ಚಿತ್ರಕಲಾ ಪರಿಷತ್ತಿನಲ್ಲಿ ಬೆಳಕಿನ ಹಬ್ಬಕ್ಕಾಗಿ ವಿಶೇಷ ದೀಪಗಳ ಮಾರಾಟ
ಬೆಂಗಳೂರು, ಅಕ್ಟೋಬರ್ 10: ದೀಪಗಳ ಹಬ್ಬ ದೀಪಾವಳಿ. ದೇಶದ ಎಲ್ಲಾ ಭಾಗಗಳಲ್ಲೂ ಆಚರಿಸಲ್ಪಡುವ ಈ ಹಬ್ಬಕ್ಕೆ ಭಾರತೀಯರ ಜೀವನದಲ್ಲಿ ಬಹಳ ಮಹತ್ವಪೂರ್ಣವಾದ ಸ್ಥಾನವಿದೆ. ಅದರಲ್ಲೂ ಅಂಧಕಾರವನ್ನು ಹೋಗಲಾಡಿಸುವ ದೀಪಗಳಿಗೆ ಅವುಗಳದೇ ಆದ ವೈಶಿಷ್ಟ್ಯತೆ ಇದೆ.
ದೇಶದ ವಿವಿಧ ಭಾಗಗಳಲ್ಲಿ ವಿವಿಧ ರೀತಿಯಲ್ಲಿ ಆಚರಿಸಲ್ಪಡುವ ಈ ಹಬ್ಬದ ಕೇಂದ್ರ ಬಿಂದು ದೀಪಗಳು. ನಗರದ ಜನರಿಗೆ ದೇಶದ ವಿವಿಧ ಭಾಗದ ವೈವಿಧ್ಯಮಯ ದೀಪಗಳನ್ನು ಪ್ರದರ್ಶಿಸಬೇಕು ಹಾಗೂ ಅವುಗಳನ್ನು ಕೊಳ್ಳುವ ಅವಕಾಶ ನೀಡುವ ಉದ್ದೇಶದಿಂದ ಅಕ್ಟೋಬರ್ 11 ರಿಂದ 20 ರ ವರೆಗೆ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಗ್ರಾಂಡ್ ಫ್ಲಿಯಾ ಮಾರ್ಕೆಟ್ ದೀಪಾವಳಿ ವಿಶೇಷ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಿದೆ.
ವೈವಿಧ್ಯಮಯ ದೀಪಗಳು:
ಈ ಬಾರಿಯ ಈ ಉತ್ಸವದಲ್ಲಿ ದೀಪಗಳ ಪ್ರಮುಖ ಆಕರ್ಷಣೆಯಾಗಿರಲಿವೆ. ವೈವಿಧ್ಯಮಯ ಮಣ್ಣಿನ ದೀಪಗಳು, ಲೋಹದ ದೀಪಗಳು, ತರೇ ವಾರಿ ಲೈಟಿಂಗ್ ಆಯ್ಕೆಗಳ ಶ್ರೇಣಿ ಇಲ್ಲಿರಲಿದೆ. ದೇಶದ ಎಲ್ಲಾ ಭಾಗಗಳಿಂದ ಆಗಮಿಸಿದ ಕರಕುಶಲಕಾರರು ತಯಾರಿಸಿದ ವಿಭಿನ್ನ ರೀತಿಯ ದೀಪಗಳ ಪ್ರದರ್ಶನ ಇಲ್ಲಿರಲಿದೆ.

ಈ ಪ್ರದರ್ಶನ ಹಾಗೂ ಮಾರಾಟ ಮೇಳದ ಪ್ರಮುಖ ಆಕರ್ಷಣೆ ತರೇವಾರಿ ದೀಪಗಳು. ಈ ಬಾರಿ ಒಂದೇ ವೇದಿಕೆಯ ಅಡಿಯಲ್ಲಿ ಎಲ್ಲಾ ರೀತಿಯ ಹಾಗೂ ವಿಭಿನ್ನ ದೀಪಗಳನ್ನು ಖರೀದಿಸಬಹುದಾಗಿದೆ. ಇದರ ಜೊತೆಯಲ್ಲಿಯೇ ಹಬ್ಬಕ್ಕೆ ಬೇಕಾಗಿರುವ ಎಲ್ಲಾ ರೀತಿಯ ಸಾಮಗ್ರಿಗಳನ್ನು ಇಲ್ಲಿ ಕೊಳ್ಳಬಹುದಾಗಿದೆ. ಅಲಂಕಾರಿಕ ವಸ್ತುಗಳ ಜೊತೆಯಲ್ಲಿಯೇ ಮನೆ ಮಂದಿಗೆ ಬೇಕಾಗಿರುವ ಬಟ್ಟೆಗಳು ಹಾಗೂ ಇನ್ನಿತರೆ ವಸ್ತುಗಳನ್ನು ಕೊಳ್ಳಬಹುದಾಗಿದೆ.
100 ಕ್ಕೂ ಹೆಚ್ಚು ಅಂಗಡಿಗಳಿದ್ದು ದೇಶದ ಎಲ್ಲಾ ಭಾಗಗಳಿಂದ ಆಗಮಿಸಿರುವ ಕಲಾವಿದರುಗಳು ತಮ್ಮ ಕಲೆಯನ್ನು ಪ್ರದರ್ಶನಕ್ಕೆ ಇಡಲಿದ್ದಾರೆ. ಮಣ್ಣು, ಕಲ್ಲು, ಮರ ಹಾಗೂ ಲೋಹಗಳನ್ನು ಬಳಸಿ ತಯಾರಿಸಿರುವ ಗೊಂಬೆಗಳು ಪ್ರಮುಖ ಆಕರ್ಷಣೆಯಾಗಿರಲಿವೆ.
ಇದರ ಜೊತೆಯಲ್ಲಿಯೇ, ದೇಶದ ವಿವಿಧ ಮೂಲೆಗಳ ಕಲಾವಿದರ ಕಲಾಕೃತಿಗಳು ಹಾಗೂ ಉತ್ಪನ್ನಗಳು ನೇರವಾಗಿ ಜನರಿಗೆ ತಲುಪಲಿವೆ. ನಿಮ್ಮ ಮನೆಯ ಗಾರ್ಡನ್ ಅಲಂಕರಿಸಲು, ನಿಮಗೊಪ್ಪುವ ಹ್ಯಾಂಡ್ ಲೂಮ್ ಸ್ಯಾರಿಯನ್ನು ಸೆಲೆಕ್ಟ್ ಮಾಡಲು, ಕುರ್ತಿಗಳು ಮತ್ತು ಆಭರಣಗಳನ್ನು ಕೊಳ್ಳಲು ಅತ್ಯುತ್ತಮ ಮೇಳ ಇದಾಗಿರಲಿದೆ.

ಬೆಂಗಳೂರು ಉತ್ಸವ
ಸ್ಥಳ: ಕರ್ನಾಟಕ ಚಿತ್ರಕಲಾ ಪರಿಷತ್
(ಶಿವಾನಂದ ವೃತ್ತದ ಬಳಿ)
ದಿನಾಂಕ: ಅಕ್ಟೋಬರ್ 11 ರಿಂದ ಅಕ್ಟೋಬರ್ 20, 2019 ವರೆಗೆ
ಸಮಯ: ಬೆಳಿಗ್ಗೆ 11 ಗಂಟೆಯಿಂದ ಸಂಜೆ 7 ರ ವರೆಗೆ
ಈ ಮೇಳದಲ್ಲಿ ದೇಶದ ವಿವಿಧ ಭಾಗಗಳ ಕರಕುಶಲಕಾರರು ತಯಾರಿಸಿದ ತರಹೇವಾರಿ ಕರಕುಶಲ ವಸ್ತುಗಳು, ಆಟಿಕೆಗಳು, ಉಡುಪುಗಳು ಸೇರಿದಂತೆ ರಾಜಧಾನಿ ಬೆಂಗಳೂರಿನ ಜನತೆಗೆ ಮುದ ನೀಡುವಂತಹ ಉತ್ಪನ್ನಗಳು ಒಂದೇ ಸೂರಿನಡಿ ದೊರೆಯುತ್ತವೆ.
ಮನೆಯನ್ನು ಅಲಂಕಾರ ಮಾಡುವ ಉತ್ಪನ್ನಗಳು, ಹ್ಯಾಂಡ್‍ಲೂಂಗಳು, ಕರಕುಶಲ ವಸ್ತುಗಳು, ಬಟ್ಟೆ, ಮರದ ಆಟಿಕೆಗಳು, ಹೆಂಗಳೆಯರ ಆಕರ್ಷಣೆಗೆಂದು ಆಭರಣಗಳು, ಬೆಡ್ ಲೈನೆನ್, ಕಲಾಕೃತಿಗಳು, ಪೀಠೋಪಕರಣಗಳು, ಮ್ಯಾಟ್‍ಗಳು, ಪಿಂಗಾಣಿ ವಸ್ತುಗಳು ಸೇರಿದಂತೆ ನೂರಾರು ಬಗೆಯ ಉತ್ಪನ್ನಗಳು ಈ ಪ್ರದರ್ಶನದಲ್ಲಿರಲಿವೆ.
-
KSRTC ನೌಕರರ ಹಿಂಬಾಕಿ 1271 ರೂ ಬಿಡುಗಡೆ; ವೇತನ ಹೆಚ್ಚಳಕ್ಕೆ ಮುಹೂರ್ತ ಫಿಕ್ಸ್: ಏ.17ಕ್ಕೆ ನಿರ್ಣಾಯಕ ಸಭೆ -
April 7 Horoscope: ಸ್ಪರ್ಧೆಯಲ್ಲಿ ಜಯ ಮತ್ತು ಹೊಸ ಉದ್ಯೋಗ ಅವಕಾಶಗಳು -
Gold Rate April 7: ಚಿನ್ನ - ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್ನ್ಯೂಸ್ -
Karnataka Rain Updates: ಚಂಡಮಾರುತ ಪ್ರಸರಣ ಪ್ರಭಾವ: ಬೆಂಗಳೂರು ಸೇರಿ ಕರ್ನಾಟಕದ 8 ಜಿಲ್ಲೆಗಳಲ್ಲಿ 3ದಿನ ಮಳೆ -
ಕರ್ನಾಟಕ ದ್ವಿತೀಯ PUC ಫಲಿತಾಂಶಕ್ಕೆ ತಟ್ಟಿದ ಚುನಾವಣಾ ನೀತಿ ಸಂಹಿತೆ ಬಿಸಿ: ಏಪ್ರಿಲ್ 8ಕ್ಕೂ ರಿಸಲ್ಟ್ ಬರೋದು ಡೌಟ್? -
Viral Video: ನಾಳೆಯೇ ನಿಮ್ಮ ಕೆಲಸ ಹೋದರೆ ಏನು ಮಾಡುವಿರಿ? ಮಾಜಿ ಗೂಗಲ್ ಉದ್ಯೋಗಿಯ ಪ್ರಶ್ನೆಗೆ ದಂಗಾದ ನೆಟ್ಟಿಗರು -
Viral Video: ಆರ್ಸಿಬಿ Vs ಸಿಎಸ್ಕೆ ಪಂದ್ಯ; ಕರ್ನಾಟಕ Vs ತಮಿಳುನಾಡು ಮಾಡಬೇಡಿ ಎಂದ ಸಿಎಸ್ಕೆ ಫ್ಯಾನ್ -
Divorce Celebration: ಡಿವೋರ್ಸ್ ಪಡೆದ ಮಗಳಿಗೆ ಸಿಹಿ ತಿನ್ನಿಸಿ ಅದ್ದೂರಿ ಸ್ವಾಗತ: ತಂದೆಯ ಸಂಭ್ರಮಾಚರಣೆ ವಿಡಿಯೋ ವೈರಲ್ -
ಪತಿ ವಿಜಯ್ ದೇವರಕೊಂಡ ಜೊತೆ ಮೊದಲ ಬಾರಿಗೆ ತವರಿಗೆ ಬಂದ ರಶ್ಮಿಕಾ: ತಂದೆಯಿಂದ ಐಷಾರಾಮಿ ಬಂಗಲೆ ಉಡುಗೊರೆ -
Bengaluru Sambar: ಬೆಂಗಳೂರು ಹೋಟೆಲ್ಗಳಲ್ಲಿ ಸಾಂಬಾರ್ ಸ್ವೀಟ್ ಯಾಕೆ, ಇಲ್ಲಿದೆ ಕನ್ನಡಿಗರ ಯಕ್ಷ ಪ್ರಶ್ನೆಗೆ ಉತ್ತರ -
Dhurandhar 2: ಧುರಂಧರ್ 2 ಸಿನಿಮಾ ನೋಡಿ; ರಿವ್ಯೂ ಕೊಟ್ಟ ವಿರಾಟ್ ಕೊಹ್ಲಿ - ಅನುಷ್ಕಾ ಶರ್ಮಾ -
Manju Warrier: ನಟಿ ಮಂಜು ವಾರಿಯರ್ಗೆ ವೇದಿಕೆಯಲ್ಲೇ ಮುತ್ತಿಟ್ಟ ಹುಚ್ಚು ಅಭಿಮಾನಿ, ವೈರಲ್ ವಿಡಿಯೋ ಇಲ್ಲಿದೆ












Click it and Unblock the Notifications