ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನಲ್ಲಿ ಹಿಂಸಾಚಾರ: ನಗರದಾದ್ಯಂತ 24 ಗಂಟೆ ನಿಷೇಧಾಜ್ಞೆ ಜಾರಿ

|
Google Oneindia Kannada News

ಬೆಂಗಳೂರು, ಆಗಸ್ಟ್.12: ಬೆಂಗಳೂರಿನ ಕಾಡುಗೊಂಡನಹಳ್ಳಿ (ಕೆ.ಜಿ.ಹಳ್ಳಿ) ಮತ್ತು ದೇವರ ಜೀವನಹಳ್ಳಿ(ಡಿ.ಜೆ.ಹಳ್ಳಿ)ಯಲ್ಲಿ ನಡೆದ ದಾಂಧಲೆ ಬೆನ್ನಲ್ಲೇ ನಗರದಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಮಹಾನಿರ್ದೇಶಕರಾದ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

Recommended Video

KG halli ,DG Halli ಪ್ರಕರಣದ ಬಗ್ಗೆ U T Khadar ಹೇಳಿದ್ದೇನು | Oneindia Kannada

ಆಗಸ್ಟ್.13ರ ಗುರುವಾರ ಬೆಳಗ್ಗೆ 6 ಗಂಟೆವರೆಗೂ ಬೆಂಗಳೂರಿನಾದ್ಯಂತ ಸಿಆರ್ ಪಿಸಿ 144 ಅಡಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ. ಸಾರ್ವಜನಿಕರ ಸಾಂವಿಧಾನಿಕ ಹಕ್ಕುಗಳಿಗೆ ಯಾವುದೇ ತೊಂದರೆ ಆಗುವುದಿಲ್ಲ. ಆದರೆ ಕಾನೂನಿಗೆ ಧಕ್ಕೆ ಉಂಟಾಗುವಂತ ಕೃತ್ಯಗಳನ್ನು ಎಸಗುವವರ ವಿರುಗ್ಧ ಶಿಸ್ತುಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಆದೇಶಿಸಲಾಗಿದೆ.

Bengaluru Violence: City Police Commissioner Kamal Pant Imposes Section 144 In Entire City

ಬೆಂಗಳೂರು ಗಲಭೆ ಹಿಂದಿನ ಕಾರಣ ಇದು?ಬೆಂಗಳೂರು ಗಲಭೆ ಹಿಂದಿನ ಕಾರಣ ಇದು?

ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಆಗಸ್ಟ್.12ರ ಬೆಳಗ್ಗೆ 6 ಗಂಟೆಯಿಂದ ಆಗಸ್ಟ್.13ರ ಬೆಳಗ್ಗೆ 6 ಗಂಟೆವರೆಗೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಕೆಳಗೆ ಪಟ್ಟಿ ಮಾಡಿರುವ ಯಾವುದೇ ಚಟುವಟಿಕೆಗಳನ್ನು ನಡೆಸುವಂತಿಲ್ಲ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಬೆಂಗಳೂರಿನಲ್ಲಿ ಈ ಚಟುವಟಿಕೆಗಳಿಗೆ ನಿಷೇಧ:

1. ಯಾವುದೇ ವ್ಯಕ್ತಿಗಳು ಸಾರ್ವಜನಿಕರಿಗೆ ಧಕ್ಕೆ ಉಂಟಾಗುವಂತೆ ಯಾವುದೇ ಕೃತ್ಯದಲ್ಲಿ ತೊಡಗುವಂತಿಲ್ಲ

2. ಎರಡಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ, ಅನಗತ್ಯವಾಗಿ ಸಂಚರಿಸುವಂತಿಲ್ಲ

3. ಮೆರವಣಿಗೆ ಮತ್ತು ಸಭೆಗಳನ್ನು ನಡೆಸುವುದನ್ನು ನಿರ್ಬಂಧಿಸಲಾಗಿದೆ

4. ಶಸ್ತ್ರಗಳನ್ನು, ದೊಣ್ಣೆಗಳನ್ನು, ಕತ್ತಿಗಳು, ಈಟಿಗಳು, ಗದೆಗಳು, ಕಲ್ಲು, ಇಟ್ಟಿಗೆ, ಚಾಕು ಇನ್ನೂ ಮುಂತಾದ ಮಾರಕಾಸ್ತ್ರಗಳನ್ನು ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ

5. ಯಾವುದೇ ಸ್ಫೋಟಕ ವಸ್ತುಗಳನ್ನು ಸಿಡಿಸುವುದು, ಕಲ್ಲುಗಳನ್ನು ಕ್ಷಿಪಣಿಗಳನ್ನು ಎಸೆಯುವ ಸಾಧನಗಳು ಅಥವಾ ಉಪಕರಣಗಳ ಒಯ್ಯುವಿಕೆಯನ್ನು ಮತ್ತು ಶೇಖರಿಸುವುದನ್ನು ನಿಷೇಧಿಸಲಾಗಿದೆ

6. ವ್ಯಕ್ತಿಗಳ ಅಥವಾ ಅವರ ಶವಗಳ ಪ್ರತಿಕೃತಿಗಳ ಪ್ರದರ್ಶನ ಮಾಡುವುದನ್ನು, ಪ್ರಚೋದಿಸಬಹುದಾದ ಬಹಿರಂಗ ಘೋಷಣೆಗಳನ್ನು ಕೂಗುವುದು. ಸಂಜ್ಞೆ ಮಾಡುವುದು, ಹಾಡುವುದು, ಸಂಗೀತ ನುಡಿಸುವುದು, ಚಿತ್ರಗಳನ್ನು ಸಂಕೇತಗಳನ್ನು ಭಿತ್ತಿಪತ್ರ ಅಥವಾ ಪದಾರ್ಥಗಳನ್ನು ಪ್ರದರ್ಶಿಸುವುದನ್ನು ನಿಷೇಧಿಸಲಾಗಿದೆ

English summary
Bengaluru Violence: City Police Commissioner Kamal Pant Imposes Section 144 In Entire City.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X