BREAKING: ಬೆಂಗಳೂರಿನಲ್ಲಿ ರೈಲಿಗೆ ಸಿಲುಕಿ ಮೂವರು ಸಾವು

ಬೆಂಗಳೂರು, ಏಪ್ರಿಲ್‌, 25: ರೈಲಿಗೆ ಸಿಲುಕಿ 25 ವರ್ಷದ ಮೂವರು ಯುವಕರು ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ಇಂದು (ಏಪ್ರಿಲ್‌ 25) ಮಧ್ಯಾಹ್ನ ಸುಮಾರು 1:45ರ ವೇಳೆಗೆ ನಡೆದಿದೆ.

ಬೆಂಗಳೂರಿನ ಬೈಯಪ್ಪನಹಳ್ಳಿ ರೈಲು ನಿಲ್ದಾಣದ ಬಳಿ ಮೂವರು ಯುವಕರು ರೈಲಿಗೆ ಸಿಲುಕಿ ಸಾವನ್ನಪ್ಪಿದ್ದು, ಇವರನ್ನು ಆಂಧ್ರಪ್ರದೇಶದ ಮೂಲದ ಚಿತ್ತೂರಿನ ಮೂಲದವರು ಎಂದು ಶಂಕಿಸಲಾಗಿದೆ. ಇನ್ನು ಘಟನಾ ಸ್ಥಳಕ್ಕೆ ಆಗಮಿಸಿದ ಬೈಯಪ್ಪನಹಳ್ಳಿ ಪೊಲೀಸರು ಪರಿಶೀಲನೆ ಕಾರ್ಯ ಮಾಡುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ ಅ‍ಷ್ಟೆ.

Three death due to being hit by train in Bengaluru

ಇಷ್ಟು ದಿನ ಬೆಂಗಳೂರು ಮೆಟ್ರೋ ಒಂದಲ್ಲ ಒಂದು ವಿಚಾರದಲ್ಲಿ ಸುದ್ದಿಯಾಗುತ್ತಲೇ ಇತ್ತು. ನಗರದ ಹಲವೆಡೆ ಮೆಟ್ರೋಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆಗಳು ನಡೆದಿವೆ. ಇದೀಗ ಇಂದು (ಏಪ್ರಿಲ್‌ 25) ಬೈಯಪ್ಪನಹಳ್ಳಿ ರೈಲು ನಿಲ್ದಾಣದ ಬಳಿ ಚಿತ್ತೂರು ಮೂಲದ ಮೂವರು ಯುವಕರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಮಾಧುಸ್ವಾಮಿ ಕಾರು ಅಪಘಾತ: ಲೋಕಸಭಾ ಚುನಾವಣೆ ಹಿನ್ನೆಲೆ ಸಂಸದ ಪ್ರಜ್ವಲ್‌ ರೇವಣ್ಣ ಅವರ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಮಾಧುಸ್ವಾಮಿ ಅವರ ಕಾರು ಎದುರಿಗೆ ಒನ್‌ ವೇನಲ್ಲಿ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಘಟನೆ ಚಿಕ್ಕಮಗಳೂರು ಜಿಲ್ಲೆ ಕಾಡೂರಿನ ಹೇಮಗಿರಿ ಬಳಿ ನಡೆದಿದೆ.

ಪ್ರಜ್ವಲ್‌ ರೇವಣ್ಣ ಅವರ ಕಾರ್ಯಕ್ರಮಕ್ಕೆ ಮಾಜಿ ಸಚಿವ ಮಾಧುಸ್ವಾಮಿ ಅವರು ಕಾರಿನಲ್ಲಿ ತೆರಳುತ್ತಿದ್ದು, ಈ ವೇಳೆ ಒನ್‌ ವೇನಲ್ಲಿ ಒನ್ ವೇಯಲ್ಲಿ ಬರುತ್ತಿದ್ದ ಗೂಡ್ಸ್ ವಾಹನ ತಪ್ಪಿಸಲು ಹೋಗಿ, ಎದುರಿಗೆ ಬರುತ್ತಿದ್ದ ಕಾರಿಗೆ ಅವರ ಕಾರು ಡಿಕ್ಕಿ ಹೊಡೆದಿದೆ

ಈ ಘಟನೆ ಏಪ್ರಿಲ್‌ 22ರ ಬೆಳಗ್ಗೆ ಸುಮಾರು 11:10 ವೇಳೆಗೆ ಕಾಡೂರಿನ ಹೇಮಗಿರಿ ಬಳಿಯ ಬೆಂಗಳೂರು-ಹೊನ್ನಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದ್ದು, ಸದ್ಯ ಅಪಘಾತದಲ್ಲಿ ಮಾಧುಸ್ವಾಮಿ ಹಾಗೂ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ಪ್ರಚಾರ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು. ಬೀರೂರಿನಲ್ಲಿ ಕಾರ್ಯಕ್ರಮ ಇದ್ದು, ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+