ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿತ್ರಕಲಾ ಪರಿಷತ್ತಿನಲ್ಲಿ ಬೆಳಕಿನ ಹಬ್ಬಕ್ಕಾಗಿ ವಿಶೇಷ ದೀಪಗಳ ಮಾರಾಟ

|
Google Oneindia Kannada News

ಬೆಂಗಳೂರು, ಅಕ್ಟೋಬರ್‌ 10: ದೀಪಗಳ ಹಬ್ಬ ದೀಪಾವಳಿ. ದೇಶದ ಎಲ್ಲಾ ಭಾಗಗಳಲ್ಲೂ ಆಚರಿಸಲ್ಪಡುವ ಈ ಹಬ್ಬಕ್ಕೆ ಭಾರತೀಯರ ಜೀವನದಲ್ಲಿ ಬಹಳ ಮಹತ್ವಪೂರ್ಣವಾದ ಸ್ಥಾನವಿದೆ. ಅದರಲ್ಲೂ ಅಂಧಕಾರವನ್ನು ಹೋಗಲಾಡಿಸುವ ದೀಪಗಳಿಗೆ ಅವುಗಳದೇ ಆದ ವೈಶಿಷ್ಟ್ಯತೆ ಇದೆ.

ದೇಶದ ವಿವಿಧ ಭಾಗಗಳಲ್ಲಿ ವಿವಿಧ ರೀತಿಯಲ್ಲಿ ಆಚರಿಸಲ್ಪಡುವ ಈ ಹಬ್ಬದ ಕೇಂದ್ರ ಬಿಂದು ದೀಪಗಳು. ನಗರದ ಜನರಿಗೆ ದೇಶದ ವಿವಿಧ ಭಾಗದ ವೈವಿಧ್ಯಮಯ ದೀಪಗಳನ್ನು ಪ್ರದರ್ಶಿಸಬೇಕು ಹಾಗೂ ಅವುಗಳನ್ನು ಕೊಳ್ಳುವ ಅವಕಾಶ ನೀಡುವ ಉದ್ದೇಶದಿಂದ ಅಕ್ಟೋಬರ್‌ 11 ರಿಂದ 20 ರ ವರೆಗೆ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಗ್ರಾಂಡ್‌ ಫ್ಲಿಯಾ ಮಾರ್ಕೆಟ್ ದೀಪಾವಳಿ ವಿಶೇಷ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಿದೆ.

ವೈವಿಧ್ಯಮಯ ದೀಪಗಳು:
ಈ ಬಾರಿಯ ಈ ಉತ್ಸವದಲ್ಲಿ ದೀಪಗಳ ಪ್ರಮುಖ ಆಕರ್ಷಣೆಯಾಗಿರಲಿವೆ. ವೈವಿಧ್ಯಮಯ ಮಣ್ಣಿನ ದೀಪಗಳು, ಲೋಹದ ದೀಪಗಳು, ತರೇ ವಾರಿ ಲೈಟಿಂಗ್‌ ಆಯ್ಕೆಗಳ ಶ್ರೇಣಿ ಇಲ್ಲಿರಲಿದೆ. ದೇಶದ ಎಲ್ಲಾ ಭಾಗಗಳಿಂದ ಆಗಮಿಸಿದ ಕರಕುಶಲಕಾರರು ತಯಾರಿಸಿದ ವಿಭಿನ್ನ ರೀತಿಯ ದೀಪಗಳ ಪ್ರದರ್ಶನ ಇಲ್ಲಿರಲಿದೆ.

Bengaluru Utsav to Display Deepavali Lamps Grand Flea Market

ಈ ಪ್ರದರ್ಶನ ಹಾಗೂ ಮಾರಾಟ ಮೇಳದ ಪ್ರಮುಖ ಆಕರ್ಷಣೆ ತರೇವಾರಿ ದೀಪಗಳು. ಈ ಬಾರಿ ಒಂದೇ ವೇದಿಕೆಯ ಅಡಿಯಲ್ಲಿ ಎಲ್ಲಾ ರೀತಿಯ ಹಾಗೂ ವಿಭಿನ್ನ ದೀಪಗಳನ್ನು ಖರೀದಿಸಬಹುದಾಗಿದೆ. ಇದರ ಜೊತೆಯಲ್ಲಿಯೇ ಹಬ್ಬಕ್ಕೆ ಬೇಕಾಗಿರುವ ಎಲ್ಲಾ ರೀತಿಯ ಸಾಮಗ್ರಿಗಳನ್ನು ಇಲ್ಲಿ ಕೊಳ್ಳಬಹುದಾಗಿದೆ. ಅಲಂಕಾರಿಕ ವಸ್ತುಗಳ ಜೊತೆಯಲ್ಲಿಯೇ ಮನೆ ಮಂದಿಗೆ ಬೇಕಾಗಿರುವ ಬಟ್ಟೆಗಳು ಹಾಗೂ ಇನ್ನಿತರೆ ವಸ್ತುಗಳನ್ನು ಕೊಳ್ಳಬಹುದಾಗಿದೆ.

100 ಕ್ಕೂ ಹೆಚ್ಚು ಅಂಗಡಿಗಳಿದ್ದು ದೇಶದ ಎಲ್ಲಾ ಭಾಗಗಳಿಂದ ಆಗಮಿಸಿರುವ ಕಲಾವಿದರುಗಳು ತಮ್ಮ ಕಲೆಯನ್ನು ಪ್ರದರ್ಶನಕ್ಕೆ ಇಡಲಿದ್ದಾರೆ. ಮಣ್ಣು, ಕಲ್ಲು, ಮರ ಹಾಗೂ ಲೋಹಗಳನ್ನು ಬಳಸಿ ತಯಾರಿಸಿರುವ ಗೊಂಬೆಗಳು ಪ್ರಮುಖ ಆಕರ್ಷಣೆಯಾಗಿರಲಿವೆ.

ಇದರ ಜೊತೆಯಲ್ಲಿಯೇ, ದೇಶದ ವಿವಿಧ ಮೂಲೆಗಳ ಕಲಾವಿದರ ಕಲಾಕೃತಿಗಳು ಹಾಗೂ ಉತ್ಪನ್ನಗಳು ನೇರವಾಗಿ ಜನರಿಗೆ ತಲುಪಲಿವೆ. ನಿಮ್ಮ ಮನೆಯ ಗಾರ್ಡನ್‌ ಅಲಂಕರಿಸಲು, ನಿಮಗೊಪ್ಪುವ ಹ್ಯಾಂಡ್‌ ಲೂಮ್‌ ಸ್ಯಾರಿಯನ್ನು ಸೆಲೆಕ್ಟ್‌ ಮಾಡಲು, ಕುರ್ತಿಗಳು ಮತ್ತು ಆಭರಣಗಳನ್ನು ಕೊಳ್ಳಲು ಅತ್ಯುತ್ತಮ ಮೇಳ ಇದಾಗಿರಲಿದೆ.

Bengaluru Utsav to Display Deepavali Lamps Grand Flea Market

ಬೆಂಗಳೂರು ಉತ್ಸವ

ಸ್ಥಳ: ಕರ್ನಾಟಕ ಚಿತ್ರಕಲಾ ಪರಿಷತ್

(ಶಿವಾನಂದ ವೃತ್ತದ ಬಳಿ)

ದಿನಾಂಕ: ಅಕ್ಟೋಬರ್‌ 11 ರಿಂದ ಅಕ್ಟೋಬರ್‌ 20, 2019 ವರೆಗೆ

ಸಮಯ: ಬೆಳಿಗ್ಗೆ 11 ಗಂಟೆಯಿಂದ ಸಂಜೆ 7 ರ ವರೆಗೆ

ಈ ಮೇಳದಲ್ಲಿ ದೇಶದ ವಿವಿಧ ಭಾಗಗಳ ಕರಕುಶಲಕಾರರು ತಯಾರಿಸಿದ ತರಹೇವಾರಿ ಕರಕುಶಲ ವಸ್ತುಗಳು, ಆಟಿಕೆಗಳು, ಉಡುಪುಗಳು ಸೇರಿದಂತೆ ರಾಜಧಾನಿ ಬೆಂಗಳೂರಿನ ಜನತೆಗೆ ಮುದ ನೀಡುವಂತಹ ಉತ್ಪನ್ನಗಳು ಒಂದೇ ಸೂರಿನಡಿ ದೊರೆಯುತ್ತವೆ.

ಮನೆಯನ್ನು ಅಲಂಕಾರ ಮಾಡುವ ಉತ್ಪನ್ನಗಳು, ಹ್ಯಾಂಡ್‍ಲೂಂಗಳು, ಕರಕುಶಲ ವಸ್ತುಗಳು, ಬಟ್ಟೆ, ಮರದ ಆಟಿಕೆಗಳು, ಹೆಂಗಳೆಯರ ಆಕರ್ಷಣೆಗೆಂದು ಆಭರಣಗಳು, ಬೆಡ್ ಲೈನೆನ್, ಕಲಾಕೃತಿಗಳು, ಪೀಠೋಪಕರಣಗಳು, ಮ್ಯಾಟ್‍ಗಳು, ಪಿಂಗಾಣಿ ವಸ್ತುಗಳು ಸೇರಿದಂತೆ ನೂರಾರು ಬಗೆಯ ಉತ್ಪನ್ನಗಳು ಈ ಪ್ರದರ್ಶನದಲ್ಲಿರಲಿವೆ.

English summary
Bangalore Utsav – Deepavali shopping carnival is being organised by Grand Flea Market from October 11 to October 20th at Karnataka Chitrakala Parishath on Kumara Krupa Road from 11 am to 7 pm.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X