Bengaluru Traffic: ಟ್ರಾಫಿಕ್ ನಿಯಂತ್ರಣಕ್ಕೆ ಹೊಸ ಪ್ಲ್ಯಾನ್; ಅಂಕ ಆಧಾರಿತ ಲೈಸೆನ್ಸ್, ದಂಡ ಹೆಚ್ಚಳ ಸಾಧ್ಯತೆ ?

Bengaluru Traffic: ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಕಂಟ್ರೋಲ್‌ಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರವು ಮಹತ್ವದ ಕ್ರಮ ತೆಗೆದುಕೊಳ್ಳಲು ಮುಂದಾಗಿದೆ. ಬೆಂಗಳೂರಿನ ಸಂಚಾರ ದಟ್ಟಣೆ ನಿಯಂತ್ರಣ, ರಸ್ತೆ ಸುರಕ್ಷತೆ ಹೆಚ್ಚಿಸುವುದು ಹಾಗೂ ಸಂಚಾರಿ ನಿಯಮಗಳ ಉಲ್ಲಂಘನೆಗೆ ಪರಿಣಾಮಕಾರಿ ಕಡಿವಾಣ ಹಾಕುವ ನಿಟ್ಟಿನಲ್ಲಿ ವಿಕಾಸಸೌಧದಲ್ಲಿ ಗೃಹ ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ಜಂಟಿ ವಿಮರ್ಶಾ ಸಭೆಯನ್ನು ಬುಧವಾರ ನಡೆಸಲಾಗಿದೆ.

ಸಭೆಯಲ್ಲಿ ಹಲವು ಪ್ರಮುಖ ವಿಷಯಗಳನ್ನು ಚರ್ಚೆ ಮಾಡಲಾಗಿದೆ. ವಿವಿಧ ಸಂಚಾರಿ ಉಲ್ಲಂಘನೆಗಳಿಗೆ ಅಂಕಗಳನ್ನು ನಿಗದಿಪಡಿಸಿ, ನಿರ್ದಿಷ್ಟ ಮಿತಿಯನ್ನು ತಲುಪಿದಾಗ ಚಾಲನಾ ಪರವಾನಗಿಯನ್ನು ಅಮಾನತುಗೊಳಿಸುವ ಅಂಕ ಆಧಾರಿತ ಚಾಲನಾ ಪರವಾನಗಿ ವ್ಯವಸ್ಥೆ ಜಾರಿಗೆ ತರುವ ಕುರಿತು ಚರ್ಚೆ ಮಾಡಲಾಗಿದೆ. ಚಾಲನಾ ಪರವಾನಗಿ ಅಮಾನತು ಹಾಗೂ ಸಂಚಾರಿ ಉಲ್ಲಂಘನೆಗಳ ಮಾಹಿತಿಯ ಸಮಗ್ರ ನಿರ್ವಹಣೆಗಾಗಿ ಸಾರಿಗೆ ಇಲಾಖೆಯ ಸಾರಥಿ ವ್ಯವಸ್ಥೆಯನ್ನು ಬೆಂಗಳೂರು ಸಂಚಾರ ಪೊಲೀಸರ ಇ-ಚಲನ್ ವ್ಯವಸ್ಥೆಯೊಂದಿಗೆ ನೇರವಾಗಿ ಸಂಯೋಜಿಸುವ ಕುರಿತು ಪರಾಮರ್ಶೆ ನಡೆಸಲಾಗಿದೆ.

Bengaluru Traffic New Plan to Curb Jams Points-Based Licences and Higher Fines Under Consideration

ಅಲ್ಲದೆ ಮುಂದುವರಿದು ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಹಾಗೂ ಸಾರ್ವಜನಿಕ ಸುರಕ್ಷತೆಗೆ ತೊಂದರೆ ಉಂಟುಮಾಡುವ ಸಂಚಾರಿ ಉಲ್ಲಂಘನೆಗಳಿಗೆ ವಿಧಿಸಲಾಗುತ್ತಿರುವ ದಂಡದ ಮೊತ್ತ ಹೆಚ್ಚಿಸುವುದನ್ನು ಪರಿಶೀಲನೆ ಮಾಡಲಾಗಿದೆ. ಐದು ಅಥವಾ ಅದಕ್ಕಿಂತ ಹೆಚ್ಚು ಸಂಚಾರಿ ಉಲ್ಲಂಘನೆಗಳನ್ನು ಮಾಡಿರುವವರನ್ನು ಗುರುತಿಸಿ, ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದು, ಬಾಕಿ ಇರುವ ದಂಡ ವಸೂಲಿ ಮಾಡುವುದು ಹಾಗೂ ಅಗತ್ಯವಿರುವಲ್ಲಿ ವಾಹನಗಳನ್ನು ತಡೆಹಿಡಿಯುವುದು ಅಥವಾ ಕಪ್ಪುಪಟ್ಟಿಗೆ ಸೇರಿಸುವುದು.

ಪದೇ ಪದೇ ನಿಯಮ ಉಲ್ಲಂಘಿಸುವ ಚಾಲಕರಿಗೆ ಕಡ್ಡಾಯ ರಸ್ತೆ ಸುರಕ್ಷತಾ ತರಬೇತಿ ಮತ್ತು ಅರಿವು ಕಾರ್ಯಕ್ರಮ ರೂಪಿಸುವುದು. ಅರೆ ಹೆಲ್ಮೆಟ್‌ಗಳ ಉತ್ಪಾದನೆ ಹಾಗೂ ಮಾರಾಟದ ಮೇಲೆಯೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು. ರಸ್ತೆ ಸುರಕ್ಷತಾ ಮಾನದಂಡಗಳಿಗೆ ಅನುಗುಣವಾಗಿರದ ಅರೆ ಹೆಲ್ಮೆಟ್‌ಗಳ ಉತ್ಪಾದನೆಯನ್ನು ನಿಷೇಧಿಸುವುದು. ಇಂತಹ ಹೆಲ್ಮೆಟ್‌ಗಳನ್ನು ತಯಾರಿಸುವ ಉತ್ಪಾದಕರು ಹಾಗೂ ಮಾರಾಟಗಾರರ ವಿರುದ್ಧ ಕ್ರಮ ಕೈಗೊಳ್ಳುವುದು. ಶಬ್ದ ಮಾಲಿನ್ಯ ಹಾಗೂ ರಸ್ತೆ ಸುರಕ್ಷತೆಗೆ ಕಾರಣವಾಗುವ ಅನಧಿಕೃತ ಹಾರ್ನ್‌ಗಳು, ಮಾರ್ಪಡಿಸಿದ ಸೈಲೆನ್ಸರ್‌ಗಳು ಹಾಗೂ ಅತಿಯಾದ ಬೆಳಕು ನೀಡುವ ಎಲ್‌ಇಡಿ ದೀಪಗಳ ಮಾರಾಟ ಮತ್ತು ಬಳಕೆಯ ವಿರುದ್ಧ ಕ್ರಮ ಜಾರಿ ಮಾಡುವ ಬಗ್ಗೆಯೂ ಚರ್ಚಿಸಲಾಗಿದೆ.

ಕಡಿಮೆ ವೇಗದ ಬ್ಯಾಟರಿ ಚಾಲಿತ ವಿದ್ಯುತ್‌ ದ್ವಿಚಕ್ರ ವಾಹನಗಳಿಗೂ ಅಗತ್ಯ ಸಂಚಾರಿ ನಿಯಮಗಳನ್ನು ಅನ್ವಯಿಸುವುದು, ವಾಹನಗಳ ಗುರುತಿಸುವಿಕೆ ಹಾಗೂ ಚಾಲಕರ ಹೊಣೆಗಾರಿಕೆಯನ್ನು ಖಚಿತಪಡಿಸುವುದು ಸೇರಿದಂತೆ ಸೂಕ್ತ ನಿಯಂತ್ರಣ ಕ್ರಮಗಳನ್ನು ಜಾರಿಗೆ ತರುವುದು. ವಿವಿಧ ಸಾರಿಗೆ ಸಂಸ್ಥೆಗಳು ಹಾಗೂ ಸಂಚಾರ ಸೇವಾ ಸಂಸ್ಥೆಗಳು ವಿಧಿಸುವ ದರಗಳಲ್ಲಿ "ಒಂದು ನಗರ-ಒಂದು ದರ" ನೀತಿ ಜಾರಿಗೆ ತರುವುದು. ದರ ಏರಿಳಿತವನ್ನು ನಿಯಂತ್ರಿಸುವುದು, ವಿವಿಧ ಸೇವಾ ಸಂಸ್ಥೆಗಳ ನಡುವೆ ನ್ಯಾಯಯುತ ಸ್ಪರ್ಧೆಗೆ ಅವಕಾಶ ಕಲ್ಪಿಸುವುದು ಹಾಗೂ ಅನಗತ್ಯ ವಾಹನ ಸಂಚಾರವನ್ನು ಕಡಿಮೆ ಮಾಡುವುದು.

ಸಂಚಾರ ದಟ್ಟಣೆ ಕಡಿಮೆ ಮಾಡಲು ಕಾರ್ ಹಂಚಿಕೆ ಮತ್ತು ಪ್ರಯಾಣ ಹಂಚಿಕೆ ವ್ಯವಸ್ಥೆಗೆ ರಾಜ್ಯ ಮಟ್ಟದಲ್ಲಿ ಸೂಕ್ತ ನೀತಿ ರೂಪಿಸುವುದು. ಅಪ್ಲಿಕೇಶನ್‌ ಆಧಾರಿತ ಕಾರ್ ಹಂಚಿಕೆ ಸೇವೆಗಳಿಗೆ ಅಗತ್ಯ ನೀತಿ ರೂಪಿಸುವುದು, ಪಾರ್ಕ್‌-ಆಂಡ್‌-ರೈಡ್‌ ಕೇಂದ್ರಗಳನ್ನು ಅಭಿವೃದ್ಧಿಪಡಿಸುವುದು. ಎಲ್ಲ ಅರ್ಹ ವಾಹನಗಳಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ ಕಡ್ಡಾಯಗೊಳಿಸುವುದು ಹಾಗೂ ಪ್ರಮಾಣಪತ್ರ ಪಡೆಯದ ವಾಹನಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು. ಬಾಕಿ ಇರುವ ಸಂಚಾರಿ ದಂಡ ಪಾವತಿಸದಿದ್ದಲ್ಲಿ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ ನೀಡದಿರುವುದು ಹಾಗೂ ಸಾರಿಗೆ ಮತ್ತು ಸಂಚಾರಿ ಪೊಲೀಸ್ ಇಲಾಖೆಗಳ ಜಂಟಿ ಕಾರ್ಯಾಚರಣೆ ಕೈಗೊಳ್ಳುವುದು.

ಹಳೆಯ, ಹೆಚ್ಚಿನ ಮಾಲಿನ್ಯ ಉಂಟುಮಾಡುವ ಹಾಗೂ ಯಾಂತ್ರಿಕವಾಗಿ ಅನರ್ಹವಾಗಿರುವ ವಾಹನಗಳನ್ನು ಹಂತ ಹಂತವಾಗಿ ರಸ್ತೆಗಳಿಂದ ತೆರವುಗೊಳಿಸಲು ವಾಹನ ಸ್ಕ್ರಾಪ್ ನೀತಿ, ತೆರಿಗೆ ರಿಯಾಯಿತಿ ಸೇರಿದಂತೆ ಲಭ್ಯವಿರುವ ಪ್ರೋತ್ಸಾಹಕ ಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವುದು. ಮೆಟ್ರೊ ಸೇವೆ ಬಳಸುವ ಪ್ರಯಾಣಿಕರಿಗೆ ಮೊದಲ ಮತ್ತು ಕೊನೆಯ ಮೈಲಿ ಸಂಪರ್ಕವನ್ನು ಸುಲಭಗೊಳಿಸುವ ಉದ್ದೇಶದಿಂದ ಹಂಚಿಕೆ ಆಟೋ ಸೇವೆಗಳಿಗೆ ಸೂಕ್ತ ಮಾರ್ಗ, ನಿಗದಿತ ದರ ಹಾಗೂ ಪರವಾನಗಿ ವ್ಯವಸ್ಥೆ ರೂಪಿಸುವುದು.

ನಗರದ ಪ್ರಮುಖ ರಸ್ತೆಗಳ ಮೇಲೆ ಬಿಎಂಟಿಸಿ ವಿದ್ಯುತ್ ಬಸ್‌ಗಳು ಕೆಟ್ಟು ನಿಂತು ಸಂಚಾರಕ್ಕೆ ಅಡ್ಡಿಯಾಗುತ್ತಿರುವ ಹಿನ್ನೆಲೆಯಲ್ಲಿ, ಅಂತಹ ವಾಹನಗಳನ್ನು ತ್ವರಿತವಾಗಿ ತೆರವುಗೊಳಿಸಲು ವಿಶೇಷ ತಾಂತ್ರಿಕ ತಂಡ ಹಾಗೂ ತುರ್ತು ಸ್ಪಂದನಾ ವ್ಯವಸ್ಥೆ ರೂಪಿಸುವುದು. ಹೊರ ವರ್ತುಲ ರಸ್ತೆಯ ತಂತ್ರಜ್ಞಾನ ವಲಯಗಳಲ್ಲಿ ಸಂಚಾರ ನಿರ್ವಹಣೆ ಸುಧಾರಿಸುವ ನಿಟ್ಟಿನಲ್ಲಿ ಬಿಎಂಟಿಸಿ ಸೇವೆ ವಿಸ್ತರಣೆ, ಮೆಟ್ರೊ ನಿಲ್ದಾಣಗಳಿಂದ ತಂತ್ರಜ್ಞಾನ ಉದ್ಯಾನಗಳಿಗೆ ಪೂರಕ ಬಸ್ ಸೇವೆ, ಗರಿಷ್ಠ ಸಂಚಾರದ ಅವಧಿಯಲ್ಲಿ ಬಸ್‌ಗಳ ಸಂಖ್ಯೆಯನ್ನು ಹೆಚ್ಚಿಸುವುದು ಹಾಗೂ ಸಂಸ್ಥೆಗಳ ಹಂಚಿಕೆ ಸಾರಿಗೆ ವ್ಯವಸ್ಥೆಗೆ ಉತ್ತೇಜನ ನೀಡುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದೆ.

ಅಲ್ಲದೆ, ಗೃಹ ಮತ್ತು ಸಾರಿಗೆ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವ ಮೂಲಕ ಸಂಚಾರಿ ನಿಯಮಗಳ ಪರಿಣಾಮಕಾರಿ ಅನುಷ್ಠಾನ, ರಸ್ತೆ ಸುರಕ್ಷತೆ ಬಲಪಡಿಸುವುದು ಹಾಗೂ ಬೆಂಗಳೂರಿನ ಸಂಚಾರ ದಟ್ಟಣೆ ನಿಯಂತ್ರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+