Bengaluru Vande Bharat Express: ವಂದೇ ಭಾರತ್ ಎಕ್ಸ್ಪ್ರೆಸ್ ಸೇವೆ ಗುಡ್ನ್ಯೂಸ್!
Bengaluru Vande Bharat Express: ಬೆಂಗಳೂರಿನಿಂದ ದಕ್ಷಿಣ ಭಾರತದ ಪ್ರಮುಖ ನಗರಗಳಿಗೆ ಸಂಪರ್ಕ ಕಲ್ಪಿಸುವ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಸಂಬಂಧಿಸಿದಂತೆ ಭರ್ಜರಿ ಗುಡ್ನ್ಯೂಸ್ವೊಂದು ಸಿಕ್ಕಿದೆ. ಕೇಂದ್ರ ಸರ್ಕಾರವು ವಂದೇ ಭಾರತ್ ರೈಲುಗಳನ್ನು ಪರಿಚಯಿಸಿದ್ದು. ಹಲವು ಪ್ರದೇಶಗಳಲ್ಲಿ ಇದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಂಗಳೂರು ಹಾಗೂ ಬೆಂಗಳೂರಿನಿಂದ ಕರ್ನಾಟಕದ ಇನ್ನುಳಿದ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸುವ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ದೇಶದಾದ್ಯಂತ ಕೇಂದ್ರ ಸರ್ಕಾರವು ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚಾರ ಸೇವೆ ಪ್ರಾರಂಭಿಸಿದ್ದು. ಇತ್ತೀಚಿನ ವರ್ಷಗಳಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಬೆಂಗಳೂರು - ಕರ್ನಾಟಕ ಸೇರಿದಂತೆ ದೇಶದಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಇದೇ ನವೆಂಬರ್ 11 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ ಕೆಎಸ್ಆರ್ ಬೆಂಗಳೂರು-ಎರ್ನಾಕುಲಂ-ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ಸೇವೆಗೆ ಕಾರ್ಯಾಚರಣೆಯ ಮೊದಲ ತಿಂಗಳಲ್ಲಿ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಂಗಳೂರು - ಎರ್ನಾಕುಲಂ ಎರಡೂ ಪ್ರದೇಶಗಳಲ್ಲೂ ಬುಕ್ಕಿಂಗ್ ಪ್ರಕ್ರಿಯೆ ಶೇ 100% ದಾಟಿದ್ದು, ಇಲ್ಲಿಯವರೆಗೆ 55,000 ಕ್ಕೂ ಹೆಚ್ಚು ಪ್ರಯಾಣಿಕರು ಈ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಸಿದ್ದಾರೆ ಎಂದು ಹೇಳಲಾಗಿದೆ.
ಈ ರೈಲು ದಕ್ಷಿಣ ಭಾರತದ ಪ್ರಮುಖ ರಾಜ್ಯಗಳಾದ ಕರ್ನಾಟಕ, ಕೇರಳ ಮತ್ತು ತಮಿಳುನಾಡು ರಾಜ್ಯಗಳ ನಗರಗಳನ್ನು ಸಂಪರ್ಕಿಸುವ ಮೊದಲ ಅಂತರರಾಜ್ಯ ಅರೆ ಹೈಸ್ಪೀಡ್ ಪ್ರೀಮಿಯಂ ರೈಲಾಗಿದೆ. ನವೆಂಬರ್ನಲ್ಲಿ, ಬೆಂಗಳೂರು-ಎರ್ನಾಕುಲಂ ಸೇವೆಯು 11,447 ಪ್ರಯಾಣಿಕರು ಪ್ರಯಾಣ ಮಾಡಿದ್ದು, ಸರಾಸರಿ 127% ಬುಕಿಂಗ್ ಆಗಿದೆ.
ಡಿಸೆಂಬರ್ನಲ್ಲಿ, ಇದು 16,129 ಪ್ರಯಾಣಿಕರು ಈ ರೈಲಿನಲ್ಲಿ ಸಂಚಾರ ಮಾಡಿದ್ದಾರೆ. ಸರಾಸರಿ 117% ಬುಕಿಂಗ್ ಆಗಿದೆ ಎಂದು ನೈಋತ್ಯ ರೈಲ್ವೆ (SWR), ಬೆಂಗಳೂರು ವಿಭಾಗದ ಅಂಕಿಅಂಶಗಳು ತಿಳಿಸಿವೆ. ಎರ್ನಾಕುಲಂ-ಬೆಂಗಳೂರು ಸೇವೆಯು ನವೆಂಬರ್ನಲ್ಲಿ 12,786 ಪ್ರಯಾಣಿಕರು ಪ್ರಯಾಣ ಮಾಡಿದ್ದು. ಸರಾಸರಿ 141% ಬುಕಿಂಗ್ ಆಗಿದೆ. ಡಿಸೆಂಬರ್ನಲ್ಲಿ, ಸಂಖ್ಯೆ 14,742 ಕ್ಕೆ ಏರಿದೆ, 106% ಸರಾಸರಿ ಬುಕಿಂಗ್ ಆಗಿದೆ ಎಂದು ವರದಿ ಹೇಳಿದೆ.
ಕ್ರಿಸ್ಮಸ್ ಮತ್ತು ಹೊಸ ವರ್ಷದ ರಜಾದಿನಗಳು ಹಾಗೂ ಶಬರಿಮಲೆ ತೀರ್ಥಯಾತ್ರೆಯಿಂದಾಗಿ ಡಿಸೆಂಬರ್ನಲ್ಲಿ ರೈಲಿನಲ್ಲಿ ಟಿಕೆಟ್ಗಳ ಬೇಡಿಕೆಯಲ್ಲಿ ಹೆಚ್ಚಳವನ್ನು ನೈಋತ್ಯ ರೈಲ್ವೆ ನಿರೀಕ್ಷಿಸಿದೆ. ದೈನಂದಿನ ಪ್ರಯಾಣಿಕರು, ವ್ಯಾಪಾರ ಪ್ರಯಾಣಿಕರು, ವಿದ್ಯಾರ್ಥಿಗಳು ಮತ್ತು ಪ್ರವಾಸಿಗರಿಗೆ ಈ ರೈಲು ಜನಪ್ರಿಯ ಆಯ್ಕೆಯಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್












Click it and Unblock the Notifications