ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು ಗಲಭೆ; 309 ಜನರ ಬಂಧನ, 52 ಎಫ್‌ಐಆರ್

|
Google Oneindia Kannada News

ಬೆಂಗಳೂರು, ಆಗಸ್ಟ್ 17 : ಬೆಂಗಳೂರು ನಗರದಲ್ಲಿ ಮಂಗಳವಾರ ರಾತ್ರಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 309 ಜನರನ್ನು ಇದುವರೆಗೂ ಬಂಧಿಸಲಾಗಿದೆ. 52 ಎಫ್‌ಐಆರ್ ದಾಖಲು ಮಾಡಲಾಗಿದೆ.

Recommended Video

TATA Group ಹೊಸ ವರ್ಷದ ವೇಳೆಗೆ Air India ನಿಯಂತ್ರಣವನ್ನು ತೆಗೆದುಕೊಳ್ಳಬಹುದು.! | Oneindia Kannada

ಗಲಭೆ ನಡೆದ ಕಾವಲ್ ಭೈರಸಂದ್ರ, ಡಿ. ಜೆ. ಹಳ್ಳಿ, ಕೆ. ಜಿ. ಹಳ್ಳಿ ಪ್ರದೇಶಗಳಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಬೆಂಗಳೂರು ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಆಗಸ್ಟ್ 18ರ ತನಕ ನಿಷೇಧಾಜ್ಞೆಯನ್ನು ಮುಂದುವರೆಸಿ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು ಗಲಭೆ FIR: ಬೆಚ್ಚಿಬಿಳಿಸುತ್ತಿದೆ ಲೂಟಿ, ಸಂಚು!ಬೆಂಗಳೂರು ಗಲಭೆ FIR: ಬೆಚ್ಚಿಬಿಳಿಸುತ್ತಿದೆ ಲೂಟಿ, ಸಂಚು!

ಆಗಸ್ಟ್ 11ರಂದು ನಡೆದ ಗಲಭೆಗೆ ಸಂಬಂಧಿಸಿದಂತೆ ಭಾನುವಾರ ರಾತ್ರಿ ತನಕ 309 ಆರೋಪಿಗಳನ್ನು ಬಂಧಿಸಲಾಗಿದೆ. ಸಿಸಿಬಿ ಮತ್ತು ಬೆಂಗಳೂರು ಪೊಲೀಸರು ಜಂಟಿಯಾಗಿ ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರು ಗಲಭೆ; ಆಗಸ್ಟ್ 18ರ ತನಕ ನಿಷೇಧಾಜ್ಞೆ ವಿಸ್ತರಣೆ ಬೆಂಗಳೂರು ಗಲಭೆ; ಆಗಸ್ಟ್ 18ರ ತನಕ ನಿಷೇಧಾಜ್ಞೆ ವಿಸ್ತರಣೆ

Bengaluru Violence Case 309 Arrested Till Sunday

ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ 5 ಎಫ್‌ಐಆರ್ ದಾಖಲು ಮಾಡಲಾಗಿದೆ. ಇದುವರೆಗೂ ಒಟ್ಟು 52 ಎಫ್‌ಐಆರ್ ದಾಖಲಾಗಿದ್ದು, 38 ಎಫ್‌ಐಆರ್ ಡಿ. ಜೆ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಯೇ ದಾಖಲಾಗಿದೆ.

ಬೆಂಗಳೂರಲ್ಲಿ ಗಲಭೆ; ಸ್ಥಳಕ್ಕೆ ಗೃಹ ಸಚಿವರ ಭೇಟಿ ಬೆಂಗಳೂರಲ್ಲಿ ಗಲಭೆ; ಸ್ಥಳಕ್ಕೆ ಗೃಹ ಸಚಿವರ ಭೇಟಿ

ಪ್ರಕರಣದ ತನಿಖೆ ಮುಂದುವರೆದಂತೆ ಬಂಧಿತರ ಸಂಖ್ಯೆ ಹೆಚ್ಚಾಗಲಿದೆ ಎಂದು ಪೊಲೀಸರು ಹೇಳಿದ್ದಾರೆ. ಪ್ರಾಥಮಿಕ ಮಾಹಿತಿ ಅನ್ವಯ ಬಂಧನ ಮಾಡಲಾಗುತ್ತಿದೆ. ಅವರ ಪಾತ್ರ ಇಲ್ಲ ಎಂದು ತಿಳಿದರೆ ಬಿಡುಗಡೆ ಮಾಡಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

6 ಸೈಬರ್ ಕ್ರೈಂ ಪೊಲೀಸ್ ತಂಡ ಮತ್ತು ವಿಧಿ ವಿಜ್ಞಾನ ಪ್ರಯೋಗಾಲಯದ ತಂಡ ಸಹ ತನಿಖೆಗೆ ಕೈ ಜೋಡಿಸಿದೆ. ಮೊಬೈಲ್ ಕರೆಗಳ ಮಾಹಿತಿ, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. ಡಿಜಿಟಲ್ ಸಾಕ್ಷಿಗಳ ಆಧಾರದ ಮೇಲೆಯೂ ಕೆಲವರನ್ನು ಬಂಧಿಸಲಾಗಿದೆ.

ಬೆಂಗಳೂರಿನ ಪುಲಿಕೇಶಿ ನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸೋದರಳಿಯ ನವೀನ್ ಒಂದು ಸಮುದಾಯದ ವಿರುದ್ಧ ಫೇಸ್‌ ಬುಕ್ ಪೋಸ್ಟ್ ಹಾಕಿದ್ದಾರೆ ಎಂದು ಆರೋಪಿಸಿ ಆರಂಭವಾದ ಗಲಭೆ ತೀವ್ರ ಸ್ವರೂಪ ಪಡೆದುಕೊಂಡಿತ್ತು.

English summary
309 people were arrested and 52 FIR registered until Sunday in connection with the Bengaluru violence case. CCB and Bengaluru police probing the case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X