ಬೆಂಗಳೂರು: ಇಬ್ಬರು ಕ್ರಿಕೆಟ್ ಬುಕ್ಕಿಗಳ ಬಂಧನ
ಬೆಂಗಳೂರು, ಫೆ. 22 : ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ವಿಶ್ವಕಪ್ ಪಂದ್ಯಕ್ಕೆ ಸಂಬಂಧಿಸಿ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಇಬ್ಬರನ್ನು ಬೆಂಗಳೂರು ಸಿಸಿಬಿ ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ಮುನೀರ್ ಪಾಷಾ ಮತ್ತು ಸಾದಿಕ್ ಎಂಬುವರನ್ನು ಬಂಧಿಸಿ 7 ಮೊಬೈಲ್, ಲ್ಯಾಪ್ ಟಾಪ್ ಸೇರಿದಂತೆ 34 ಸಾವಿರ ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಡಿಜೆ ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಪ್ರಮುಖ ಬುಕ್ಕಿ ಯೋಗೋಶ್ ಬಂಧನಕ್ಕೆ ಬಲೆ ಬೀಸಲಾಗಿದೆ.

ಪಂದ್ಯ ನಡೆಯುತ್ತಿದ್ದ ವೇಳೆ ಬುಕ್ಕಿಗಳು ಟಿವಿ ವೀಕ್ಷಿಸುತ್ತ ಬೆಟ್ಟಿಂಗ್ ನಲ್ಲಿ ತೊಡಗಿದ್ದರು. ಈ ವೇಳೆ ದಾಳಿ ಮಾಡಿದ ಡಿ.ಜೆ ಹಳ್ಳಿ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ರಾಜಸ್ಥಾನದ ಪ್ರಮುಖ ಬುಕ್ಕಿ ಯೋಗೀಶ್ ಎಂಬಾತನ ನಿರ್ದೇಶನದಂತೆ ಇವರು ಕಾರ್ಯನಿರ್ವಹಿಸುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.












Click it and Unblock the Notifications