ಬೆಂಗಳೂರು ವಿವಿಯ 58ನೇ ಘಟಿಕೋತ್ಸವ: ಮಾಜಿ ಪ್ರಧಾನಿ HDD, ಇಸ್ರೋದ ಅಧ್ಯಕ್ಷರಿಗೆ ಗೌರವ ಡಾಕ್ಟರೇಟ್ ನೀಡಲು ತೀರ್ಮಾನ
ಬೆಂಗಳೂರು, ಅಕ್ಟೋಬರ್, 17: ಇಂದು (ಅಕ್ಟೋಬರ್ 17) ಬೆಂಗಳೂರು ವಿಶ್ವವಿದ್ಯಾಲಯದ 58ನೇ ಘಟಿಕೋತ್ಸವ ಕಾರ್ಯಕ್ರಮ ಇದ್ದು, ಈ ವೇಳೆ ಇಬ್ಬರು ಸಾಧಕರು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಇಸ್ರೋದ ಅಧ್ಯಕ್ಷ ಸೋಮನಾಥ್‌ಗೆ ಗೌರವ ಡಾಕ್ಟರೇಟ್ ನೀಡಲು ತೀರ್ಮಾನ ಮಾಡಲಾಗಿದೆ ಎಂದು ಬೆಂಗಳೂರು ವಿವಿ ಕುಲಪತಿ ಜಯಕರ ಶೆಟ್ಟಿ ಅವರು ತಿಳಿಸಿದ್ದಾರೆ.
ನಗರದ ಜ್ಞಾನ ಜ್ಯೋತಿ ಸಭಾಂಗಣದಲ್ಲಿ10.30ಕ್ಕೆ ಬೆಂಗಳೂರು ವಿಶ್ವವಿದ್ಯಾಲಯದ 58ನೇ ಘಟಿಕೋತ್ಸವ ಕಾರ್ಯಕ್ರಮ ಶುರು ಆಗಲಿದ್ದು, ಈ ವೇಳೆ ಇಬ್ಬರು ಸಾಧಕರು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಇಸ್ರೋದ ಅಧ್ಯಕ್ಷ ಸೋಮನಾಥ್‌ಗೆ ಗೌರವ ಡಾಕ್ಟರೇಟ್ ನೀಡಲು ತೀರ್ಮಾನಿಸಲಾಗಿದೆ. ಅಲ್ಲದೆ 28,871 ವಿದ್ಯಾರ್ಥಿಗಳು ಪದವಿ ಪಡೆಯಲಿದ್ದಾರೆ.

ಸ್ನಾತಕ ಪದವಿಯಲ್ಲಿ 104 ಚಿನ್ನದ ಪದಕ, ಸ್ನಾತಕೋತ್ತರ ಪದವಿಯಲ್ಲಿ 195 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ನೀಡಲಾಗುತ್ತದೆ. ಒಟ್ಟು 299 ಚಿನ್ನದ ಪದಕ ನೀಡಲಾಗುತ್ತದೆ ಎಂದು ಬೆಂಗಳೂರು ವಿವಿ ಕುಲಪತಿ ಜಯಕರ ಶೆಟ್ಟಿ ಮಾಹಿತಿ ನೀಡಿದ್ದಾರೆ. ರಾಜ್ಯ ಬಂದ್ ಹಿನ್ನೆಲೆ ಸೆಪ್ಟೆಂಬರ್ 29ಕ್ಕೆ ನಿಗದಿಯಾಗಿದ್ದ ಈ ಘಟಿಕೋತ್ಸವವನ್ನು ಬೆಂಗಳೂರು ವಿಶ್ವವಿದ್ಯಾಲಯ ಮುಂದೂಡಿತ್ತು. ಇನ್ನು ಇವತ್ತಿನ ಕಾರ್ಯಕ್ರಮಕ್ಕೆ ಝೆರೋದಾ ಸಂಸ್ಥೆಯ ಸಹ ಸಂಸ್ಥಾಪಕ ನಿಖಿಲ್ ಕಾಮತ್ ಮುಖ್ಯ ಅತಿಥಿಯಾಗಿ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.

58ನೇ ಘಟಿಕೋತ್ಸವದಲ್ಲಿ ಒಟ್ಟು 28,871 ಅಭ್ಯರ್ಥಿಗಳು ಪದವಿ ಪಡೆಯಲು ಅರ್ಹರಾಗಿದ್ದು, ಅವರಲ್ಲಿ 13,707 ವಿದ್ಯಾರ್ಥಿಗಳು ಮತ್ತು 15,164 ವಿಧ್ಯಾರ್ಥಿನಿಯರು ಇದ್ದಾರೆ. 20 ಗ್ರಾಂ ಬೆಳ್ಳಿಯ ನಾಣ್ಯಕ್ಕೆ 18 ಕ್ಯಾರೆಟ್‌ನ 1.3 ಗ್ರಾಂ ಚಿನ್ನದ ಎಂಬೋಜ್ ಮಾಡಿರುವ ಚಿನ್ನದ ಪದಕಗಳನ್ನು ಈ ಬಾರಿ ವಿದ್ಯಾರ್ಥಿಗಳಿಗೆ ನೀಡಲಾಗುವುದು ಎಂದು ತಿಳಿಸಿದ್ದಾರೆ.












Click it and Unblock the Notifications