ಬೆಂಗಳೂರು ಗಲಭೆ; 151 ಆರೋಪಿಗಳು ನ್ಯಾಯಾಲಯಕ್ಕೆ ಹಾಜರು

ಬೆಂಗಳೂರು, ಆಗಸ್ಟ್ 13 : ಬೆಂಗಳೂರು ನಗರದ ಕಾವಲ್ ಭೈರಸಂದ್ರ, ಡಿ. ಜೆ. ಹಳ್ಳಿ, ಕೆ. ಜೆ. ಹಳ್ಳಿಯಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಮಂಗಳವಾರ ರಾತ್ರಿ ನಡೆದ ಗಲಭೆಗೆ ಸಂಬಂಧಿಸಿದಂತೆ 151 ಆರೋಪಿಗಳನ್ನು ಬಂಧಿಸಲಾಗಿದೆ.

ಗುರುವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲಾ ಆರೋಪಿಗಳನ್ನು ಮೆಯೋಹಾಲ್ ಕೋರ್ಟ್ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಎಲ್ಲಾ ಆರೋಪಿಗಳಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸುವಂತೆ ನ್ಯಾಯಾಲಯ ಆದೇಶ ನೀಡಿತು.

Bengaluru Violence 151 Accused Produced To Court

ಆರೋಪಿಗಳ ಕೋವಿಡ್ ಪರೀಕ್ಷೆ ವರದಿ ಬರುವ ತನಕ ಎಲ್ಲರನ್ನೂ ಪೊಲೀಸರ ವಶಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶ ಹೊರಡಿಸಿತು. ಆರೋಪಿಗಳ ಕೋವಿಡ್ ವರದಿ ಬಂದ ಬಳಿಕ ಎಲ್ಲಾ ಆರೋಪಿಗಳನ್ನು ಪುನಃ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ.

ಮಂಗಳವಾರ ರಾತ್ರಿ ಬೆಂಗಳೂರು ನಗರದಲ್ಲಿ ನಡೆದ ಗಲಭೆಗಳ ಕುರಿತು ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರಿಂದ ಸಮಗ್ರ ತನಿಖೆ ನಡೆಸಲು ಆದೇಶಿಸಲಾಗಿದೆ. ಗಲಭೆ ನಿಯಂತ್ರಿಸಲು ಪೊಲೀಸರು ಗುಂಡು ಹಾರಿಸಿದಾಗ ಮೂವರು ಮೃತಪಟ್ಟಿದ್ದರು.

ಪುಲಿಕೇಶಿ ನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸೋದರಳಿಯ ನವೀನ್ ಒಂದು ಸಮುದಾಯದ ವಿರುದ್ಧ ಫೇಸ್‌ ಬುಕ್ ಪೋಸ್ಟ್ ಹಾಕಿದ್ದಾರೆ ಎಂದು ಆರೋಪಿಸಿ ಆರಂಭವಾದ ಗಲಭೆ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಶಾಸಕರ ಮನೆಗೆ ಬೆಂಕಿ ಹಚ್ಚಲಾಗಿತ್ತು.

ಬಳಿಕ ಡಿ. ಜೆ. ಹಳ್ಳಿ, ಕೆ. ಜೆ.ಹಳ್ಳಿ ಪೊಲೀಸ್ ಠಾಣೆಗಳ ಮೇಲೆ ಕಲ್ಲು ತೂರಾಟ ನಡೆದಿತ್ತು. ಕಂಡ ಕಂಡ ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+