Bengaluru traffic; ಈ ರಸ್ತೆಗಳಲ್ಲಿ ಇಂದು ಸಂಚಾರ ದಟ್ಟಣೆ

ಬೆಂಗಳೂರು, ಫೆಬ್ರವರಿ 27; ಬೆಂಗಳೂರು ನಗರದಲ್ಲಿ ಎರಡು ಬೃಹತ್ ಕಾರ್ಯಕ್ರಮ ಇರುವುದರಿಂದ ಮಂಗಳವಾರ ಕೆಲವು ರಸ್ತೆಗಳಲ್ಲಿ ವಾಹನ ಸಂಚಾರ ದಟ್ಟಣೆ ಉಂಟಾಗುವ ನಿರೀಕ್ಷೆ ಇದೆ. ಈ ಕುರಿತು ಬೆಂಗಳೂರು ನಗರ ಸಂಚಾರಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಅರಮನೆ ಮೈದಾನದಲ್ಲಿ ಎರಡು ಬೃಹತ್ ಕಾರ್ಯಕ್ರಮಗಳು ಇರುವುದರಿಂದ ಅರಮನೆ ಮೈದಾನದ ಮತ್ತು ಕೆಲವು ರಸ್ತೆಗಳಲ್ಲಿ ಬೆಳಗ್ಗೆ 8.30 ರಿಂದ ಮಧ್ಯಾಹ್ನ 12.30 ರವರೆಗೆ ಸಂಚಾರ ದಟ್ಟಣೆ ಇರುತ್ತದೆ ಎಂದು ಪೊಲೀಸರು ಹೇಳಿದ್ದಾರೆ.

Bengaluru Traffic Police Advisory For City This Roads

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಪೊಲೀಸರು, ವಾಹನ ಸವಾರರು ಬದಲಿ ಮಾರ್ಗವನ್ನು ಬಳಸಲು ಸೂಚಿಸಿದೆ ದಯವಿಟ್ಟು ಸಹಕರಿಸಿ ಎಂದು ಮನವಿ ಮಾಡಿದ್ದಾರೆ.

ಯಾವ-ಯಾವ ರಸ್ತೆಗಳು

* ಬಳ್ಳಾರಿ ರಸ್ತೆ (ಹೆಬ್ಬಾಳದಿಂದ ವಿಂಡ್ಸರ್ ಮ್ಯಾನರ್)
* ತುಮಕೂರು ರಸ್ತೆ (ಯಶವಂತಪುರದಿಂದ IISc)
* ಸಿವಿ ರಾಮನ್ ರಸ್ತೆ
* ಜಯಮಹಲ್ ರಸ್ತೆ
* ಮೇಖ್ರಿ ವೃತ್ತ

ಯಾವ ಕಾರ್ಯಕ್ರಮ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಮತ್ತು ಆಡಳಿತದಲ್ಲಿ ಕಾರ್ಯಕ್ಷಮತೆ ಕಾರ್ಯಾಗಾರವನ್ನು ಆಯೋಜನೆ ಮಾಡಿದೆ. ಬೆಳಗ್ಗೆ 11 ಗಂಟೆಗೆ ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಸೇರಿದಂತೆ ಅನೇಕ ಸಚಿವರು ಆಗಮಿಸುತ್ತಾರೆ.

ಮಂಗಳವಾರ ಬೆಳಗ್ಗೆ 10.30ಕ್ಕೆ ಕೃಷ್ಣ ವಿಹಾರ, ಗೇಟ್ ನಂ.1, ಮೇಕ್ರಿ ಸರ್ಕಲ್ ಹತ್ತಿರ, ಅರಮನೆ ಮೈದಾನ, ಬೆಂಗಳೂರು ಇಲ್ಲಿ ಮಹಾ ಸಮ್ಮೇಳನ ನಡೆಯಲಿದೆ. ಇದರಲ್ಲಿ ಪಾಲ್ಗೊಳ್ಳಲು ರಾಜ್ಯದ ವಿವಿಧ ಜಿಲ್ಲೆಗಳಿಂದ ಸರ್ಕಾರಿ ನೌಕರರು ಆಗಮಿಸುತ್ತಿದ್ದಾರೆ.

ಈ ಸಮ್ಮೇಳನದಲ್ಲಿ ಸುಮಾರು 2 ಲಕ್ಷ ಸರ್ಕಾರಿ ನೌಕರರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅನುಕೂಲವಾಗುವಂತೆ ಸರ್ಕಾರಿ ನೌಕರರಿಗೆ ರಜೆ ಸಹ ಘೋಷಣೆ ಮಾಡಲಾಗಿದೆ.

ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಾಜ್ಯದ ವಿವಿಧ ಭಾಗಗಳಿಂದ ಆಗಮಿಸುವ ಬಸ್‌ಗಳಿಗೆ ಪ್ರತ್ಯೇಕವಾಗಿ ಸರ್ಕಸ್ ಮೈದಾನ, ಜಯಮಹಲ್‌ ರಸ್ತೆ, ಟಿ.ವಿ. ಟವರ್‌ ಎದುರು ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ದ್ವಿಚಕ್ರ ವಾಹನಗಳು ಮತ್ತು ಲಘು ವಾಹನಗಳಿಗೆ ತ್ರಿಪುರವಾಸಿನಿ ಮೈದಾನದಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ.

ಉದ್ಯೋಗ ಮೇಳ: ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಅರಮನೆ ಮೈದಾನದಲ್ಲಿ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ ನಡೆಸುತ್ತಿದೆ. ಫೆಬ್ರವರಿ 26ರ ಸೋಮವಾರ ಇದಕ್ಕೆ ಚಾಲನೆ ಸಿಕ್ಕಿದ್ದು, 1 ಲಕ್ಷಕ್ಕೂ ಅಧಿಕ ಜನರು ಪಾಲ್ಗೊಂಡಿದ್ದರು.

ಫೆಬ್ರವರಿ 27ರ ಮಂಗಳವಾರ ಸಹ ಉದ್ಯೋಗ ಮೇಳ ನಡೆಯುತ್ತಿದೆ. ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಬಿಎಂಟಿಸಿ ಉಚಿತ ಬಸ್‌ ವ್ಯವಸ್ಥೆಯನ್ನು ಸಹ ಮಾಡಿದೆ. ಅಲ್ಲದೇ ಖಾಸಗಿ ವಾಹನಗಳು ಸಹ ಆಗಮಿಸಲಿದ್ದು, ಸಂಚಾರ ದಟ್ಟಣೆ ಉಂಟಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+