"1600 ಸಮಾಜಘಾತಕರ ವಿರುದ್ಧ 175 ಕ್ರಿಮಿನಲ್ ಕೇಸ್ ರದ್ದು"!
ಬೆಂಗಳೂರು, ಆಗಸ್ಟ್.17: ಬೆಂಗಳೂರಿನ ಕಾಡುಗೊಂಡನಹಳ್ಳಿ (ಕೆ.ಜಿ.ಹಳ್ಳಿ) ಮತ್ತು ದೇವರಜೀವನಹಳ್ಳಿ(ಡಿ.ಜೆ.ಹಳ್ಳಿ)ಯಲ್ಲಿ ನಡೆದ ದಾಂಧಲೆ ಬೆನ್ನಲ್ಲೇ ರಾಜಕೀಯ ಜಟಾಪಟಿ ಜೋರಾಗಿದೆ. ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ಪರಸ್ಪರ ಆರೋಪ ಪ್ರತ್ಯಾರೋಪದಲ್ಲಿ ತೊಡಗಿದ್ದಾರೆ.
Recommended Video
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟ್ವಿಟರ್ ನಲ್ಲಿ ಕಿಡಿ ಕಾರಿದ್ದಾರೆ. "ನೀವು ಅಂದು SDPI, KFD ಮತ್ತು PFI ಸಂಘಟನೆಗಳಿಗೆ ಸೇರಿದ 1600 ಸಮಾಜಘಾತುಕರ ವಿರುದ್ದ ಇದ್ದ 175 ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದು ಮಾಡಿ, ಅಪರಾಧಿಗಳನ್ನು ಖುಲಾಸೆಗೊಳಿಸಿದಿರಿ. ನೀವು ಬಿಡುಗಡೆಗೊಳಿಸಿದ ಆ ವಿಷ ಬೀಜಗಳೇ ಇಂದು ಕರ್ನಾಟಕದಲ್ಲಿ ಹೆಮ್ಮರವಾಗಿ ಬೆಳೆದು ಕಂಡ ಕಂಡಲ್ಲಿ ಬೆಂಕಿ ಇಟ್ಟು ಅಶಾಂತಿಗೆ ಕಾರಣರಾಗಿದ್ದಾರೆ" ಎಂದು ಆರೋಪಿಸಿದ್ದಾರೆ.
ಇದರ ಜೊತೆಗೆ ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಅಂತಹ ವಿಷಬೀಜಗಳನ್ನು ಸಮಾಜದಿಂದ ನಿರ್ಮೂಲನೆ ಮಾಡಲು, ಆ ಗಲಭೆಗಳಿಗೆ ಕಾರಣರಾದವರಿಂದಲೇ ನಷ್ಟ ಭರ್ತಿ ಮಾಡುವ ದಿಟ್ಟ ಕ್ರಮ ಕೈಗೊಂಡಿದ್ದಾರೆ. ಆ ಮೂಲಕ ಸಮಾಜಘಾತುಕರ ಚಟುವಟಿಕೆಗಳಿಗೆ ಕಡಿವಾಣ ಬೀಳಲಿದೆ" ಎಂದು ಟ್ವೀಟ್ ಮಾಡಿದ್ದಾರೆ.

ಎಸ್ ಡಿಪಿಐ ನಿಷೇಧದ ಬಗ್ಗೆ ಚರ್ಚೆ:
ಬೆಂಗಳೂರಿನ ಕಾಡುಗೊಂಡನಹಳ್ಳಿ (ಕೆ.ಜಿ.ಹಳ್ಳಿ) ಮತ್ತು ದೇವರಜೀವನಹಳ್ಳಿ(ಡಿ.ಜೆ.ಹಳ್ಳಿ)ಯಲ್ಲಿ ನಡೆದ ದಾಂಧಲೆ ಹಿಂದೆ ಎಸ್ ಡಿಪಿಐ ಸಂಘಟನೆಯ ಕೈವಾಡವಿರುವ ಬಗ್ಗೆ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆ ರಾಜ್ಯದಲ್ಲಿ ಸಂಘಟನೆ ನಿಷೇಧಿಸುವ ಬಗ್ಗೆ ಸರ್ಕಾರವು ಚಿಂತನೆ ನಡೆಸುತ್ತಿದೆ.
ಪುಲಕೇಶಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ನಿವಾಸದ ಮೇಲೆ ನಡೆದ ದಾಳಿ ಪ್ರಕರಣವನ್ನೇ ರಾಜಕೀಯ ದಾಳವಾಗಿ ಬಳಸಿಕೊಳ್ಳುವುದಕ್ಕೆ ರಾಜಕೀಯ ಪಕ್ಷಗಳು ಮುಂದಾಗುತ್ತಿವೆ. ಎರಡೂ ಪಕ್ಷದ ನಾಯಕರು ಪರಸ್ಪರ ರಾಜಕೀಯ ಲಾಭ ಪಡೆಯುವ ಉದ್ದೇಶದಿಂದ ವಾಗ್ವಾದಕ್ಕೆ ಇಳಿದಿದ್ದಾರೆ ಎಂದ ಮಾತುಗಳು ಕೂಡ ಕೇಳಿ ಬರುತ್ತಿವೆ.












Click it and Unblock the Notifications