ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನೂರು ವರ್ಷಗಳನ್ನು ಪೂರೈಸಿದ ಬೆಂಗಳೂರು ಯುವಿಸಿಇ

|
Google Oneindia Kannada News

ಬೆಂಗಳೂರು,ಜನವರಿ 25: ನಗರದ ಕೆ.ಆರ್ ವೃತ್ತದಲ್ಲಿರುವ ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು(ಯುವಿಸಿಇ)100 ವರ್ಷಗಳನ್ನು ಪೂರೈಸಿದೆ.
ಈ ಹಿನ್ನೆಲೆಯಲ್ಲಿ ಕಾಲೇಜಿನಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗುತ್ತಿದೆ.

ಕಟ್ಟಡಕ್ಕೆ ಹೊಸದಾಗಿ ಬಣ್ಣ ಬಳಿದು ಮೆರುಗು ನೀಡಲಾಗಿದೆ. ನೂರಕ್ಕೂ ಹೆಚ್ಚು ತರಗತಿ ಕೊಠಡಿ, ಪ್ರಯೋಗಾಲಯ ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ..ಬಯಲು ರಂಗ ಮಂದಿರ, ಕ್ಯಾಂಟೀನ್‌ಗಾಗಿ ಪ್ರತ್ಯೇಕ ಕಟ್ಟಡ ನಿರ್ಮಿಸಲಾಗುತ್ತಿದೆ.

ಕೇಂದ್ರ ಬಜೆಟ್ 2021:ಬೆಂಗಳೂರಿನ ನಿರೀಕ್ಷೆಗಳೇನು? ಕೇಂದ್ರ ಬಜೆಟ್ 2021:ಬೆಂಗಳೂರಿನ ನಿರೀಕ್ಷೆಗಳೇನು?

ಕಾಲೇಜಿನ ಆವರಣದಲ್ಲಿಎರಡು ಮಹಡಿಯುಳ್ಳ ಕ್ಯಾಂಟೀನ್‌ ನಿರ್ಮಾಣ ಮಾಡಲಾಗುತ್ತಿದೆ. ಶೇ. 60 ರಷ್ಟು ಕಾಮಗಾರಿ ಪೂರ್ಣಗೊಂಡಿದ್ದು, ಕೆಲವೇ ತಿಂಗಳಲ್ಲಿಕಾರ್ಯನಿರ್ವಹಿಸಲಿದೆ.

Bengaluru: UVCE Completed 100 Years, Get Hitech Touch

ಮೆಕ್ಯಾನಿಕಲ್‌ ಎಂಜಿನಿಯರಿಂಗ್‌ ವಿಭಾಗದಲ್ಲಿಬಹುತೇಕ ಕಾಮಗಾರಿ ಮುಗಿದಿದೆ. ಈ ವಿಭಾಗವನ್ನು ಮತ್ತಷ್ಟು ವಿಸ್ತರಿಸಲು ಆಲೋಚಿಸಲಾಗಿದೆ.

ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಏಳು ಮಹಡಿ ಕಟ್ಟಡ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ. ಇದಕ್ಕೆ ಸರ್ಕಾರದ ಒಪ್ಪಿಗೆಗಾಗಿ ಕಾಯಲಾಗುತ್ತಿದೆ.

1917ರಲ್ಲಿ ಪ್ರಾರಂಭವಾದ ಯುವಿಸಿಇ 2021ಕ್ಕೆ 103 ವರ್ಷಗಳನ್ನು ಪೂರೈಸಿದೆ. ಸುಮಾರು 12.28 ಎಕರೆ ಜಾಗದಲ್ಲಿ ಹರಡಿಕೊಂಡಿದೆ. ಹಳೆಯ ಕಟ್ಟಡದ ಮೂಲ ಸ್ವರೂಪಕ್ಕೆ ಧಕ್ಕೆಯಾಗದಂತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ.

ಕಾಲೇಜಿನಲ್ಲಿ ಸುಮಾರು ನೂರಕ್ಕೂ ಅಧಿಕ ತರಗತಿ ಮತ್ತು ಪ್ರಯೋಗಾಲಯದ ಕೊಠಡಿಗಳಿವೆ. ಗಾಳಿ ಬೆಳಕು ಚೆನ್ನಾಗಿ ಬರುವಂತೆ ದೊಡ್ಡ ಕಿಟಕಿ ಅಳವಡಿಸಲಾಗಿದ್ದು, ಹೊರಗಿನ ಶಬ್ದ ನಿಯಂತ್ರಣಕ್ಕೆ ಎರಡು ಬದಿಯಲ್ಲೂಗ್ಲಾಸ್‌ ಡೋರ್‌ ಅಳವಡಿಸಲಾಗಿದೆ.

Recommended Video

ಗಣರಾಜ್ಯೋತ್ಸವಕ್ಕೆ ಸಾರ್ವಜನಿಕರಿಗೆ ಪ್ರವೇಶಕ್ಕೆ ಬ್ರೇಕ್- ರಾಜಧಾನಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ | Oneinda Kannada

ಸುಸಜ್ಜಿತ ಗ್ರಂಥಾಲಯ ಅಣಿಗೊಳಿಸಿದ್ದು, ಸುಮಾರು 1.5 ಲಕ್ಷಕ್ಕೂ ಹೆಚ್ಚು ಪುಸ್ತಕಗಳು ಲಭ್ಯವಿದೆ. ಇ- ಗ್ರಂಥಾಲಯದ ಸೌಲಭ್ಯವನ್ನು ಕಲ್ಪಿಸಲಾಗುತ್ತಿದೆ.

English summary
Bengaluru: University Visveshvaraya College Of Engineering Completed 100 Years, Get Hitech Touch soon.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X