ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು ಅನ್‌ಲಾಕ್: ಜೂನ್ 14ರಿಂದ ಏನಿರುತ್ತೆ? ಏನಿರಲ್ಲ?

|
Google Oneindia Kannada News

ಬೆಂಗಳೂರು, ಜೂನ್ 10: ಬರುವ ಸೋಮವಾರ ಅಂದರೆ ಜೂನ್ 14ರ ಬೆಳಗ್ಗೆ 6 ಗಂಟೆಗೆ ಬೆಂಗಳೂರು ಸಂಪೂರ್ಣ ಲಾಕ್‌ಡೌನ್‌ನಿಂದ ಮುಕ್ತಿ ಹೊಂದಲಿದೆ.

Recommended Video

Lockdown ಮುಂದಿನ ಹಂತದಲ್ಲಿ ಏನೆಲ್ಲಾ ತೆರೆಯಲಿದೆ | Oneindia Kannada

ಕೋವಿಡ್- 19 ತಡೆಗಟ್ಟುವ ನಿಟ್ಟಿನಲ್ಲಿ ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳ ಮೇರೆಗೆ ಈಗಿರುವ ನಿರ್ಭಂಧಗಳಲ್ಲಿ ಕೆಲವು ಮಾರ್ಪಾಡುಗಳನ್ನು/ ಸಡಿಲಿಕೆಗಳನ್ನು ಮಾಡಲು ಇಂದಿನ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಸಿಎಂ ಯಡಿಯೂರಪ್ಪ ಗುರುವಾರ ಸಂಜೆ ಸುದ್ದಿಗೋಷ್ಟಿಯಲ್ಲಿ ಹೇಳಿದರು. ಬೆಂಗಳೂರಿನಲ್ಲಿ ಅನ್‌ಲಾಕ್ ಈ ಕೆಳಕಂಡಂತಿದೆ.

Bengaluru Unlock Guidelines: Whats Allowed To Open And Whats Closed

ಏನಿರುತ್ತೆ?
* ನಿರ್ಮಾಣ ಚಟುವಟಿಕೆ ಆರಂಭಿಸಲು ಅನುಮತಿ ನೀಡಲಾಗುತ್ತದೆ.
* ಸಿಮೆಂಟ್, ಸ್ಟೀಲ್ ಅಂಗಡಿ ತೆಗೆಯಲು ಅವಕಾಶವಿದೆ.
* ಎಲ್ಲ ಕಾರ್ಖಾನೆ ಶೇ 50 ಸಿಬ್ಬಂದಿ ಹಾಜರಿಯೊಂದಿಗೆ ಕಾರ್ಯನಿರ್ವಹಣೆಗೆ ಅವಕಾಶ.
* ಗಾರ್ಮೆಂಟ್ಸ್​ ಶೇ 30 ಹಾಜರಿಯೊಂದಿಗೆ ಕಾರ್ಯನಿರ್ವಹಣೆಗೆ ಅವಕಾಶ ನೀಡಲಾಗಿದೆ.
* ಮದ್ಯ ಪಾರ್ಸೆಲ್ ಪಡೆಯಲು ಮಧ್ಯಾಹ್ನ 2ರವರೆಗೆ ಅವಕಾಶ ನೀಡಲಾಗಿದೆ.
* ಬಾರ್ ಮತ್ತು ರೆಸ್ಟೋರೆಂಟ್​, ವೈನ್​ ಸ್ಟೋರ್, ಎಂಎಸ್​ಐಎಲ್​ಗಳಲ್ಲಿ ಮಧ್ಯಾಹ್ನ 2ರವರೆಗೆ

ಪಾರ್ಸೆಲ್‌ಗೆ​ ಅವಕಾಶ
* ಬೆಳಗ್ಗೆ 6 ಗಂಟೆಯಿಂದ 9ಗಂಟೆವರೆಗೆ ಪಾರ್ಕ್‌ಗಳಲ್ಲಿ ವಾಕಿಂಗ್ ಮಾಡಲು ಅವಕಾಶ
* ಆಟೋ, ಟ್ಯಾಕ್ಸಿಗಳಲ್ಲಿ ಇಬ್ಬರ ಸಂಚಾರಕ್ಕೆ ಅವಕಾಶ
* ಬೀದಿ ಬದಿಯ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಅವಕಾಶ

ಏನಿರಲ್ಲ?
* ಕೆಎಸ್​ಆರ್​ಟಿಸಿ, ಬಿಎಂಟಿಸಿ ಸಂಚಾರಕ್ಕೆ ಅವಕಾಶವಿಲ್ಲ.
* ಶಾಲಾ-ಕಾಲೇಜುಗಳಿಗೆ ಅನುಮತಿ ನೀಡಿಲ್ಲ
* ಮಾಲ್, ಚಲನಚಿತ್ರ ಮಂದಿರಗಳಿಗೆ ಅನುಮತಿ ನೀಡಿಲ್ಲ

English summary
Bengaluru will be unlocked at 6 am on June 14 and various activities have been allowed.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X