Bengaluru Water: ಬೆಂಗಳೂರು ಕೆಸಿ, ಎಚ್ ಎನ್ ವ್ಯಾಲಿ ನೀರಿನಿಂದ ಅಪಾಯವಿಲ್ಲ: ಸಚಿವ ಭೋಸರಾಜು
ಬೆಂಗಳೂರು: ಕೆಸಿ ವ್ಯಾಲಿ, ಹೆಚ್‌ಎನ್ ವ್ಯಾಲಿ ಮತ್ತು ವೃಷಭಾವತಿ ವ್ಯಾಲಿಗಳ ಸಂಸ್ಕರಿಸಿದ ನೀರು ಅತ್ಯುತ್ತಮ ಗುಣಮಟ್ಟದ್ದಾಗಿದೆ ಎಂಬುದು ಭಾರತೀಯ ವಿಜ್ಞಾನ ಸಂಸ್ಥೆಯ ವಿಜ್ಞಾನಿಗಳ ಸುದೀರ್ಘ ಸಂಶೋಧನೆಗಳಿಂದ ದೃಢಪಟ್ಟಿದೆ. ಹೀಗಾಗಿ ಈ ಬಗ್ಗೆ ಸಾರ್ವಜನಿಕರು ಯಾವುದೇ ರೀತಿಯ ಆತಂಕಪಡುವ ಅಗತ್ಯವಿಲ್ಲ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಭೋಸರಾಜು ಅವರು ತಿಳಿಸಿದ್ದಾರೆ.
ಸಂಸ್ಕರಿಸಿದ ನೀರಿನಿಂದ ಬೆಂಗಳೂರು ಸುತ್ತಮುತ್ತಲಿನ ಬರ ಪೀಡಿತ ಜಿಲ್ಲೆಗಳ ಅಂತರ್ಜಲ ಅಭಿವೃದ್ಧಿಪಡಿಸುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಕೆ.ಸಿ ವ್ಯಾಲಿ, ಹೆಚ್.ಎನ್ ವ್ಯಾಲಿ ಮತ್ತು ವೃಷಭಾವತಿ ವ್ಯಾಲಿ ಯೋಜನೆಗಳನ್ನು ಜಾರಿಗೊಳಿಸಿತ್ತು. ಈ ವ್ಯಾಲಿಗಳ ನೀರಿನ ಗುಣಮಟ್ಟಕ್ಕೆ ಸಂಬಂಧಿಸಿದಂತೆ ನಡೆದ ಸಭೆಯಲ್ಲಿ ಪ್ರಮುಖ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.

ಸಭೆ ಬಳಿಕ ಮಾತನಾಡಿರುವ ಸಚಿವರು, ಕೆಸಿ ವ್ಯಾಲಿ, ಹೆಚ್‌ಎನ್ ವ್ಯಾಲಿ ಮತ್ತು ವೃಷಭಾವತಿ ವ್ಯಾಲಿಗಳ ಸಂಸ್ಕರಿಸಿದ ನೀರಿನಿಂದ ಯಾವುದೇ ಅಪಾಯವಿಲ್ಲ. ಈ ನೀರು ಗುಣಮಟ್ಟದಿಂದ ಕುಡಿದೆ. ಈ ಬಗ್ಗೆ ಭಾರತೀಯ ವಿಜ್ಞಾನ ಸಂಸ್ಥೆಯ (IISc) ವಿಜ್ಞಾನಿಗಳ ಸುದೀರ್ಘ ಸಂಶೋಧನೆ ನಡೆಸಿದ್ದಾರೆ. ಅವರ ಸಂಶೋಧನೆಯಲ್ಲಿ ನೀರಿನ ಗುಣಮಟ್ಟದ ಖಚಿತತೆ ಲಭ್ಯವಾಗಿದೆ. ಆದ್ದರಿಂದ ನಾಗರಿಕರು ನೀರಿನ ಕುರಿತು ಚಿಂತೆ ಮಾಡುವಂತಿಲ್ಲ ಎಂದು ವಿವರಿಸಿದ್ದಾರೆ.
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ
ಈ ಯೋಜನೆಗಳಿಂದ ಕೋಲಾರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಅಂತರ್ಜಲ ಮಟ್ಟ ಗಣನೀಯವಾಗಿ ವೃದ್ಧಿಸಿದೆ. ಹಿಂದೆ 1,500 ರಿಂದ 1,800 ಅಡಿಗಳವರೆಗೂ ಕುಸಿದಿದ್ದ ಅಂತರ್ಜಲ, ಈ ಯೋಜನೆಗಳ ಪರಿಣಾಮದಿಂದ . 200 ರಿಂದ 300 ಅಡಿಗೆ ಲಭ್ಯವಾಗುತ್ತಿದೆ ಎಂದರು.
5 ಹಂತಗಳಲ್ಲಿ ನೀರು ಶುದ್ಧೀಕರಣ
ಸಂಸ್ಕರಿಸಿದ ನೀರಿನಿಂದ ಹೆಚ್ಚಾಗಿರುವ ಅಂತರ್ಜಲವು ಒಟ್ಟಾರೆ ಐದು ಹಂತಗಳಲ್ಲಿ ಶುದ್ಧೀಕರಣ ಆಗುವುದರಿಂದ ನೀರಿನ ಗುಣಮಟ್ಟ ಹೆಚ್ಚಿದೆ. ಬಹಳ ಮುಖ್ಯವಾಗಿ ಈ ನೀರನ್ನು ಬಳಕೆ ಮಾಡುತ್ತಿರುವ ಜನ ಹಾಗೂ ಜಾನುವಾರುಗಳ ಆರೋಗ್ಯದಲ್ಲಿ ಯಾವುದೇ ಏರುಪೇರು ಕಂಡುಬಂದಿಲ್ಲ. ಕೃಷಿ ಬೆಳೆಗಳ ಮೇಲೂ ಪ್ರತೀಕೂಲ ಪರಿಣಾಮ ಬೀರಿಲ್ಲ ಎಂದು ಐಐಎಸ್‌ಸಿ ವರದಿ ದೃಢಪಡಿಸಿದೆ.
ಸಂಸ್ಕರಿತ ತ್ಯಾಜ್ಯ ನೀರಿನಿಂದ ಹೆಚ್ಚಾಗಿರುವ ಅಂತರ್ಜಲ ಬಳಕೆಯಿಂದಾಗಿ ಮಣ್ಣಿನ ಗುಣಮಟ್ಟವೂ ಸುಧಾರಿಸಿದೆ. ಮೆಂತ್ಯ, ಸೌತೆಕಾಯಿ, ಬೀಟ್ರೂಟ್, ಟೊಮೆಟೊ ಸೇರಿದಂತೆ ಇತರೆ ತರಕಾರಿ ಬೆಳೆಗಳನ್ನು ಈ ಭಾಗದ ರೈತರು ಯಶಸ್ವಿಯಾಗಿ ಬೆಳೆಯುತ್ತಿದ್ದಾರೆ. ಇಷ್ಟಾದರೂ, ಮಣ್ಣಿನಲ್ಲಿ ನೈಟ್ರೋಜನ್ ಅಂಶ ಹೆಚ್ಚಿದೆ ಎಂಬ ಆರೋಪಗಳು ಶುದ್ದ ಸುಳ್ಳು ಎಂದು ವಿಜ್ಞಾನಿಗಳು ಸಭೆಯಲ್ಲಿ ಮಾಹಿತಿ ನೀಡಿದರು.
ಐಐಎಸ್‌ಸಿ ವತಿಯಿಂದ 2019 ರಿಂದ ಸತತ ಆರು ವರ್ಷಗಳ ಕಾಲ ನಡೆಸಲಾದ ಸಂಶೋಧನೆಯಲ್ಲಿ, ನೀರಿನಲ್ಲಿ ಹಾಗೂ ಅಂತರ್ಜಲದಲ್ಲಿ ಯಾವುದೇ ಹಾನಿಕಾರಕ ಲೋಹಂಶಗಳು ಪತ್ತೆಯಾಗಿಲ್ಲ. ವಾಸನೆ ಮತ್ತು ಬಣ್ಣವಿಲ್ಲದ ಶುದ್ಧ ನೀರು ಲಭ್ಯವಾಗುತ್ತಿದೆ. ಜಾನುವಾರುಗಳ ಹಾಲು ಉತ್ಪಾದನೆಯೂ ಹೆಚ್ಚಿದೆ. ಈ ಯೋಜನೆಯನ್ನು ಇಡೀ ದೇಶವೇ ಅನುಸರಿಸಬೇಕು ಎಂದು ತಿಳಿಸಿದರು.
ಸಂಶೋಚನೆ ಮುಂದುವರಿಸಲು 𝗜𝗜𝗦𝗰ಗೆ ಸೂಚನೆ
ಮೀನಿನ ಆರೋಗ್ಯ ಹಾಗೂ ಮಾಂಸದ ಗುಣಮಟ್ಟವನ್ನು ಆರು ತಿಂಗಳಿಗೊಮ್ಮೆ ಪರಿಶೀಲಿಸಲು ಹಾಗೂ 𝗜𝗜𝗦𝗰 ಸಂಶೋಧನೆಯನ್ನು ಮುಂದಿನ ಹತ್ತು ವರ್ಷಗಳವರೆಗೆ ಮುಂದುವರಿಸಲು 𝗜𝗜𝗦𝗰 ಅಧ್ಯಯನ ತಂಡಕ್ಕೆ ಸಚಿವರು ಇದೇ ಸಂದರ್ಭದಲ್ಲಿ ಸೂಚಿಸಿದರು.
ಸಂಸ್ಕರಿಸಿದ ನೀರಿನ ಬಗ್ಗೆ ನಡೆಯುತ್ತಿರುವ ಅಪಪ್ರಚಾರವನ್ನು ತಡೆಯಲು ಹಾಗೂ ಕೊಳಚೆ ನೀರು ಕೆರೆಗಳಿಗೆ ಸೇರುವುದನ್ನು ತಪ್ಪಿಸಲು ಸರ್ಕಾರದ ಮಟ್ಟದಲ್ಲಿ ಕಠಿಣ ನಿರ್ಧಾರ ಕೈಗೊಳ್ಳಲಾಗುವುದು. ಸಭೆಯಲ್ಲಿ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್. ಮುನಿಯಪ್ಪ, IISc ಅಸೋಸಿಯೇಟ್ ಪ್ರೊಫೆಸರ್, ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ. ರಾಮ್ ಪ್ರಸಾತ್ ಮನೋಹರ್, ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಇನ್ನಿತರರು ಪಾಲ್ಗೊಂಡಿದ್ದರು.
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications