ಬೆಂಗಳೂರು ಸಮೀಪದ ಈ 25 ಪ್ರದೇಶಗಳಲ್ಲಿ ಭೂಮಿಗೆ ಬಂಪರ್ ಜಾಕ್‌ಪಾಟ್!
ಬೆಂಗಳೂರಿನ ವಿವಿಧ ಭಾಗದಲ್ಲಿ ಭೂಮಿಗೆ ಬಂಗಾರದ ಬೆಲೆ ಬರುತ್ತಿದೆ. ಇದರೊಂದಿಗೆ ಬೆಂಗಳೂರು ದಕ್ಷಿಣ ಜಿಲ್ಲೆ (ರಾಮನಗರ), ಬೆಂಗಳೂರು ಉತ್ತರ (ಬೆಂಗಳೂರು ಗ್ರಾಮಾಂತರ) ಹಾಗೂ ಇದೀಗ ಬೆಂಗಳೂರಿನ ಸಮೀಪದ ಜಿಲ್ಲೆಗಳಲ್ಲಿ ಒಂದಾಗಿರುವ ತುಮಕೂರು ಜಿಲ್ಲೆಗೂ ಬಂಪರ್ ಬಂದಿದೆ. ಇತ್ತೀಚಿನ ದಿನಗಳಲ್ಲಿ ಬೆಂಗಳೂರು ಮಹಾನಗರದಲ್ಲಿ ವಿವಿಧ ಪ್ರಮುಖ ಯೋಜನೆಗಳ ಅನುಷ್ಠಾನ ಹಾಗೂ ಅಭಿವೃದ್ಧಿ ಕಾರ್ಯಗಳು ವೇಗವಾಗಿ ನಡೆಯುತ್ತಿವೆ. ಇದೀಗ ಬೆಂಗಳೂರು ಸಮೀಪದ ಜಿಲ್ಲೆಗಳಲ್ಲಿ ಒಂದಾಗಿರುವ ತುಮಕೂರು ಜಿಲ್ಲೆಗೂ ಬಂಪರ್ ಬಂದಿದೆ. ಅದರ ಸಂಪೂರ್ಣ ವಿವರ ಇಲ್ಲಿದೆ.
ಬೆಂಗಳೂರಿನ ಸಮೀಪದ ಜಿಲ್ಲೆಗಳಲ್ಲಿ ಒಂದಾಗಿರುವ ತುಮಕೂರಿನಲ್ಲಿ ಭೂಮಿ ಬೆಲೆ ಭರ್ಜರಿ ಹೆಚ್ಚಳವಾಗುವ ನಿರೀಕ್ಷೆ ಮೂಡಿದೆ. ಇದಕ್ಕೆ ಮುಖ್ಯ ಕಾರಣ ಬೆಂಗಳೂರು ಹಾಗೂ ತುಮಕೂರು ಜಿಲ್ಲೆಗಳ ನಡುವೆ ನಮ್ಮ ಮೆಟ್ರೋ ರೈಲು ಸಂಪರ್ಕ ಯೋಜನೆ ರೂಪಿಸುತ್ತಿರುವುದು. ಕೆಲವರ ವಿರೋಧದ ನಡುವೆಯೂ ಬೆಂಗಳೂರು ಮತ್ತು ತುಮಕೂರು ಜಿಲ್ಲೆಗಳ ನಡುವೆ ನಮ್ಮ ಮೆಟ್ರೋ ಯೋಜನೆ ಚುರುಕು ಪಡೆದುಕೊಂಡಿದೆ.

ಪ್ರಸ್ತಾವಿತ 59.60 ಕಿಮೀ ಉದ್ದದ ಈ ಮಾರ್ಗವು 26 ನಿಲ್ದಾಣಗಳನ್ನು ಒಳಗೊಂಡಿದ್ದು, ಅನುಮೋದನೆ ದೊರೆತರೆ, ನಮ್ಮ ಮೆಟ್ರೋ ಜಾಲದ ಅಡಿಯಲ್ಲಿ ಬರುವ ಮೊದಲ ಇಂಟರ್‌ಸಿಟಿ ಮೆಟ್ರೋ ಕಾರಿಡಾರ್ ಇದಾಗಲಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (ಬಿಎಂಆರ್‌ಸಿಎಲ್) ನಮ್ಮ ಮೆಟ್ರೋದ ಹಸಿರು ಮಾರ್ಗವನ್ನು ಮಾದವರದಿಂದ ತುಮಕೂರಿನವರೆಗೆ ವಿಸ್ತರಿಸಲು ರಾಜ್ಯ ಸರ್ಕಾರಕ್ಕೆ ಕಾರ್ಯಸಾಧ್ಯತಾ ಅಧ್ಯಯನವನ್ನು ಸಲ್ಲಿಸಿದೆ.
ಬೆಂಗಳೂರು ಸಮೀಪ ಜಿಲ್ಲೆಗಳಿಗೆ ಬಂಪರ್
ತುಮಕೂರು ಸೇರಿದಂತೆ ಬೆಂಗಳೂರಿನ ಸಮೀಪದ ಜಿಲ್ಲೆಗಳಿಗೆ ಬಂಪರ್ ಬಂದಂತಾಗಿದೆ. ಬೆಂಗಳೂರಿನಿಂದ ಸುಮಾರು 70 ಕಿ.ಮೀ ವಾಯುವ್ಯದಲ್ಲಿರುವ ತುಮಕೂರು ಬೆಳೆಯುತ್ತಿರುವ ನಗರವಾಗಿದೆ. ಅಲ್ಲದೇ ರೈಲು ಮತ್ತು ಬಸ್ ಮೂಲಕ ಪ್ರತಿದಿನ ಸಾವಿರಾರು ಜನರು ಕೆಲಸಕ್ಕಾಗಿ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದಾರೆ. ಕಳೆದ ಕೆಲವು ವರ್ಷಗಳಿಂದ ತುಮಕೂರಿಗೆ ಮೆಟ್ರೋ ಸಂಪರ್ಕವನ್ನು ವಿಸ್ತರಿಸುವ ಒತ್ತಾಯ ಸಹ ಕೇಳಿ ಬಂದಿತ್ತು.
ವಿವಿಧ ಭಾಗದಲ್ಲಿ ಭೂಮಿಗೆ ಬಂಗಾರದ ಬೆಲೆ ನಿರೀಕ್ಷೆ
ಇನ್ನು ಬೆಂಗಳೂರಿನ ಸುತ್ತಮುತ್ತಲಿನ ಪ್ರಮುಖ ಜಿಲ್ಲೆಗಳಲ್ಲಿ ಭೂಮಿ ಬೆಲೆ ಹೆಚ್ಚಳವಾಗುತ್ತಿದ್ದಂತೆಯೇ ಇದೀಗ ತುಮಕೂರಿನಲ್ಲೂ ಭೂಮಿ ಬೆಲೆ ಹೆಚ್ಚಳವಾಗುವ ಮುನ್ಸೂಚನೆ ಸಿಕ್ಕಿದೆ. ಪ್ರಸ್ತಾವಿತ ಮೆಟ್ರೋ ಕಾರಿಡಾರ್‌ನ ಪ್ರಮುಖ ಸ್ಥಳಗಳಲ್ಲಿ ಮಾದಾವರದಿಂದ ಪ್ರಾರಂಭವಾಗುತ್ತಿದೆ. ಮಾಕಳಿ, ದಾಸನಪುರ, ನೆಲಮಂಗಲ, ನೆಲಮಂಗಲ ವೀವರ್ ಕಾಲೊನಿ, ನೆಲಮಂಗಲ ಬಸ್ ನಿಲ್ದಾಣ, ನೆಲಮಂಗಲ ವಿಶ್ವೇಶ್ವರಪುರ, ನೆಲಮಂಗಲ ಟೋಲ್‌ಗೇಟ್, ಬೂದಿಹಾಳ್, ತಿಪ್ಪಗೊಂಡನಹಳ್ಳಿ,
ಟಿ. ಬೇಗೂರು, ಕುಲವನಹಳ್ಳಿ, ಬಿಲ್ಲನಕೋಟೆ, ಸೋಂಪುರ ಕೈಗಾರಿಕಾ ಪ್ರದೇಶ, ದಾಬಸ್‌ಪೇಟೆ, ಚಿಕ್ಕಹಳ್ಳಿ, ಹಿರೇಹಳ್ಳಿ ಕೈಗಾರಿಕಾ ಪ್ರದೇಶ, ಪಂಡಿತನಹಳ್ಳಿ, ಕ್ಯಾತ್ಸಂದ್ರ ಬೈಪಾಸ್, ಕ್ಯಾತ್ಸಂದ್ರ, ಎಸ್‌ಐಟಿ ಕಾಲೇಜು (ಸಿದ್ಧಾರ್ಥ ಕಾಲೇಜು), ತುಮಕೂರು ವಿಶ್ವವಿದ್ಯಾಲಯ, ಸಿದ್ದಗಂಗಾ ವೈದ್ಯಕೀಯ ಕಾಲೇಜು, ತುಮಕೂರು ಬಸ್ ನಿಲ್ದಾಣ, ಟುಡಾ ಲೇಔಟ್ ಹಾಗೂ ನಾಗಣ್ಣ ಪಾಳ್ಯ (ಶಿರಾ ಗೇಟ್) ಪ್ರದೇಶಗಳು ಸೇರಿವೆ.
ಈ ಪ್ರದೇಶಗಳಲ್ಲಿ ಮುಂದಿನ ದಿನಗಳಲ್ಲಿ ಭೂಮಿ ಬೆಲೆ ಹೆಚ್ಚಳವಾಗುವ ನಿರೀಕ್ಷೆ ಮೂಡಿದೆ. ಬೆಂಗಳೂರಿನಲ್ಲಿ ಮೆಟ್ರೋ ನಿಲ್ದಾಣಗಳು ನಿರ್ಮಾಣವಾಗುತ್ತಿರುವ ಪ್ರದೇಶಗಳಲ್ಲಿ ಈಗಾಗಲೇ ಭೂಮಿ ಬೆಲೆ ಹೆಚ್ಚಳವಾಗಿದೆ. ಬೆಂಗಳೂರಿನ ಪ್ರಮುಖ ಪ್ರದೇಶಗಳಲ್ಲಿ ಮೆಟ್ರೋ ನಿಲ್ದಾಣ ನಿರ್ಮಾಣವಾಗುತ್ತಿರುವ ಪ್ರದೇಶಗಳ 500 ಮೀಟರ್ ಪ್ರದೇಶದಲ್ಲಿ ರಿಯಲ್ ಎಸ್ಟೇಟ್ ಬೂಸ್ಟ್ ಆಗಿದೆ. ಇದೀಗ ಬೆಂಗಳೂರು - ತುಮಕೂರು ನಡುವೆ ಮೆಟ್ರೋ ಬರುತ್ತಿರುವುದು ರಿಯಲ್ ಎಸ್ಟೇಟ್ ಬೂಸ್ಟ್ ಆಗುವ ನಿರೀಕ್ಷೆ ಮೂಡಿದೆ.
ಭೂಮಿ ಬೆಲೆ ಹೆಚ್ಚಳ: ಇನ್ನು ಬೆಂಗಳೂರಿನಲ್ಲಿ ಮೆಟ್ರೋ ಯೋಜನೆ ಜಾರಿಯಾಗುತ್ತಿದ್ದಂತೆಯೇ ಬೆಂಗಳೂರಿನಲ್ಲಿ ಮೆಟ್ರೋ ಯೋಜನೆ ಹಾದು ಹೋಗಿರುವ ಪ್ರದೇಶಗಳಲ್ಲಿ ಭೂಮಿ ಬೆಲೆ ಸಹಜವಾಗಿಯೇ ಹೆಚ್ಚಳವಾಗಿದೆ. ಇದೇ ಬದಲಾವಣೆ ತುಮಕೂರಿನ ಭಾಗದಲ್ಲೂ ಆಗಬಹುದು ಎಂದು ನಿರೀಕ್ಷೆ ಮಾಡಲಾಗಿದೆ.












Click it and Unblock the Notifications