Bengaluru Traffic: ಇಂದು ಕೂಡ ಬೆಂಗಳೂರಿನ ಈ ಭಾಗದಲ್ಲಿ ಟ್ರಾಫಿಕ್ ಸಮಸ್ಯೆ: ಪರ್ಯಾಯ ಮಾರ್ಗ ಬಳಸಲು ಪೊಲೀಸರ ಸಲಹೆ
ಸೆಪ್ಟೆಂಬರ್ 27ರಂದು ಬೆಂಗಳೂರು ಹೊರ ವರ್ತುಲ ರಸ್ತೆ, ಸರ್ಜಾಪುರ, ಮಾರತ್ ಹಳ್ಳಿ ಸೇರಿದಂತೆ ಹಲವು ಭಾಗಗಳಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಬೆಂಗಳೂರು ಟ್ರಾಫಿಕ್ ಬಗ್ಗೆ ಸಾಕಷ್ಟು ಟೀಕೆ ವ್ಯಕ್ತವಾಗುತ್ತಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಕೂಡ ಭಾರ ಚರ್ಚೆ ನಡೆಯುತ್ತಿದೆ.
ಈ ನಡುವೆಯೇ ಇಂದು (ಸೆಪ್ಟೆಂಬರ್ 28) ಕೂಡ ನಗರದ ಹಲವು ಭಾಗಗಳಲ್ಲಿ ಟ್ರಾಫಿಕ್ ಉಂಟಾಗಲಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ಪರ್ಯಾಯ ಮಾರ್ಗ ಬಳಸಲು ಸಂಚಾರ ಪೊಲೀಸರು ಸಲಹೆ ನೀಡಿದ್ದಾರೆ. ಸೆ. 28ರಂದು ಈದ್ ಮಿಲಾದ್ ಆಚರಣೆ ಇರುವ ಕಾರಣ ಹಲವು ಕಡೆಗಳಲ್ಲಿ ಪ್ರಾರ್ಥನೆಗಾಗಿ ಹೆಚ್ಚಿನ ಜನ ಸೇರುವ ಕಾರಣ ಪೊಲೀಸರು ಪರ್ಯಾಯ ಮಾರ್ಗ ಬಳಸುವಂತೆ ಕೇಳಿದ್ದಾರೆ.

ಹಲಸೂರು ಗೇಟ್ ಸಂಚಾರ ಪೊಲೀಸ್ ಠಾಣಾ ಸರಹದ್ದಿನ ನೃಪತುಂಗ ರಸ್ತೆಯ ವೈ.ಎಂ.ಸಿ.ಎ ಮೈದಾನಕ್ಕೆ ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಆಗಮಿಸುವ ನಿರೀಕ್ಷೆ ಇದೆ. ಸಂಚಾರ ದಟ್ಟಣೆಯನ್ನು ತಪ್ಪಿಸುವ ದೃಷ್ಟಿಯಿಂದ ಪೊಲೀಸರು ಪ್ರಕಟಣೆ ಹೊರಡಿಸಿದ್ದು ಪರ್ಯಾಯ ಮಾರ್ಗಗಳನ್ನು ಸೂಚಿಸಿದ್ದಾರೆ.
ಬದಲೀ ಮಾರ್ಗದ ವಿವರ
ನೃಪತುಂಗ ರಸ್ತೆಯಲ್ಲಿ ಹೆಚ್ಚಿನ ಸಂಚಾರ ದಟ್ಟಣೆ ಉಂಟಾಗಲಿದ್ದು, ಆನಂದರಾವ್ ಸರ್ಕಲ್ ಕಡೆಯಿಂದ ಬರುವ ವಾಹನ ಸವಾರರು ಕೆಆರ್ ಸರ್ಕಲ್ ಬಳಿ ಎಡ ತಿರುವು ಪಡೆದು ಡಾ. ಅಂಬೇಡ್ಕರ್ ರಸ್ತೆಯಲ್ಲಿ ಸಾಗಿ ಬಾಳೇಕುಂದ್ರಿ ಸರ್ಕಲ್, ಕ್ವೀನ್ಸ್ ರಸ್ತೆ ಮೂಲಕ ಮುಂದಕ್ಕೆ ತೆರಳಲು ಸೂಚನೆ ನೀಡಲಾಗಿದೆ.
ಡಾ. ಬಿ.ಆರ್ ಅಂಬೇಡ್ಕರ್ ರಸ್ತೆ: ಬಾಳೇಕುಂದ್ರಿ ಸರ್ಕಲ್‌ನಿಂದ ಸಿಟಿ ಮಾರ್ಕೆಟ್ ಕಡೆಗೆ ಸಂಚರಿಸುವ ಸವಾರರು ಕ್ವೀನ್ಸ್ ರಸ್ತೆ ಸಿದ್ಧಲಿಂಗಯ್ಯ ಸರ್ಕಲ್ ಮೂಲಕ ಸಂಚರಿಸುವುದು.
ನಾಯಂಡನಹಳ್ಳಿ ಜಂಕ್ಷನ್ : ಮೈಸೂರು ರಸ್ತೆಯಲ್ಲಿ ಸಂಚಾರ ದಟ್ಟಣೆ ಹೆಚ್ಚಾದಲ್ಲಿ ನಾಯಂಡಹಳ್ಳಿ ಜಂಕ್ಷನ್ ನಲ್ಲಿ ಎಡ ತಿರುವು ಪಡೆದು ನಾಗರಬಾವಿ ರಿಂಗ್ ರಸ್ತೆ ಮೂಲಕ ಸಂಚರಿಸಬಹುದಾಗಿದೆ ಹಾಗೂ ಚಂದ್ರಲೇಔಟ್ ವಿಜಯನಗರ ಮುಖೇನ ಸಂಚರಿಸಬಹುದಾಗಿರುತ್ತದೆ.
ಬಾಪೂಜಿ ನಗರ: ಮೈಸೂರು ರಸ್ತೆಯಲ್ಲಿ ಸಂಚಾರ ದಟ್ಟಣೆ ಹೆಚ್ಚಾದಲ್ಲಿ ವಿಜಯನಗರದ ಕಡೆಯಿಂದ ಬರುವ ವಾಹನಗಳು ಮೈಸೂರು ಕಡೆಗೆ ಚಲಸಲು ಚಂದ್ರಲೇಔಟ್‌ನಿಂದ ಬಲ ತಿರುವು ಪಡೆದು ನಾಗರಬಾವಿ ಸರ್ಕಲ್ ಹಾಗೂ ರಿಂಗ್ ರಸ್ತೆ ಮುಖಾಂತರ ಕೆಂಗೇರಿ ಉಪ ನಗರ ಮಾರ್ಗವಾಗಿ ಸಂಚರಿಸಬಹುದಾಗಿರುತ್ತದೆ
ಮಾರ್ಕೆಟ್ ಸರ್ಕಲ್ : ಟೌನ್ ಹಾಲ್ ಕಡೆಗೆ ಸಂಚಾರ ದಟ್ಟಣೆ ಉಂಟಾದಲ್ಲಿ ಬಸಪ್ಪ ಸರ್ಕಲ್ ಕಡೆಗೆ ಬಲತಿರುವು ನೀಡಿ ಅಥವಾ ಅವಿನ್ಯೂ ರಸ್ತೆ ಕಡೆಗೆ ಮಾರ್ಗ ಬದಲಾವಣೆ ಮಾಡಲಾಗುವುದು.
ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ
ಕೆ.ಜಿ.ಹಳ್ಳಿ ಮತ್ತು ಪುಲಕೇಶಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈದ್-ಎ-ಮಿಲಾದ್ ಹಬ್ಬದ ಪ್ರಯುಕ್ತ ಶಿವಾಜಿನಗರ ಕಂಬಳ' ಘೋಷ್ ದರ್ಗಾಕ್ಕೆ ಮೆರವಣಿಗೆ ಇರುವುದರಿಂದ ಸಾರ್ವಜನಿಕರ ಸುಗಮ ಸಂಚಾರದ ಹಿತದೃಷ್ಟಿಯಿಂದ ಬೆಳಗ್ಗೆ 10-00 ಗಂಟೆಯಿಂದ ರಾತ್ರಿ 10:00 ಗಂಟೆವರೆಗೆ ಸಂಚಾರ ವ್ಯವಸ್ಥೆ ಬದಲಾವಣೆ ಮಾಡಲಾಗಿದೆ.
ಸಂಚಾರವನ್ನು ನಿರ್ಬಂಧಿಸಿರುವ ರಸ್ತೆಗಳು:
ನಾಗವಾರ ಜಂಕ್ಷನ್‌ನಿಂದ ಪಾಟರಿ ಸರ್ಕಲ್ ರಸ್ತೆಯವರೆಗೆ ಸಂಚಾರವನ್ನು ನಿರ್ಬಂಧಿಸಲಾಗಿರುತ್ತದೆ.
ನೇತಾಜಿ ಜಂಕ್ಷನ್‌ನಿಂದ ಪಾಟರಿ ಸರ್ಕಲ್ ಮೂಲಕ ಟ್ಯಾನರಿ ರಸ್ತೆ ಕಡೆಗೆ ಸಂಚಾರವನ್ನು ನಿರ್ಬಂಧಿಸಲಾಗಿರುತ್ತದೆ.
ಲಾಜರ್ ರಸ್ತೆ ಮತ್ತು ಎಂ.ಎಂ.ರಸ್ತೆ ಜಂಕ್ಷನ್‌ನಿಂದ ಹೆನ್ಸ್ ಜಂಕ್ಷನ್‌ವರೆಗೆ ಸಂಚಾರವನ್ನು ನಿರ್ಬಂಧಿಸಲಾಗಿರುತ್ತದೆ.
ಹೆಚ್.ಎಂ.ರಸ್ತೆಯಲ್ಲಿ ಕೆ.ಇ.ಬಿ. ಜಂಕ್ಷನ್‌ನಿಂದ ಹಾಲ್ ರಸ್ತೆಗೆ ಹೋಗುವ ಸಂಚಾರವನ್ನು ನಿರ್ಬಂಧಿಸಲಾಗಿರುತ್ತದೆ.
ಪರ್ಯಾಯ ಮಾರ್ಗಗಳು
1. ಥಣಿಸಂದ್ರ ಕಡೆಯಿಂದ ಶಿವಾಜಿನಗರ ಕಡೆಗೆ ಬರುವ ವಾಹನಗಳು ನಾಗವಾರ ಜಂಕ್ಷನ್‌ನಿಂದ ಎಡತಿರುವು ಪಡೆದು ಹೆಣ್ಣೂರು ಜಂಕ್ಷನ್‌ನಲ್ಲಿ ಬಲ ತಿರುವು ಪಡೆದು ಸಿದ್ಧಪ್ಪ ರೆಡ್ಡಿ ಜಂಕ್ಷನ್ - ಅಯೋಧ್ಯ ಜಂಕ್ಷನ್ ಲಿಂಗರಾಜಪುರ ಫ್ಲೈ ಓವರ್ ಮೂಲಕ ರಾಬರ್ಟ್‌ಸನ್ ರಸ್ತೆ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದು ಹೇನ್ಸ್ ರಸ್ತೆ ಮೂಲಕ ಶಿವಾಜಿನಗರ ತಲುಪುವುದು.
2. ಶಿವಾಜಿನಗರದ ಕಡೆಯಿಂದ ನಾಗವಾರ ಜಂಕ್ಷನ್ ಕಡೆಗೆ ಬರುವ ವಾಹನಗಳು ಸ್ಪೆನ್ಸರ್ ರಸ್ತೆಯಲ್ಲಿ ಕಡ್ಡಾಯವಾಗಿ ಬಲ ತಿರುವು ನಡೆದು - ಸ್ಪೆನ್ಸರ್ ರಸ್ತೆ ಮೂಲಕ ಕೋಲ್ ರಸ್ತೆ ತಲುಪಿ ವೀಲರ್ಸ್ ರಸ್ತೆ ಮೂಲಕ ಹೆಣ್ಣೂರು, ಬಾಣಸವಾಡಿ, ಹಲಸೂರು ಕಡೆಗೆ ಸಂಚರಿಸಬಹುದಾಗಿದೆ.
3. ಆರ್.ಟಿ.ನಗರ ದಿಂದ ಮತ್ತು ಕಾವಲ್ ಬೈರಸಂದ್ರ ಮೂಲಕ ಬರುವ ವಾಹನಗಳು ಪುಷ್ಪಾಂಜಲಿ ಟಾಕಿಸ್ ಬಳಿ ಎಡ ತಿರುವು ಪಡೆದು ವೀರಣ್ಣ ಪಾಳ್ಯ ಜಂಕ್ಷನ್ ಕಡೆಗೆ ಬಲ ತಿರುವು ಪಡೆದು ನಾಗವಾರ ಜಂಕ್ಷನ್ ರಸ್ತೆ ಕಡೆಗೆ ಸಂಚರಿಸಬಹುದಾಗಿರುತ್ತದೆ.
4. ನೇತಾಜಿ ರಸ್ತೆ ಕಡೆಯಿಂದ ಟ್ಯಾನರಿ ರಸ್ತೆ ಮೂಲಕ ನಾಗವಾರ ಕಡೆಗೆ ಬರುವ ವಾಹನಗಳನ್ನು ಮಾರ್ಗ ಬದಲಾವಣೆ ಮಾಡಿ - ನೇತಾಜಿ ಜಂಕ್ಷನ್‌ನಿಂದ - ಬಲತಿರುವು - ಮಾಸ್ಕ್ ಜಂಕ್ಷನ್ - ಲಾಜರ್ ರಸ್ತೆ ಎಂ.ಎಂ.ರಸ್ತೆ ಜಂಕ್ಷನ್ - ಎಡತಿರುವು - ಪಾಟರಿ ರಸ್ತೆ ಹೆಣ್ಣೂರು ರಸ್ತೆ ಜಂಕ್ಷನ್ - ಬಲತಿರುವು - ಹೆಚ್.ಎಂ.ರಸ್ತೆ ಡೇವಿಸ್ ರಸ್ತೆ ಜಂಕ್ಷನ್ ಮೂಲಕ ಲಿಂಗರಾಜಪುರ ಫ್ಲೈಓವರ್ ಮೂಲಕ ಹೆಣ್ಣೂರು ಕಡೆಗೆ ಸಂಚರಿಸಬಹುದಾಗಿದೆ.
5. ಲಾಜರ್ ರಸ್ತೆ ಮತ್ತು ಎಂ.ಎಂ.ರಸ್ತೆ ಜಂಕ್ಷನ್‌ನಲ್ಲಿ ಮಾಸ್ಕ್ ಸರ್ಕಲ್ ಕಡೆಗೆ ಬರುವ ವಾಹನಗಳನ್ನು ಮಾರ್ಗ ಬದಲಾವಣೆ ಮಾಡಿ, ಲಾಜರ್ ರಸ್ತೆಯಲ್ಲಿ ಮುಂದುವರೆದು ಸಿಂಧಿ ಕಾಲೋನಿ ಜಂಕ್ಷನ್ ವೀಲರ್ ರಸ್ತೆ ಮೂಲಕ ಕೀರ್ತಿ ಸಾಗರ್ ಮೂಲಕ ಥಾಮಸ್ ಕೆಫ ಜಂಕ್ಷನ್ ಬಲತಿರುವು ಪಡೆದು ಸೆಂಟ್ ಜಾನ್ಸ್ ಚರ್ಚ್ ರಸ್ತೆ ಮೂಲಕ ಹೇನ್ಸ್ ಸರ್ಕಲ್ ಕಡೆಗೆ ಸಂಚರಿಸಬಹುದಾಗಿದೆ.
6. ಹೆಚ್.ಎಂ.ರಸ್ತೆ ಮೂಲಕ ಪಾಟರಿ ರಸ್ತೆ ಕಡೆಗೆ ಬರುವ ವಾಹನಗಳನ್ನು ಮಾರ್ಗ ಬದಲಾವಣೆ ಮಾಡಿ ಹೆಚ್.ಎಂ.ರಸ್ತೆಯಲ್ಲಿ ಕಡ್ಡಾಯವಾಗಿ ಎಡ ತಿರುವು ಪಡೆದು - ಲಾಜರ್ ರಸ್ತೆ - ಸಿಂಧಿ ಕಾಲೋನಿ ಜಂಕ್ಷನ್ - ವೀಲರ್ಸ್ ರಸ್ತೆ ಮೂಲಕ ಕೀರ್ತಿ ಸಾಗರ್- ಥಾಮಸ್ ಬೇಕರಿ - ಥಾಮಸ್ ಕೆಫೆ ಜಂಕ್ಷನ್ - ಬಲತಿರುವು - ಸೆಂಟ್ ಜಾನ್ಸ್ ಚರ್ಚ್ ರಸ್ತೆ ಮೂಲಕ ಹೆನ್ - ಸರ್ಕಲ್ ಕಡೆಗೆ ಸಂಚರಿಸಬಹುದಾಗಿದೆ.












Click it and Unblock the Notifications