ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು ಹಿಂಸಾಚಾರ: 145 ಬಂಧಿತರಲ್ಲಿ ಮೂವರಿಗೆ ಕೊರೊನಾ ಪಾಸಿಟಿವ್!

|
Google Oneindia Kannada News

ಬೆಂಗಳೂರು, ಆಗಸ್ಟ್.14: ಬೆಂಗಳೂರಿನ ಕಾಡುಗೊಂಡನಹಳ್ಳಿ (ಕೆ.ಜಿ.ಹಳ್ಳಿ) ಮತ್ತು ದೇವರ ಜೀವನಹಳ್ಳಿ(ಡಿ.ಜೆ.ಹಳ್ಳಿ)ಯಲ್ಲಿ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಆರೋಪಿಗಳಲ್ಲಿ ಮೂವರಿಗೆ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ.

ಕೆ.ಜಿ ಹಳ್ಳಿ ಮತ್ತು ಡಿ.ಜೆ ಹಳ್ಳಿ ದಾಂಧಲೆಗೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೂ 145ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಿದ್ದರು. ಎಲ್ಲ ಬಂಧಿತ ಆರೋಪಿಗಳ ರಕ್ತ ಮತ್ತು ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಲಾಗಿತ್ತು.

ಬೆಂಗಳೂರು ಹಿಂಸಾಚಾರ: ಕೆಜಿ ಹಳ್ಳಿ ಕಾರ್ಪೋರೇಟರ್ ಪತಿ ಕಲೀಂ ಪಾಷಾ ಬಂಧನಬೆಂಗಳೂರು ಹಿಂಸಾಚಾರ: ಕೆಜಿ ಹಳ್ಳಿ ಕಾರ್ಪೋರೇಟರ್ ಪತಿ ಕಲೀಂ ಪಾಷಾ ಬಂಧನ

ಬಂಧಿತ ಆರೋಪಿಗಳನ್ನು ಕೊವಿಡ್-19 ಸೋಂಕು ತಪಾಸಣೆಗೆ ಒಳಪಪಡಿಸಲಾಗಿದ್ದು, ಈ ವೇಳೆ ಮೂವರಿಗೆ ಕೊರೊನಾವೈರಸ್ ಸೋಂಕು ತಗಲಿರುವುದು ಪತ್ತೆಯಾಗಿದೆ. ಈ ಹಿನ್ನೆಲೆ ಮೂವರು ಸೋಂಕಿತರನ್ನು ಕೊವಿಡ್ ಕೇರ್ ಸೆಂಟರ್ ಗೆ ಶಿಫ್ಟ್ ಮಾಡಲಾಗಿದೆ.

Bengaluru Violence: 3 Accused Tested Coronavirus Positive

ಆಗಸ್ಟ್.11ರಂದು ನಡೆದ ದಾಂಧಲೆ ಸ್ವರೂಪ:

ಬೆಂಗಳೂರಿನ ಕಾವಲ್ ಬೈರಸಂದ್ರದಲ್ಲಿ ಇರುವ ಪುಲಕೇಶಿನಗರ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಎದುರು ಮೊದಲು ಗಲಾಟೆ ಶುರುವಾಯಿತು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಮುಂದಾಗುತ್ತಿದ್ದಂತೆ ಸಾವಿರಾರು ಸಂಖ್ಯೆಯಲ್ಲಿ ಉದ್ರಿಕ್ತರ ಗುಂಪು ಸೇರಿತು. ಪೊಲೀಸರ ಮೇಲೆಯೇ ಕಲ್ಲು ಮತ್ತು ಬಾಟಲಿ ತೂರಾಟ ನಡೆಸಿದರು. ಕೆ.ಜಿ. ಹಳ್ಳಿ ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸರ ವಾಹನಕ್ಕೆ ಬೆಂಕಿ ಹಚ್ಚಿದರು, ಡಿ.ಜಿ.ಹಳ್ಳಿಯಲ್ಲೂ ಉದ್ರಿಕ್ತರ ಆಕ್ರೋಶಕ್ಕೆ ಬೀದಿ ಬದಿಯಲ್ಲಿ ನಿಲ್ಲಿಸಿದ್ದ ವಾಹನಗಳೆಲ್ಲ ಹೊತ್ತಿ ಉರಿದವು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಅಶ್ರುವಾಯು ಸಿಡಿಸಿದರು, ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಈ ಹಿನ್ನೆಲೆ ಗಲಾಟೆಗೆ ಸಂಬಂಧಿಸಿದ ಸಿಸಿಕ್ಯಾಮರಾ ದೃಶ್ಯಾವಳಿಗಳನ್ನು ಸಂಗ್ರಹಿಸಿದ್ದ ಪೊಲೀಸರು ಒಟ್ಟು 145ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಿದ್ದು ವಿಚಾರಣೆಗೆ ಒಳಪಡಿಸಿದ್ದಾರೆ.

English summary
Bengaluru Violence: 3 Accused Tested Coronavirus Positive.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X