Get Updates
Get notified of breaking news, exclusive insights, and must-see stories!

ಹೆಬ್ಬಾಳ ಫ್ಲೈ ಓವರ್‌ ಕಾಮಗಾರಿ; ವಾಹನ ಸವಾರರಿಗೆ ಪ್ರಮುಖ ಮಾಹಿತಿ

ಬೆಂಗಳೂರು, ಮೇ 14: ಬೆಂಗಳೂರು ನಗರದ ಸಂಚಾರ ವ್ಯವಸ್ಥೆಯ ನಿರ್ವಹಣೆ ಹೊಣೆ ಹೊತ್ತಿರುವ ಸಂಚಾರಿ ಪೊಲೀಸರು ಹೆಬ್ಬಾಳ ಫ್ಲೈ ಓವರ್‌ ಕಡೆ ಸಾಗುವ ವಾಹನ ಸವಾರರಿಗೆ ಮಾಹಿತಿಯೊಂದನ್ನು ನೀಡಿದ್ದಾರೆ. ಜನರು ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಹೆಬ್ಬಾಳ ಮೇಲುಸೇತುವೆಗೆ ಎರಡು ಹೊಸ ಟ್ರ್ಯಾಕ್‌ಗಳನ್ನು ಸೇರಿಸಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಕಾಮಗಾರಿಯನ್ನು ಆರಂಭಿಸಿರುವುದರಿಂದ ಈಗಾಗಲೇ ದಿನಾಂಕ 17/04/2024ರಿಂದ ಕೆ. ಆರ್. ಪುರ ಲೂಪ್ ಸೇರುವ ಟ್ರ್ಯಾಕ್‌ನಲ್ಲಿ ದ್ವಿಚಕ್ರ ವಾಹನಗಳನ್ನು ಹೊರತುಪಡಿಸಿ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿತ್ತು ಎಂದು ಹೇಳಿದ್ದಾರೆ.

Bengaluru Traffic Police Traffic Advisory For Hebbal Flyover

ದಿನಾಂಕ 14/05/2024ರಿಂದ ಕೆ. ಆರ್. ಪುರಂ ಕಡೆಯಿಂದ ಬರುವ ಲೂಪ್ ಹೆಬ್ಬಾಳ ಫ್ಲೈ ಓವರ್‌ನ ಮುಖ್ಯ ಟ್ರ್ಯಾಕ್‌ಗೆ ಸೇರಿಸುವ ಎರಡು ಲಿಂಕ್ ಸ್ಪ್ಯಾನ್‌ಗಳನ್ನು ತೆಗೆದುಹಾಕಲಾಗುತ್ತಿರುವುದರಿಂದ ramp ಮತ್ತು ಮುಖ್ಯ ಟ್ರ್ಯಾಕ್‌ಗೆ ಸಂಪರ್ಕ ಇಲ್ಲದಾಗುವುದರಿಂದ ಯಾವುದೇ ರೀತಿಯ ವಾಹನ ಸಂಚಾರವು ಸಾಧ್ಯವಿರದ ಹಿನ್ನಲೆಯಲ್ಲಿ, ಕಾಮಗಾರಿ ಮುಕ್ತಾಯವಾಗುವವರೆಗೆ ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಸಂಚಾರ ವಿಭಾಗದಿಂದ ಈ ಮಾರ್ಪಾಡುಗಳನ್ನು ಮಾಡಲಾಗಿದೆ ಎಂದು ತಿಳಿಸಿದೆ.

ಸಂಚಾರ ನಿರ್ಬಂಧ, ಪರ್ಯಾಯ ವ್ಯವಸ್ಥೆ: ದಿನಾಂಕ 14/05/2024ರಿಂದ ಹೆಬ್ಬಾಳ ಫ್ಲೈಓವರ್‌ನ ಕೆ. ಆರ್. ಪುರಂ ramo ಅನ್ನು ಮುಚ್ಚಲಾಗುತ್ತಿರುವುದರಿಂದ ನಾಗವಾರ ಕಡೆಯಿಂದ ಹೆಬ್ಬಾಳ ಮೇಲುಸೇತುವೆ ಕಡೆಗೆ ಬರುವ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ಫ್ಲೈ ಓವರ್‌ ಮೇಲೆ ನಿರ್ಬಂಧಿಸಲಾಗಿದೆ.

ನಿರ್ಬಂಧಿಸಲಾದ ವಾಹನಗಳು ನಾಗವಾರ (ಔಟರ್‌ರಿಂಗ್‌ ರಸ್ತೆ) ಕಡೆಯಿಂದ ನಗರದ ಒಳಗೆ ಮೇಖ್ರಿ ಸರ್ಕಲ್ ಮುಖಾಂತರ ಸಂಚರಿಸುವ ವಾಹನಗಳು ಹೆಬ್ಬಾಳ ಸರ್ಕಲ್‌ನಲ್ಲಿ ಫೈ ಓವರ್ ಕೆಳಗಿನಿಂದ ಬಲ ತಿರುವು ಪಡೆದು ಕೊಡಿಗೇಹಳ್ಳಿ ಜಂಕ್ಷನ್ ಬಳಿ ಯೂ ಟರ್ನ್ ಪಡೆದು ಸರ್ವಿಸ್ ರಸ್ತೆಯಿಂದ ಹೆಬ್ಬಾಳ ಫೈಓವರ್‌ನ ramp ಮುಖೇನ ನಗರದ ಕಡೆಗೆ ಚಲಿಸಬಹುದಾಗಿರುತ್ತದೆ.

ಕೆ. ಆರ್. ಪುರಂ, ನಾಗವಾರ ಕಡೆಯಿಂದ ನಗರದ ಕಡೆಗೆ ಬರುವ ವಾಹನಗಳು ಐ.ಓ.ಸಿ.-ಮುಕುಂದ ಥಿಯೇಟರ್ ರಸ್ತೆ, ಲಿಂಗರಾಜಪುರ ಮೇಲುಸೇತುವೆ ಮಾರ್ಗ, ನಾಗವಾರ ಟ್ಯಾನರಿ ರಸ್ತೆ ಮಾರ್ಗವಾಗಿ ಸಂಚಾರ ನಡೆಸಬಹುದು.

ಹೆಗಡೆ ನಗರ-ಥಣಿಸಂದ್ರ ಕಡೆಯಿಂದ ಬರುವ ವಾಹನಗಳು ಜಿಕೆವಿಕೆ-ಜಕ್ಕೂರು ರಸ್ತೆ ಮೂಲಕ ನಗರ ಪ್ರವೇಶಿಸಬಹುದಾಗಿದೆ.

ಕೆ. ಆರ್. ಪುರಂ ಕಡೆಯಿಂದ ಹೆಬ್ಬಾಳ ಮಾರ್ಗವಾಗಿ ಯಶವಂತಪುರ ಕಡೆಗೆ ಚಲಿಸುವ ವಾಹನಗಳು ಹೆಬ್ಬಾಳ ಫ್ಲೈ ಓವರ್ ಕೆಳಗಡೆ ನೇರವಾಗಿ ಬಿ.ಇ.ಎಲ್. ಸರ್ಕಲ್ ತಲುಪಿ ಎಡತಿರುವು ಪಡೆದು ಸದಾಶಿವನಗರ ಜಂಕ್ಷನ್‌ನಲ್ಲಿ ಬಲತಿರುವು ಪಡೆದು ಐ.ಐ.ಎಸ್.ಸಿ. ಮುಖಾಂತರ ಚಲಿಸಬಹುದಾಗಿದೆ.

ಕೆ.ಆರ್.ಪುರಂ, ಹೆಣ್ಣೂರು, ಹೆಚ್.ಆರ್.ಬಿ.ಆರ್. ಲೇಔಟ್, ಕೆ.ಜಿ.ಹಳ್ಳಿ, ಬಾಣಸವಾಡಿ ಕಡೆಯಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಡೆ ಸಂಚರಿಸುವ ವಾಹನಗಳು ಹೆಣ್ಣೂರು-ಬಾಗಲೂರು ರಸ್ತೆಯ ಮುಖಾಂತರ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತಲುಪಬಹುದಾಗಿದೆ.

ಹೆಬ್ಬಾಳ ಮೇಲ್ಸೇತುವೆಗಾಗಿ ಎರಡು ಹೊಸ ಲೇನ್‌ಗಳನ್ನು ಬಿಡಿಎ ನಿರ್ಮಾಣ ಮಾಡುತ್ತಿದೆ. ಸಂಚಾರ ದಟ್ಟಣೆ ನಿವಾರಣೆ ಮಾಡಲು ಎರಡು ಹೊಸ ಲೇನ್‌ಗಳನ್ನು ಸೇರಿಸುವ ಪ್ರಸ್ತಾಪವನ್ನು ಬಿಡಿಎ ಮಾಡಿತ್ತು. ಬಳಿಕ ತಜ್ಞರ ಜೊತೆ ಚರ್ಚೆ ನಡೆಸಿ ಯೋಜನೆ ಅಂತಿಮಗೊಳಿಸಿ ಕಾಮಗಾರಿಯನ್ನು ಆರಂಭಿಸಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+