ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು ಗಲಭೆ; 206 ಆರೋಪಿಗಳ ಬಂಧನ

|
Google Oneindia Kannada News

ಬೆಂಗಳೂರು, ಆಗಸ್ಟ್ 16 : ಬೆಂಗಳೂರು ನಗರದಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 206 ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳವಾರ ರಾತ್ರಿ ಗಲಭೆ ನಡೆದ ಕಾವಲ್ ಭೈರಸಂದ್ರ, ಡಿ. ಜೆ. ಹಳ್ಳಿ, ಕೆ. ಜೆ. ಹಳ್ಳಿಯಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ.

ಪುಲಿಕೇಶಿ ನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸೋದರಳಿಯ ನವೀನ್ ಒಂದು ಸಮುದಾಯದ ವಿರುದ್ಧ ಫೇಸ್‌ ಬುಕ್ ಪೋಸ್ಟ್ ಹಾಕಿದ್ದಾರೆ ಎಂದು ಆರೋಪಿಸಿ ಆರಂಭವಾದ ಗಲಭೆ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಅಪಾರ ಆಸ್ತಿ-ಪಾಸ್ತಿ ನಷ್ಟ ಉಂಟಾಗಿತ್ತು.

ಬೆಂಗಳೂರು ಗಲಭೆ ತನಿಖೆಗೆ ಸತ್ಯ ಶೋಧನಾ ಸಮಿತಿಬೆಂಗಳೂರು ಗಲಭೆ ತನಿಖೆಗೆ ಸತ್ಯ ಶೋಧನಾ ಸಮಿತಿ

ಗಲಭೆಗೆ ಸಂಬಂಧಿಸಿದಂತೆ ಇದುವರೆಗೂ 206 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 80 ಆರೋಪಿಗಳಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಅವರನ್ನು ಬಳ್ಳಾರಿ ಜೈಲಿಗೆ ಕಳಿಸಲಾಗಿದೆ. ಉಳಿದವರ ಕೋವಿಡ್ ಪರೀಕ್ಷೆ ವರದಿಗಾಗಿ ಕಾಯಲಾಗುತ್ತಿದೆ.

ಬೆಂಗಳೂರು ಗಲಭೆ; 151 ಆರೋಪಿಗಳು ನ್ಯಾಯಾಲಯಕ್ಕೆ ಹಾಜರು ಬೆಂಗಳೂರು ಗಲಭೆ; 151 ಆರೋಪಿಗಳು ನ್ಯಾಯಾಲಯಕ್ಕೆ ಹಾಜರು

DJ Halli violence

ಗಲಭೆಗೆ ಪ್ರಮುಖ ಕಾರಣವಾದ ಆರೋಪಿ ನವೀನ್ ಪೊಲೀಸರ ವಶದಲ್ಲಿಯೇ ಇದ್ದಾನೆ. ತನ್ನ ಫೋನ್ ಕಳೆದು ಹೋಗಿರಲಿಲ್ಲ. ಫೇಸ್‌ ಬುಕ್ ಪೋಸ್ಟ್‌ ಅನ್ನು ನಾನೇ ಹಾಕಿದ್ದೆ ಎಂದು ಆತ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ.

ಬೆಂಗಳೂರು ಗಲಭೆ: ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಬೆಂಗಳೂರು ಗಲಭೆ: ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶ

ವಾಟ್ಸಪ್ ಗ್ರೂಪ್ : ಗಲಭೆ ನಡೆಸಲು ಆರೋಪಿಗಳು ವಾಟ್ಸಪ್ ಗ್ರೂಪ್ ರಚಿಸಿಕೊಂಡಿದ್ದರು ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿದೆ. ಆದ್ದರಿಂದ, ಕೆಲವು ಆರೋಪಿಗಳ ಮೊಬೈಲ್‌ ಫೋನ್‌ಗಳನ್ನು ವಶಕ್ಕೆ ಪಡೆದುಕೊಂಡು ವಾಟ್ಸಪ್ ಗ್ರೂಪ್‌ಗಳ ಚಾಟ್ ಹಿಸ್ಟರಿ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

ಮಂಗಳವಾರ ರಾತ್ರಿ ಡಿ. ಜೆ. ಹಳ್ಳಿ ಮತ್ತು ಕೆ. ಜಿ. ಹಳ್ಳಿ ಪೊಲೀಸ್ ಠಾಣೆಗಳ ಮೇಲೆ ಕಲ್ಲು ತೂರಾಟ ನಡೆದಿತ್ತು. ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು. ಗಲಭೆ ನಿಯಂತ್ರಿಸಲು ಪೊಲೀಸರು ಗುಂಡು ಹಾರಿಸಿದಾಗ ಮೂವರು ಮೃತಪಟ್ಟಿದ್ದರು.

English summary
206 accused arrested so far in connection with the violence in DJ Halli and KG Halli and Kaval Byrasandra. 80 of them sent to Ballari jail after COVID test.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X