Bengaluru Traffic: ನಗರದ ಈ ಭಾಗದಲ್ಲಿ ಕಚೇರಿಗಳ ಸಮಯ ಬದಲಾವಣೆಗೆ ಪ್ಲಾನ್: ಬೆಂಗಳೂರು ಪೊಲೀಸರು
ಬೆಂಗಳೂರು: ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಟ್ರಾಫಿಕ್ ಜಾಮ್ ಸಮಸ್ಯೆ ಹೆಚ್ಚಾಗುತ್ತಿದ್ದು, ಇದೀಗ ಟ್ರಾಫಿಕ್ ಜಾಮ್ ಸಮಸ್ಯೆ ಪರಿಹಾರಕ್ಕೆ ಬೆಂಗಳೂರು ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಕೈಜೋಡಿಸಿವೆ. ಬೆಂಗಳೂರಿನಲ್ಲಿ ಅತಿ ಹೆಚ್ಚು ಟ್ರಾಫಿಕ್ ಜಾಮ್ ಆಗುವ ಪ್ರದೇಶಗಳಲ್ಲಿ ಹೊಸ ಬದಲಾವಣೆ ಮಾಡುವುದಕ್ಕೆ ಬೆಂಗಳೂರು ಪೊಲೀಸರು ಮುಂದಾಗಿದ್ದಾರೆ. ಇದರಲ್ಲಿ ಕಚೇರಿಗಳ ಸಮಯ ಬದಲಾವಣೆಯೂ ಸೇರಿದೆ.
ಬೆಂಗಳೂರಿನಲ್ಲಿ ಹೆಚ್ಚು ಟ್ರಾಫಿಕ್ ಜಾಮ್ ಆಗುವ ಪ್ರದೇಶಗಳಲ್ಲಿ ಸಿಲ್ಕ್ ಬೋರ್ಡ್ ಜಂಕ್ಷನ್ ಮತ್ತು ಕೆ.ಆರ್ ಪುರಂ ನಡುವಿನ 17 ಕಿ.ಮೀ. ಉದ್ದದ ಬೆಂಗಳೂರು ಹೊರ ವರ್ತುಲ ರಸ್ತೆ ಸೇರಿದೆ. ಈ ಭಾಗದಲ್ಲಿ ಸೋಮವಾರ ಭಾರೀ ಟ್ರಾಫಿಕ್ ಜಾಮ್ ಸಮಸ್ಯೆ ಎದುರಾಗಿತ್ತು. ಸೋಮವಾರ ಕಚೇರಿ, ಶಾಲಾ - ಕಾಲೇಜು ಹಾಗೂ ವಿವಿಧ ಕೆಲಸಗಳಿಗೆ ಹೋಗುವ ಸಾವಿರಾರು ಜನ ಈ ಮಾರ್ಗದಲ್ಲಿ ಸಂಚರಿಸುವಾಗ ಭಾರೀ ಟ್ರಾಫಿಕ್ ಜಾಮ್ ಸೃಷ್ಟಿಯಾಗಿತ್ತು. ಈ ಪ್ರದೇಶದಲ್ಲಿ ಟ್ರಾಫಿಕ್ ಜಾಮ್ ಕಂಟ್ರೋಲ್ ಮಾಡುವುದಕ್ಕೆ ಕಾರಿಡಾರ್ ಅಭಿವೃದ್ಧಿಪಡಿಸಲಾಗುತ್ತಿದ್ದು, ಅಂದಾಜು 450 ಕೋಟಿ ರೂ. ವೆಚ್ಚದಲ್ಲಿ ಪುನರಾಭಿವೃದ್ಧಿ ಕೆಲಸ ನಡೆಯಲಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.

ಬೆಂಗಳೂರಿನ ಈ ಪ್ರದೇಶದಲ್ಲಿ ಹೆಚ್ಚು ಟ್ರಾಫಿಕ್ ಜಾಮ್ ಆಗುವುದನ್ನು ತಪ್ಪಿಸುವ ಉದ್ದೇಶದಿಂದ ಬೆಂಗಳೂರು ನಗರ ಪೊಲೀಸರು ಈಗ ಇರುವ ಬ್ಯಾರಿಕೇಡ್‌ಗಳನ್ನು ತೆಗೆದು ವಾಹನ ಸವಾರರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಮುಂದಾಗಿದೆ. ಸಾಧ್ಯವಿರುವ ಪ್ರದೇಶಗಳಲ್ಲಿ ಮುಖ್ಯವಾಗಿ ಎರಡು ಅಥವಾ ಎರಡಕ್ಕಿಂತ ಹೆಚ್ಚು ಪಥ ಇರುವ ಹಾಗೂ ಸರ್ವಿಸ್ ರಸ್ತೆಗಳನ್ನು ಅಗಲಗೊಳಿಸುವ / ಹೆಚ್ಚು ವಾಹನಗಳು ಸಂಚರಿಸುವಂತೆ ಮಾಡಲು ನಿರ್ಧರಿಸಲಾಗಿದೆ. ಈ ನಿಟ್ಟಿನಲ್ಲಿ ರಸ್ತೆಯ ಉದ್ದಕ್ಕೂ ಬ್ಯಾರಿಕೇಡ್‌ಗಳನ್ನು ಸ್ಥಳಾಂತರಿಸಲು ಮುಂದಾಗಿರುವುದಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ತಿಳಿಸಿದ್ದಾರೆ.
ಇಬ್ಲೂರು ಜಂಕ್ಷನ್, ಹೆಬ್ಬಾಳ ಮತ್ತು ಕೃಷ್ಣರಾಜಪುರ ಸೇರಿದಂತೆ ಹೆಚ್ಚು ಟ್ರಾಫಿಕ್ ಜಾಮ್ ಆಗುತ್ತಿರುವ ಪ್ರದೇಶಗಳಲ್ಲಿ ಬ್ಯಾರಿಕೇಡ್‌ಗಳ ತೆರವು ಹಾಗೂ ಲೈನ್‌ಗಳ ಬದಲಾವಣೆಗಳಿಂದಾಗಿ ವಾಹನ ಸವಾರರಿಗೆ ಅನುಕೂಲವಾಗಲಿದ್ದು, ಟ್ರಾಫಿಕ್ ಜಾಮ್ ಇಳಿಕೆ ಆಗಲಿದೆ ಎಂದು ನಿರೀಕ್ಷೆ ಮಾಡಲಾಗಿದೆ. ಕೆಲವು ಪ್ರದೇಶಗಳಲ್ಲಿ ಪ್ರಾಯೋಗಿಕ ಕೆಲಸ ಪ್ರಾರಂಭವಾಗಿದೆ ಎಂದು ಬೆಂಗಳೂರು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಕಚೇರಿಗಳ ಸಮಯ ಬದಲಾವಣೆ
ಬೆಂಗಳೂರಿನಲ್ಲಿ ಪೀಕ್ ಅವರ್‌ಗಳಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಹೆಚ್ಚಾಗುತ್ತಿದೆ. ಏಕಕಾಲದಲ್ಲಿ ಲಕ್ಷಾಂತರ ವಾಹನಗಳು ರಸ್ತೆಗೆ ಇಳಿಯುತ್ತಿವೆ. ಹೀಗಾಗಿ, ಬೆಂಗಳೂರಿನಲ್ಲಿ ಪೀಕ್ ಅವರ್‌ಗಳಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ತಪ್ಪಿಸುವುದಕ್ಕೆ ಕಚೇರಿಗಳ ಸಮಯ ಬದಲಾವಣೆ ಪ್ಲಾನ್ ಮತ್ತೆ ಜಾರಿ ಮಾಡುವುದಕ್ಕೆ ಬೆಂಗಳೂರು ಪೊಲೀಸರು ಮುಂದಾಗಿದ್ದಾರೆ. 2026 ರಲ್ಲಿಯೂ ಸಹ ಕಚೇರಿ ಸಮಯಗಳನ್ನು ಬದಲಾಯಿಸಲು ಮತ್ತು ಸಾರ್ವಜನಿಕ ಸಾರಿಗೆ ಮತ್ತು ಕಾರ್‌ಪೂಲಿಂಗ್ ಅನ್ನು ಉತ್ತೇಜಿಸಲು ಪ್ರಯತ್ನಗಳನ್ನು ನಾವು ಮುಂದುವರಿಸಲಿದ್ದೇವೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಹೇಳಿದ್ದಾರೆ.
ಶೀಘ್ರದಲ್ಲೇ ಬೆಂಗಳೂರು ಹೊರ ವರ್ತುಲ ರಸ್ತೆಯ / ಪ್ರದೇಶದ ಕಂಪನಿ ಪ್ರತಿನಿಧಿಗಳನ್ನು ಭೇಟಿ ಮಾಡಲು ನಿರ್ಧರಿಸಲಾಗಿದೆ. ಕಚೇರಿಗಳ ಸಮಯ ಬದಲಾವಣೆ ಸೇರಿದಂತೆ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಅವರೊಂದಿಗೆ ಚರ್ಚೆ ಮಾಡಲಿದ್ದೇವೆ ಎಂದು ಬೆಂಗಳೂರು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಕ್ರಮಗಳನ್ನು ಅನುಸರಿಸುವಂತೆ ಒತ್ತಾಯಿಸುವುದಕ್ಕೆ ಸಾಧ್ಯವಿಲ್ಲ. ಆದರೆ ಟ್ರಾಫಿಕ್ ಜಾಮ್ ಕಡಿಮೆ ಮಾಡಲು ಪರಿಹಾರಗಳನ್ನು ಸೂಚಿಸಲಿದ್ದೇವೆ ಎಂದಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications