಬಾಯ್‌ ಬೆಂಗಳೂರು ಎಂದ ಆನಂದ್ ಮಹೀಂದ್ರಾ!

Bengaluru Traffic Jam: ಬೆಂಗಳೂರಿನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ಅದ್ಧೂರಿಯಾಗಿ ನಡೆಯುತ್ತಿದ್ದು. ಇದೇ ಸಂದರ್ಭದಲ್ಲಿ ಬೆಂಗಳೂರಿನ ಕೆಲವು ಏರಿಯಾ ಹಾಗೂ ಪ್ರದೇಶಗಳಲ್ಲಿ ಮಿತಿ ಮೀರಿದ ಟ್ರಾಫಿಕ್‌ ಜಾಮ್‌ ಉಂಟಾಗುತ್ತಿದೆ. ದೇಶ - ವಿದೇಶದಿಂದ ಹೂಡಿಕೆದಾರರು, ಗಣ್ಯರು ಬೆಂಗಳೂರಿಗೆ ಬರುತ್ತಿದ್ದು ಈ ರೀತಿ ಜನ ಬರುತ್ತಿರುವ ಸಂದರ್ಭದಲ್ಲಿಯೇ ಬೆಂಗಳೂರಿನಲ್ಲಿ ಟ್ರಾಫಿಕ್‌ ಜಾಮ್‌ ಮಿತಿ ಮೀರಿದ್ದು ಚರ್ಚೆಗೆ ಕಾರಣವಾಗಿದೆ. ಈ ರೀತಿ ಇರುವಾಗಲೇ ಮಹೀಂದ್ರ & ಮಹೀಂದ್ರ ಸಂಸ್ಥೆಯ ಮಾಲೀಕರಾದ ಆನಂದ್ ಮಹೀಂದ್ರಾ ಅವರು ಮಾಡಿರುವ ಟ್ವೀಟ್‌ವೊಂದು ಸೋಷಿಯಲ್‌ದಲ್ಲಿ ವೈರಲ್ ಆಗುತ್ತಿದೆ.

ನಗರದ ಟ್ರಾಫಿಕ್‌ ಜಾಮ್‌ ಸಮಸ್ಯೆ ಇತ್ತೀಚಿನ ದಿನಗಳಲ್ಲಿ ಮಿತಿ ಮೀರುತ್ತಿದೆ. ಅದರಲ್ಲೂ ನಗರದ ಕೆಲವು ಭಾಗದಲ್ಲಿ ನಿತ್ಯವೂ ಟ್ರಾಫಿಕ್‌ ಜಾಮ್‌ ಭಯಂಕರವಾಗಿ ಹೆಚ್ಚಳವಾಗುತ್ತಿದೆ. ನಗರದಲ್ಲಿ ಟ್ರಾಫಿಕ್‌ ಜಾಮ್‌ ಸಮಸ್ಯೆಯ ಬಗ್ಗೆ ನಿರಂತರವಾಗಿ ಚರ್ಚೆಗಳು ನಡೆಯುತ್ತಲ್ಲೇ ಇದೆ. ಈ ರೀತಿ ಇರುವಾಗಲೇ ಆನಂದ್ ಮಹೀಂದ್ರಾ ಅವರು ಸಹ ಈ ಬಗ್ಗೆ ಟ್ವೀಟ್‌ವೊಂದನ್ನು ಮಾಡಿದ್ದು. ಭಾರೀ ವೈರಲ್ ಆಗುತ್ತಿದೆ.

Bengaluru Traffic Jam Anand Mahindra Good Boy Bengaluru Tweet Goes Viral

ಬೆಂಗಳೂರಿನಲ್ಲಿ ಜನಸಂಖ್ಯೆ ಹಾಗೂ ವಾಹನಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಇಲ್ಲಿಗೆ ಬರುವವರ ಸಂಖ್ಯೆಯೂ ಹೆಚ್ಚಳವಾಗುತ್ತಿದೆ. ಆದರೆ ಟ್ರಾಫಿಕ್‌ ಜಾಮ್‌ ಸಮಸ್ಯೆಗೆ ಮಾತ್ರ ಮುಕ್ತಿ ಸಿಗುತ್ತಿಲ್ಲ. ಇನ್ನೂ ಹೆಚ್ಚಳವಾಗುತ್ತಿದೆ. ಅದರಲ್ಲೂ ರಾಜ್ಯ ಸರ್ಕಾರವು ಬೆಂಗಳೂರು ಮೆಟ್ರೋ ಹಾಗೂ ಬಸ್‌ದರಗಳನ್ನು ಹೆಚ್ಚಳ ಮಾಡಿದ್ದು. ಇದರಿಂದ ಪಬ್ಲಿಕ್‌ ಟ್ರಾನ್ಸ್‌ಪೋರ್ಟ್‌ ಬಳಕೆ ಮಾಡುವವರ ಸಂಖ್ಯೆ ಇನ್ನಷ್ಟು ಇಳಿಕೆಯಾಗಿದೆ. ಇದು ಪರೋಕ್ಷವಾಗಿ ಬೆಂಗಳೂರಿನಲ್ಲಿ ಟ್ರಾಫಿಕ್‌ ಜಾಮ್‌ ಸಮಸ್ಯೆ ಹೆಚ್ಚಳವಾಗುವುದಕ್ಕೂ ಕಾರಣವಾಗಿದೆ.

ಆನಂದ್ ಮಹೀಂದ್ರಾ ಟ್ವೀಟ್ ವೈರಲ್

ಆನಂದ್ ಮಹೀಂದ್ರಾ ಅವರು ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆಕ್ಟೀವ್ ಆಗಿ ಇರುತ್ತಾರೆ. ಇದೀಗ ಬೆಂಗಳೂರಿನಲ್ಲಿ ನಡೆಯುತ್ತಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಅವರು ಭಾಗವಹಿಸಿದ್ದು. ಇಲ್ಲಿಂದ ಹೋಗುವಾಗ ಅವರು ಸೋಷಿಯಲ್‌ ಮೀಡಿಯಾದಲ್ಲಿ ಬೆಂಗಳೂರಿನ ಬಗ್ಗೆ ಟ್ವೀಟ್‌ ಮಾಡಿದ್ದಾರೆ. ಗುಡ್ ಬೈ ಬೆಂಗಳೂರು... ನನ್ನ ಮಹೀಂದ್ರ ಬಿಇ-6 ಕಾರಿನ ವೇಗಕ್ಕೆ ಥ್ಯಾಂಕ್ಸ್‌ ಎಂದಿದ್ದಾರೆ. ಬೆಂಗಳೂರಿನಲ್ಲಿ ಹೆಚ್ಚು ಟ್ರಾಫಿಕ್ ಸಮಸ್ಯೆ ಇರುವುದರ ಅನುಕೂಲವೆಂದರೆ ವಾಹನಗಳು ಶೋರೂಂನಲ್ಲಿ ಇರುವಂತೆ ಇರುತ್ತವೆ ಎಂದು ಹೇಳಿದ್ದಾರೆ.

ಬೆಂಗಳೂರು ಟ್ರಾಫಿಕ್‌ ಜಾಮ್‌ನಲ್ಲಿ ನಿಮ್ಮ ಪಕ್ಕದಲ್ಲಿ ಟ್ರಾಫಿಕ್‌ ಜಾಮ್‌ನಲ್ಲಿ ಸಿಲುಕಿರುವ ಪ್ರತಿಯೊಬ್ಬರಿಗೂ ಕಾರನ್ನು ನೋಡುವುದಕ್ಕೆ ತುಂಬಾನೇ ಸಮಯ ಸಿಗುತ್ತೆ ಎಂದು ಅವರು ಹೇಳಿದ್ದಾರೆ.

ಬೆಂಗಳೂರು ಟ್ರಾಫಿಕ್‌ ಜಾಮ್‌ನಿಂದ ಮುಜುಗರ: ಇನ್ನು ಬೆಂಗಳೂರಿನಲ್ಲಿ ಮಿತಿ ಮೀರುತ್ತಿರುವ ಟ್ರಾಫಿಕ್‌ ಜಾಮ್‌ನಿಂದ ಮುಜುಗರ ವುಂಟಾಗುತ್ತಿರುವುದು ಸುಳ್ಳಲ್ಲ. ಬೆಂಗಳೂರಿನಲ್ಲಿ ವಾಹನ ಸವಾರರು ತಾಸುಗಟ್ಟಲ್ಲೆ ಟ್ರಾಫಿಕ್‌ನಲ್ಲಿ ಸಿಲುಕುವಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿದೆ.

ಬೆಂಗಳೂರಿನಲ್ಲಿ ನಡೆಯುತ್ತಿರುವ ಜಾಗತಿಕ ಹೂಡಿಕೆದಾರರ ಸಮಾವೇಶ ಹಾಗೂ ಬೆಂಗಳೂರು ಏರ್‌ ಶೋ ಭಾಗದಲ್ಲಿ ಕಾರ್‌ಗಳು ಕಿ.ಮೀ ಗಟ್ಟಲೆ ನಿಂತಿರುವ ಫೋಟೋ ಹಾಗೂ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+