Bengaluru Voter: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಮರ್ಪಕವಾಗಿ ನಡೆಸಲು ಮಹೇಶ್ವರ್ ರಾವ್ ಸೂಚನೆ

Bengaluru Voter: ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯನ್ನು ಸಮರ್ಪಕವಾಗಿ ನಡೆಸಲು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ಸಂಬಂಧ ಮೇ29ರ ಶುಕ್ರವಾರ ನಡೆದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಗೆ ಒಳಪಡುವ ಕೇಂದ್ರ, ಉತ್ತರ, ದಕ್ಷಿಣ ಹಾಗೂ ಬೆಂಗಳೂರು ನಗರ ಜಿಲ್ಲೆಗಳಲ್ಲಿ ಎಸ್.ಐ.ಆರ್ ಕುರಿತಂತೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಸಮರ್ಪಕವಾಗಿ ಮಾಡಿಕೊಂಡು ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಮ್ಮ ವ್ಯಾಪ್ತಿಯಲ್ಲಿ ಬೂತ್ ಮಟ್ಟದ ಅಧಿಕಾರಿಗಳ ಕೊರತೆಯಿದ್ದರೆ ಕೂಡಲೇ ನಿಯೋಜನೆ ಮಾಡಿಕೊಳ್ಳಬೇಕು. ಈವರೆಗೆ ಕರ್ತವ್ಯಕ್ಕೆ ಹಾಜರಾಗದ ಬಿ.ಎಲ್.ಓ ಗಳಿಗೆ ಕೂಡಲೇ ನೋಟೀಸ್ ಜಾರಿ ಮಾಡಬೇಕು. ನೋಟೀಸ್‌ಗೆ ಪ್ರತಿಕ್ರಿಯೆ ನೀಡದ ಬಿ.ಎಲ್.ಓಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಅಲ್ಲದೆ ಎಲ್ಲ ಬಿಎಲ್ಓಗಳು ಕರ್ತವ್ಯ ನಿರ್ವಹಣೆಯನ್ನು ಕಡ್ಡಾಯವಾಗಿ ಮಾಡುವ ಸಲುವಾಗಿ ಬಿಎಲ್ಓಗಳಾಗಿ ನಿಯೋಜನೆಗೊಂಡಿರುವಂತಹ ವಿವಿಧ ಇಲಾಖಾ ಮುಖ್ಯಸ್ಥರುಗಳಿಗೆ ಪತ್ರ ಕಳುಹಿಸಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

Bengaluru Voter List

ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಕುರಿತಂತೆ ಪ್ರತಿದಿನ ಪ್ರಗತಿ ಪರಿಶೀಲನಾ ಸಭೆ ನಡೆಸಬೇಕು. ಎಲ್ಲಿಯೂ ಯಾವುದೇ ರೀತಿಯ ಲೋಪದೋಷಗಳಾಗದಂತೆ ಎಸ್.ಐ.ಆರ್ ಪ್ರಕ್ರಿಯೆಯನ್ನು ಸಮರ್ಪಕವಾಗಿ ನಡೆಸಬೇಕೆಂದು ಸೂಚನೆ ನೀಡಿದರು. ಎಲ್ಲ ಬೂತ್ ಮಟ್ಟದ ಅಧಿಕಾರಿಗಳು ಜೂನ್ 16ರ ಒಳಗಾಗಿ ಮತದಾರರ ಪೂರ್ವ ಮ್ಯಾಪಿಂಗ್‌ಗೆ ಸಂಬಂಧಿಸಿದಂತೆ ಶೇ. 100 ರಷ್ಟು ಪ್ರಗತಿ ಸಾಧಿಸಬೇಕೆಂದು ಸೂಚಿಸಿದರು.

GBA Election: ಚುನಾವಣೆ ಕೆಲಸ ಮತ್ತು SIR ಪ್ರಕ್ರಿಯೆ ಚುರುಕುಗೊಳಿಸಿದ ನಗರ ಪಾಲಿಕೆ
GBA Election: ಚುನಾವಣೆ ಕೆಲಸ ಮತ್ತು SIR ಪ್ರಕ್ರಿಯೆ ಚುರುಕುಗೊಳಿಸಿದ ನಗರ ಪಾಲಿಕೆ

ಎಸ್.ಐ.ಆರ್ ಕುರಿತು ಅರಿವು ಮೂಡಿಸಿ

ನಗರದಲ್ಲಿ ಜೂನ್ 20 ರಿಂದ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಪ್ರಾರಂಭವಾಗಲಿದ್ದು, ಈ ಕುರಿತು ನಾಗರಿಕರಲ್ಲಿ ಹೆಚ್ಚಿನ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದು ಮುಖ್ಯ ಆಯುಕ್ತರು ಹೇಳಿದ್ದಾರೆ.

ಎಸ್.ಐ.ಆರ್ ವೇಳಾಪಟ್ಟಿಯ ವಿವರ:

* ಜೂನ್ 20 ರಿಂದ 29 : ಎಸ್.ಐ.ಆರ್‌ಗೆ ಸಿದ್ಧತೆ, ತರಬೇತಿ ಹಾಗೂ ಮುದ್ರಣ

* ಜೂನ್ 30 ರಿಂದ ಜುಲೈ 29 : ಮತದಾರರ ಮನೆಗಳಿಗೆ ಬಿ.ಎಲ್.ಓಗಳ ಭೇಟಿ.

* ಜುಲೈ 29 : ಮತದಾನ ಕೇಂದ್ರಗಳಲ್ಲಿ ಎಸ್.ಐ.ಆರ್ ಪ್ರಕ್ರಿಯೆ.

* ಆಗಸ್ಟ್ 5 : ಎಸ್.ಐ.ಆರ್ ಭಾಗವಾಗಿ ಮತದಾರರ ಕರಡು ಪಟ್ಟಿ ಪ್ರಕಟ.

* ಆಗಸ್ಟ್ 5 ರಿಂದ ಸೆಪ್ಟೆಂಬರ್ 4 : ಆಕ್ಷೇಪಣೆ ಸಲ್ಲಿಸಲು ಅವಕಾಶ.

* ಆಗಸ್ಟ್ 5 ರಿಂದ ಅಕ್ಟೋಬರ್ 3 : ನೋಟೀಸ್ / ವಿಲೇವಾರಿ / ಆಕ್ಷೇಪಣೆ.

* ಅಕ್ಟೋಬರ್ 7: ಅಂತಿಮ ಮತದಾರರ ಪಟ್ಟಿ ಪ್ರಕಟ.

ಕೋರ್ಟ್ ನಿರ್ದೇಶನದಂತೆ ಜಿಬಿಎ ಪಾಲಿಕೆಗಳ ಚುನಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್
ಕೋರ್ಟ್ ನಿರ್ದೇಶನದಂತೆ ಜಿಬಿಎ ಪಾಲಿಕೆಗಳ ಚುನಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಸಭೆಯಲ್ಲಿ ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಸುಷಮಾ ಗೋಡಬೋಲೆ, ಅಪರ ಜಿಲ್ಲಾ ಚುನಾವಣಾಧಿಕಾರಿಗಳಾದ ಪೊಮ್ಮಲ ಸುನೀಲ್ ಕುಮಾರ್, ರಮೇಶ್, ಜಗದೀಶ್, ಕಂದಾಯ ಹೆಚ್ಚುವರಿ ಆಯುಕ್ತರಾದ ಕವಿತಾ, ರಂಗನಾಥ್, ಪಲ್ಲವಿ, ಸಹಾಯಕ ಆಯುಕ್ತರಾದ ಎಂ. ಶ್ರೀನಿವಾಸ, ಮತದಾರರ ನೋಂದಣಾಧಿಕಾರಿಗಳು, ಸಹಾಯಕ ಮತದಾರರ ನೋಂದಣಾಧಿಕಾರಿಗಳು ಸೇರಿದಂತೆ ಹಲವರು ಇದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+