• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬೆಂಗಳೂರು ಸಂಚಾರ ಪೊಲೀಸರಿಂದ ಒಂದೇ ವಾರದಲ್ಲಿ 2.14 ಕೋಟಿ ರೂ. ದಂಡ ಸಂಗ್ರಹ

|

ಬೆಂಗಳೂರು, ಸೆಪ್ಟೆಂಬರ್ 24: ಕೊರೊನಾ ಹಾವಳಿ ಹಿನ್ನೆಲೆಯಲ್ಲಿ ಸ್ಥಗಿತವಾಗಿದ್ದ ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ಕಾರ್ಯಚರಣೆಯನ್ನು ಪೊಲೀಸರು ಮತ್ತೆ ಆರಂಭಿಸಿದ್ದು, ಒಂದೇ ವಾರದಲ್ಲಿ 2.14 ಕೋಟಿ ರೂ. ದಂಡ ಸಂಗ್ರಹಿಸಿದ್ದಾರೆ.

ನಗರ ವ್ಯಾಪ್ತಿ ಸೆ.13ರಿಂದ 19ರವರೆಗೆ ವಿಶೇಷ ಕಾರ್ಯಾಚರಣೆ ನಡೆದಿದೆ. ಕಾನೂನೂ ಉಲ್ಲಂಘನೆ ಆರೋಪದ ಮೇರೆಗೆ 48 ಸಾವಿರ ಪ್ರಕರಣಗಳನ್ನು ದಾಖಲಿಸಲಾಗಿದ್ದು, 2.14 ಕೋಟಿ ರೂ. ಸಂದ ಸಂಗ್ರಹವಾಗಿದೆ ಎಂದು ಜಂಟಿ ಆಯುಕ್ತ ಡಾ. ಬಿ.ಆರ್. ರವಿಕಾಂತೇಗೌಡ ಹೇಳಿದ್ದಾರೆ.

ಒನ್ ವೇನಲ್ಲಿ ವಾಹನ ಚಲಾಯಿಸಿದ್ರೆ ದಂಡ ಮಾತ್ರವಲ್ಲ ಡಿಎಲ್ ಕೂಡ ರದ್ದು

ಲಾಕ್‌ಡೌನ್‌ ಸಡಿಲಿಕೆ ನಂತರ ವಾಹನ ಸಂಚಾರ ಆರಂಭವಾಗಿ ಸಂಚಾರ ನಿಯಮ ಉಲ್ಲಂಘನೆ ಮತ್ತು ಅಪಘಾತಗಳು ಹೆಚ್ಚುತ್ತಿವೆ. ಅಪಘಾತಗಳನ್ನು ನಿಯಂತ್ರಿಸಲು ಮಾರ್ಚ್ ನಿಂದ ತಡೆಯಲಾಗಿದ್ದ ಭೌತಿಕ ತಪಾಸಣೆಯನ್ನು ಮತ್ತೆ ಆರಂಭಿಸಲಾಗಿದೆ.

ವೈಯಕ್ತಿಕ ಅಂತರ ಕಾಯ್ದುಕೊಳ್ಳಬೇಕು

ವೈಯಕ್ತಿಕ ಅಂತರ ಕಾಯ್ದುಕೊಳ್ಳಬೇಕು

ಕೊರೊನಾ ಸೋಂಕು ಹರಡುವಿಕೆ ಕಾರಣಕ್ಕೆ ವೈಯಕ್ತಿಕ ಅಂತರ ಕಾಯ್ದುಕೊಳ್ಳುವ ಸಲುವಾಗಿ ರಸ್ತೆಯಲ್ಲಿ ವಾಹನಗಳನ್ನು ಅಡ್ಡಗಟ್ಟಿ ಪ್ರಕರಣ ದಾಖಲಿಸುವ ಕಾರ್ಯಾಚರಣೆಗೆ ತಡೆ ಹಿಡಿಯಲಾಗಿತ್ತು. ಈಗ ಮತ್ತೆ ರಸ್ತೆಯಲ್ಲೇ ನೇರವಾಗಿ ಕಾನೂನು ಮೀರಿದವರ ಮೇಲೆ ಕ್ರಮ ಜರುಗಿಸಲಾಗುತ್ತಿದೆ ಎಂದು ರವಿಕಾಂತೇಗೌಡ ತಿಳಿಸಿದ್ದಾರೆ.

32 ಬಾರಿ ನಿಯಮ ಉಲ್ಲಂಘಿಸಿದ್ದ ಬೈಕ್ ಸವಾರ

32 ಬಾರಿ ನಿಯಮ ಉಲ್ಲಂಘಿಸಿದ್ದ ಬೈಕ್ ಸವಾರ

ಸಿಲಿಕಾನ್ ಸಿಟಿಯಲ್ಲಿ 32 ಬಾರಿ ಸಂಚಾರ ನಿಯಮ ಉಲ್ಲಂಘಿಸಿದಕ್ಕಾಗಿ ದ್ವಿಚಕ್ರ ವಾಹನ ಮಾಲೀಕನಿಂದ ಸಂಚಾರಿ ಪೊಲೀಸರು ಬರೊಬ್ಬರಿ 15,000 ರೂ. ದಂಡ ವಸೂಲಿ ಮಾಡಿದ್ದಾರೆ. ಆಡುಗೋಡಿ ಸಂಚಾರ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನಂಜುಂಡಯ್ಯ ಅವರು ವಾಹನ ಮಾಲೀಕನಿಂದ ದಂಡ ವಸೂಲಿ ಮಾಡಿದ್ದಾರೆ. ನಗರದಲ್ಲಿ ಸುಮಾರು 32 ಬಾರಿ ಸಂಚಾರ ನಿಯಮ ಉಲ್ಲಂಘಿಸಿದ್ದ ಕೆಎ-51-ಹೆಚ್ ಕೆ -3007 ದ್ವಿ-ಚಕ್ರ ವಾಹನದ ಮಾಲೀಕರಿಂದ ಬರೊಬ್ಬರಿ ಅವರು 15,000 ದಂಡ ವಸೂಲಿ ಮಾಡಿದ್ದಾರೆ‌.

ಹೆಲ್ಮೆಟ್ ಧರಿಸದೆ ಬೈಕ್ ಚಾಲನೆ

ಹೆಲ್ಮೆಟ್ ಧರಿಸದೆ ಬೈಕ್ ಚಾಲನೆ

ಹೆಲ್ಮೆಟ್‌ ಧರಿಸದೆ ಬೈಕ್‌ ಚಾಲನೆ ಸಂಬಂಧ 16,343 ಪ್ರಕರಣ ದಾಖಲಿಸಲಾಗಿದೆ. ಹಿಂಬದಿ ಸವಾರರು ಹೆಲ್ಮೆಟ್‌ ಧರಿಸದೆ ಇರುವುದಕ್ಕೆ ಸಂಬಂಧಿಸಿದಂತೆ 10,247 ಕೇಸ್‌, ಡ್ರೈವಿಂಗ್‌ ಲೈಸೆನ್ಸ್‌ ಇಲ್ಲದೇ ದ್ವಿಚಕ್ರ ವಾಹನ ಚಾಲನೆ ಸಂಬಂಧ 4,804, ನೋ ಎಂಟ್ರಿ 2,386, ರಾಂಗ್‌ ಪಾರ್ಕಿಂಗ್‌ 2,211, ತಿರುಚಿದ ನಂಬರ್‌ ಪ್ಲೇಟ್‌ ಬಳಕೆ 1,854, ಚಾಲನೆ ವೇಳೆ ಮೊಬೈಲ್‌ ಬಳಕೆ 1,370 ಕೇಸ್‌, ಸೀಟ್‌ ಬೆಲ್ಟ್‌ ಧರಿಸದೆ ವಾಹನ ಚಲಾಯಿಸಿದ್ದಕ್ಕೆ ಸಂಬಂಧಿಸಿದಂತೆ 1,839 ಕೇಸ್‌ ದಾಖಲಿಸಲಾಗಿವೆ.

  ಕಾಶ್ಮೀರದಲ್ಲಿ ಭಾರತೀಯರು ಅಂತ ಹೇಳೋರು ಯಾರು ಇಲ್ಲಾ?? | Oneindia Kannada
  7 ದಿನದಲ್ಲಿ 48,141 ಸಂಚಾರ ನಿಯಮ ಉಲ್ಲಂಘನೆ ಪ್ರಕರಣ

  7 ದಿನದಲ್ಲಿ 48,141 ಸಂಚಾರ ನಿಯಮ ಉಲ್ಲಂಘನೆ ಪ್ರಕರಣ

  7 ದಿನಗಳ ಅಂತರದಲ್ಲಿ ಬರೋಬ್ಬರಿ 2.14 ಕೋಟಿ ರೂ. ದಂಡ ಸಂಗ್ರಹಿಸಿದ್ದಾರೆ. ಸೆ.13ರಿಂದ ಸೆ.19ರ ನಡುವೆ 48,141 ಸಂಚಾರ ನಿಯಮ ಉಲ್ಲಂಘನೆ ಕೇಸ್‌ಗಳನ್ನು ದಾಖಲಿಸಲಾಗಿದೆ.

  English summary
  As a consequence of the easing of COVID-19 lockdown regulations, the number of traffic violations in Bengaluru have shot up. In fact, the Bangalore Traffic Police has collected Rs 2.14 crore of penalty fines from a total of 48,141 traffic violation cases recorded between September 13 to September 19.
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X