Bengaluru Traffic: ಟ್ರಾಫಿಕ್ ಸಮಸ್ಯೆಗೆ ಬ್ರೇಕ್: ಸರ್ಕಾರಿ ಶಾಲೆಗಳ ಸಮಯ ಬದಲಾವಣೆಗೆ ಮುಂದಾದ ಕರ್ನಾಟಕ ಸರ್ಕಾರ

Bengaluru Traffic: ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆಯು ಮಿತಿಮೀರಿದೆ. ಅದರಲ್ಲೂ ಪೀಕ್ ಅವರ್‌ಗಳಲ್ಲಿ ಬೆಂಗಳೂರಿನಲ್ಲಿ ಒಂದು ಕಡೆಯಿಂದ ಮತ್ತೊಂದು ಕಡೆ ಹೋಗುವುದಕ್ಕೆ ತಾಸುಗಟ್ಟಲೆ ಸಮಯಬೇಕಾಗುತ್ತದೆ. ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆಯನ್ನು ತಪ್ಪಿಸುವ ಉದ್ದೇಶದಿಂದ ಬೆಂಗಳೂರು ಸಂಚಾರ ಪೊಲೀಸರು ಹಲವು ಮಾರ್ಗಗಳನ್ನು ಬದಲಾವಣೆ ಮಾಡುತ್ತಿದ್ದಾರೆ. ಫ್ಲೈಓವರ್‌ಗಳಲ್ಲಿ ಬೈಕ್ ಸಂಚಾರಕ್ಕೆ ಬ್ರೇಕ್ ಸೇರಿದಂತೆ ಹಲವು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಇದೀಗ ಕರ್ನಾಟಕ ಸರ್ಕಾರವು ಶೀಘ್ರದಲ್ಲೇ ಬೆಂಗಳೂರಿನಲ್ಲಿ ಸರ್ಕಾರಿ ಶಾಲೆಗಳ ಸಮಯವನ್ನು ಪರಿಷ್ಕರಿಸುವ (ಬದಲಾವಣೆ ಮಾಡವ) ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಸರ್ಕಾರಿ ಶಾಲೆಯ ಸಮಯ ಬದಲಾವಣೆಗೆ ಸಂಬಂಧಿಸಿದಂತೆ ಸಂಪೂರ್ಣ ವಿವರ ಇಲ್ಲಿದೆ.

ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಹೆಚ್ಚಾಗುತ್ತಿದ್ದು, ಇದೀಗ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳ ಸಮಯ ಬದಲಾವಣೆಗೆ ಸರ್ಕಾರ ಮುಂದಾಗಿದೆ. ಬೆಂಗಳೂರಿನ ಶಿಕ್ಷಕರ ಮನವಿಯನ್ನು ಅನುಸರಿಸಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಶನಿವಾರ ಸಂಬಂಧಪಟ್ಟ ಇತರ ಇಲಾಖೆಗಳೊಂದಿಗೆ ಈ ವಿಷಯದ ಬಗ್ಗೆ ಚರ್ಚಿಸುವುದಾಗಿ ಹೇಳಿದ್ದಾರೆ.

Bengaluru Traffic Karnataka Govt May Change Government School Timings to Ease Traffic

ಬೆಂಗಳೂರಿನಲ್ಲಿ ಟ್ರಾಫಿಕ್ ಕಾರಣದಿಂದಾಗಿ ಶಾಲೆಗಳಿಗೆ ಶಿಕ್ಷಕರು ತಡವಾಗಿ ತಲುಪುತ್ತಿದ್ದಾರೆ. ಹೀಗಾಗಿ, ಸಮಯವನ್ನು ಬದಲಾಯಿಸಲು ವಿನಂತಿಯನ್ನು ಸಲ್ಲಿಸಿದ್ದಾರೆ. ನಾನು ಇತರ ಇಲಾಖೆಗಳೊಂದಿಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಸಚಿವ ಮಧು ಬಂಗಾರಪ್ಪ ಅವರು ಹೇಳಿದ್ದಾರೆ.

ಪ್ರಸ್ತುತ ಬೆಂಗಳೂರಿನ ಸರ್ಕಾರಿ ಶಾಲೆಗಳು ಬೆಳಿಗ್ಗೆ 10.30 ರಿಂದ ಸಂಜೆ 4.30 ರವರೆಗೆ ಕಾರ್ಯನಿರ್ವಹಿಸುತ್ತವೆ. ಆದಾಗ್ಯೂ, ಖಾಸಗಿ ಶಾಲೆಗಳು ಬೆಳಿಗ್ಗೆ 8.45 ರಿಂದ ಮಧ್ಯಾಹ್ನ 3.45 ರವರೆಗೆ ಕಾರ್ಯನಿರ್ವಹಿಸುತ್ತವೆ. ಬೆಳಿಗ್ಗೆ 10.30 ಕ್ಕೆ ಶಾಲೆ ತಲುಪಲು, ನಮ್ಮಲ್ಲಿ ಹಲವರು ಕನಿಷ್ಠ ಒಂದೂವರೆ ಗಂಟೆ ಮುಂಚಿತವಾಗಿ ಹೊರಡಬೇಕಾಗುತ್ತದೆ. ಇದರ ಹೊರತಾಗಿಯೂ, ನಾವು ಕನಿಷ್ಠ ಒಂದು ಗಂಟೆ ಸಂಚಾರದಲ್ಲಿಯೇ ಕಳೆಯುತ್ತಿದ್ದೇವೆ ಎಂದು ಶಿಕ್ಷಕರೊಬ್ಬರು ಹೇಳಿದರು.

ಅಲ್ಲದೆ ಸರ್ಕಾರಿ ಶಾಲೆಗಳ ಸಮಯವು ತರಗತಿಗಳ ಮೇಲೂ ಪರಿಣಾಮ ಬೀರುತ್ತಿದೆ. ಹಾಲು, ಮೊಟ್ಟೆ ಮತ್ತು ಮಧ್ಯಾಹ್ನದ ಊಟವನ್ನು ವಿತರಿಸಲು ಕನಿಷ್ಠ ಒಂದು ಗಂಟೆ ಕಳೆಯುತ್ತೇವೆ ಎಂದು ಶಿಕ್ಷಕರು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸೂಕ್ತ ಸಮಯ ಬೆಳಿಗ್ಗೆ 8.30 ರಿಂದ ಮಧ್ಯಾಹ್ನ 3.30 ರವರೆಗೆ ಇರುತ್ತದೆ ಏಕೆಂದರೆ ವಿದ್ಯಾರ್ಥಿಗಳು ಸಹ ನಿಯಮಿತ ಸಂಚಾರ ಪ್ರಾರಂಭವಾಗುವ ಮೊದಲು ಮನೆಗೆ ತಲುಪಬಹುದು ಶಿಕ್ಷಕರು ಹೇಳಿದ್ದಾರೆ ಎಂದು ಹೇಳಲಾಗಿದೆ.

Bengaluru Traffic: ಸರ್ಕಾರಿ ಶಾಲೆಗಳ ಸಮಯ ಬದಲಾವಣೆ

ಬೆಂಗಳೂರಿನಲ್ಲಿ ಸರ್ಕಾರಿ ಶಾಲೆಗಳ ಸಮಯ ಬದಲಾವಣೆಯ ಬಗ್ಗೆ ಚರ್ಚೆ ನಡೆದಿದೆ. ಬೆಂಗಳೂರಿನಲ್ಲಿ ಸರ್ಕಾರಿ ಶಾಲೆಗಳು ಬೆಳಿಗ್ಗೆ 10.30 ರಿಂದ ಸಂಜೆ 4.30 ರವರೆಗೆ ಕಾರ್ಯನಿರ್ವಹಿಸುತ್ತವೆ. ಆದಾಗ್ಯೂ, ಖಾಸಗಿ ಶಾಲೆಗಳು ಬೆಳಿಗ್ಗೆ 8.45 ರಿಂದ ಮಧ್ಯಾಹ್ನ 3.45 ರವರೆಗೆ ಕಾರ್ಯನಿರ್ವಹಿಸುತ್ತವೆ. ಇದರ ಬದಲಾಗಿ ಬೆಳಿಗ್ಗೆ 8.30 ರಿಂದ ಮಧ್ಯಾಹ್ನ 3.30 ರವರೆಗೆ ತರಗತಿಗಳನ್ನು ನಡೆಸಬೇಕು ಎಂದು ಶಿಕ್ಷಕರು ಮನವಿ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+