Get Updates
Get notified of breaking news, exclusive insights, and must-see stories!

ಅಸಮರ್ಪಕ ಆಡಳಿತದಿಂದ "ಬೆಂಗಳೂರು ಕೊಳಕು" ಆಗುತ್ತಿದೆ: ಉದ್ಯಮಿ ಕಿರಣ್ ಮಜುಂದಾರ್-ಶಾ

ಬೆಂಗಳೂರಿನ ಸಮಸ್ಯೆಗಳ ಬಗ್ಗೆ ಉದ್ಯಮಿಗಳ ಧ್ವನಿ ಎತ್ತುವುದು ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಸಮಸ್ಯೆಗಳು ಹೆಚ್ಚಾಗುತ್ತಿವೆ ಎಂದು ಉದ್ಯಮಿಗಳು ಹಾಗೂ ವ್ಯಾಪಾರಿಗಳು ನಿರಂತರವಾಗಿ ಸರ್ಕಾರ ಹಾಗೂ ಗ್ರೇಟರ್ ಬೆಂಗಳೂರು ಆಡಳಿತವನ್ನು ದೂಷಿಸುತ್ತಿದ್ದಾರೆ. ದಿನದಿಂದ ದಿನಕ್ಕೆ ಈ ವಿಚಾರವಾಗಿ ಉದ್ಯಮಿಗಳು ಧ್ವನಿ ಎತ್ತುವುದು ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬದಲಾಗಿ, ಗ್ರೇಟರ್ ಬೆಂಗಳೂರು ಆಡಳಿತ ಬಂದ ಮೇಲೆ ಬೆಂಗಳೂರಿನಲ್ಲಿ ಸಮಸ್ಯೆ ಕಡಿಮೆ ಆಗಲಿದೆ ಎಂದು ಸರ್ಕಾರ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ ಶಿವಕುಮಾರ್ ಅವರು ಹೇಳಿದ್ದರು.

ಇದೀಗ ಬೆಂಗಳೂರಿನಲ್ಲಿ ರಸ್ತೆಗುಂಡಿ ಸಮಸ್ಯೆ ಹಾಗೂ ಕಸದ ಸಮಸ್ಯೆ ಸೇರಿದಂತೆ ಹಲವು ಸಮಸ್ಯೆಗಳು ಹೆಚ್ಚಾಗಿವೆ. ಕೂಡಲೇ ಈ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಉದ್ಯಮಿಗಳು ಹಾಗೂ ಸಾರ್ವಜನಿಕರು ಸೇರಿದಂತೆ ಹಲವರು ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಇನ್ನೂ ರಸ್ತೆಗುಂಡಿ ಸಮಸ್ಯೆ ಹಾಗೂ ಕಸದ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ. ದಿನದಿಂದ ದಿನಕ್ಕೆ ಈ ಸಮಸ್ಯೆಗಳು ಹೆಚ್ಚಾಗುತ್ತಲ್ಲೇ ಇವೆ. ಇದೀಗ ಈ ವಿಚಾರವಾಗಿ ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್-ಶಾ ಅವರು ಮತ್ತೊಂದು ಟ್ವೀಟ್ ಮಾಡಿ ವಾಗ್ದಾಳಿ ಮುಂದುವರಿಸಿದ್ದಾರೆ.

Bengaluru Turning Dirty Due to Mismanagement Kiran Mazumdar-Shaw Urges DK Shivakumar to Act

ರಾಜ್ಯ ರಾಜಧಾನಿ ಬೆಂಗಳೂರಿನ ನಿರ್ವಹಣೆ ಲೋಪದ ಬಗ್ಗೆ ನಗರ ಪಾಲಿಕೆ ವಿರುದ್ಧ ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್-ಶಾ ಅವರು ವಾಗ್ದಾಳಿ ಮುಂದುವರೆಸಿದ್ದಾರೆ. ಕೆಲವೇ ದಿನಗಳ ಮುಂಚೆ ಅವರು ಬೆಂಗಳೂರು ಸಮಸ್ಯೆಯ ಬಗ್ಗೆ ಗಮನ ಸೆಳೆದಿದ್ದರು. ಇದೀಗ ಬೆಂಗಳೂರು ಕೊಳಕಾಗಲು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಸಮರ್ಥತೆಯೇ ಈ ಎಲ್ಲಾ ಸಮಸ್ಯೆಗಳಿಗೆ ಕಾರಣ ಎಂದು ಅವರು ದೂರಿದ್ದಾರೆ.

ಈ ಕುರಿತು ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಸಾರ್ವಜನಿಕರ ಪ್ರಜ್ಞೆಯ ಕೊರತೆ ಮತ್ತು ನಗರದ ಕಸರಾಶಿಗಳನ್ನು ನಿರ್ವಹಿಸುವಲ್ಲಿ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಅಸಮರ್ಥತೆಯು ಬೆಂಗಳೂರು ನಗರವನ್ನಾಗಿ ಬದಲಾಯಿಸಿದೆ. ಜನರೂ ಸಹ ರಸ್ತೆಗಳಲ್ಲಿ ಎಲ್ಲೆಂದರಲ್ಲಿ ಕಸ ಸುರಿಯುವುದನ್ನು ನಿಲ್ಲಿಸಬೇಕು. ಬ್ಲಾಕ್ ಸ್ಪಾಟ್ ಗಳನ್ನು ಸೃಷ್ಟಿಸದೆ ಸಹಕರಿಸಬೇಕು ಎಂದು ಅವರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ನಗರವನ್ನು ಸ್ವಚ್ಛವಾಗಿಡಲು ಪೌರಕಾರ್ಮಿಕರಿಗೆ ಉತ್ತಮ ಉಪಕರಣಗಳು ಮತ್ತು ತರಬೇತಿಯನ್ನು ಕೊಡಬೇಕು. ವಲಯ ಮಟ್ಟದ ಆಯುಕ್ತರು ಕಸ ನಿರ್ವಹಣೆಯ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇದೀಗ ಕಿರಣ್ ಮಜುಂದಾರ್-ಶಾ ಅವರ ಟ್ವೀಟ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+