Bengaluru Traffic: ಬೆಂಗಳೂರಿನ ಇಬ್ಬಲೂರು ಬಳಿ 4 ಕಿ.ಮೀಟರ್ಗೂ ಹೆಚ್ಚು ದೂರ ಟ್ರಾಫಿಕ್ ಜಾಮ್, ಪರದಾಟ
ಬೆಂಗಳೂರು, ಮೇ, 16: ಬೆಂಗಳೂರಿನ ಇಬ್ಬಲೂರು ಬಳಿ ಲಾರಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಮರ ರಸ್ತೆಗೆ ಉರುಳಿದೆ. ಇದರ ಪರಿಣಾಮ 4 ಕಿಲೋ ಮೀಟರ್ ಹೆಚ್ಚು ದೂರ ಸಂಚಾರ ದಟ್ಟಣೆ ಉಂಟಾಗಿದ್ದು, ವಾಹನ ಸವಾರರು ಪರದಾಡಿದ್ದಾರೆ.
ಈಗಾಗಲೇ ಟ್ರಾಫಿಕ್ ಜಾಮ್ನಿಂದ ಸಿಲಿಕಾನ್ ಸಿಟಿ ಬೆಂಗಳೂರಿನ ಜನ ಬೇಸತ್ತುಹೋಗಿದ್ದಾರೆ. ಅದರಲ್ಲೂ ಇಂತಹ ಭೀಕರ ಅಪಘಾತಗಳು ಸಂಭವಿಸಿದರೆ ವಾಹನ ಸವಾರರ ಆಕ್ರೋಶ ಮುಗಿಲು ಮಟ್ಟುವುದಂತೂ ತಪ್ಪದ್ದಲ್ಲ.

ಹೀಗೆಯೆ ಇಬ್ಬಲೂರು ಬಳಿ ಬೃಹತ್ ಮರ ರಸ್ತೆಗೆ ಅಡ್ಡಲಾಗಿ ಉರುಳಿದ ಪರಿಣಾಮ ವಾಹನ ಸವಾರರಿಗೆ ಬದಲಿ ಮಾರ್ಗವನ್ನು ಸೂಚಿಸಲಾಗಿದೆ. ಸಿಲ್ಕ್ ಬೋರ್ಡ್ನಿಂದ ಇಬ್ಬುಲೂರು ಜಂಕ್ಷನ್ ಕಡೆಗೆ ಬರುವ ವಾಹನ ಸವಾರರು ಬದಲಿ ರಸ್ತೆ ಮಾರ್ಗದಲ್ಲಿ ಚಲಿಸುವಂತೆ ಟ್ರಾಫಿಕ್ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.
A truck hit a tree near the military gate of the service road near Ibbalur on the Outer Ring Road and the tree fell down causing traffic congestion, the motorists coming from Silk Board towards Ibbulur Junction are hereby requested to move on an alternate road route. pic.twitter.com/54vTYiVQBB
— Sujeetha Salman , IPS (@DCPSouthTrBCP) May 16, 2023
ಬೆಳಗ್ಗೆ 8ಗಂಟಿಯಿಂದಲೂ ಬೆಂಗಳೂರು, ಬೊಮ್ಮನಹಳ್ಳಿ, ಕೋರಮಂಗಲ, ಎಚ್ಎಸ್ಆರ್, ಮಡಿವಾಳದಲ್ಲಿ ಸಂಚಾರ ದಟ್ಟಣೆ ಉಂಟಾಗಿದ್ದು, ವಾಹನ ಸವಾರರು ಹೈರಣಾಗಿದ್ದಾರೆ. ಅಲ್ಲದೆ ವಾಹನ ಸವಾರರು ಸಂಚಾರ ಪೊಲೀಸರ ವಿರುದ್ಧ ಕೆಂಡಕಾರುತ್ತಿದ್ದಾರೆ. ಸುಮಾರು 3 ಗಂಟೆಗಳ ಕಾಲ ಟ್ರಾಫ್ ಜಾಮ್ ಆಗಿದ್ದು, ಇದರಿಂದ ಬೇಸತ್ತ ಸ್ಥಳೀಯರು ಕೂಡ ಪೊಲೀಸರ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.
-
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications