Bengaluru Voters: ಅಂತಿಮ ಮತದಾರರ ಪಟ್ಟಿ ಪ್ರಕಟ, ಹೆಸರು ಸೇರಿಸಲು Form-6 ಮೂಲಕ ಅವಕಾಶ

ಬೆಂಗಳೂರು: ಬೆಂಗಳೂರು ನಗರದ ಮತದಾರರಿಗೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಭರ್ಜರಿ ಗುಡ್‌ನ್ಯೂಸ್ ಕೊಟ್ಟಿದೆ. ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಮುಕ್ತಾಯವಾಗಿದ್ದು, ಇದೀಗ ನಮೂನೆ-6 ಮೂಲಕ ಹೆಸರು ಸೇರ್ಪಡೆಗೆ ಅವಕಾಶ ಕಲ್ಪಿಸಲಾಗಿದೆ.

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026ರ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿ ಒಟ್ಟು 59,08,151 ಮತದಾರರು ಇರುವುದಾಗಿ ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಶಿಲ್ಪಾ ನಾಗ್ ಅವರು ತಿಳಿಸಿದ್ದಾರೆ.

Bengaluru Voters Final Electoral Roll Released Apply Through Form 6 to Add Your Name

ಬೆಂಗಳೂರಿನ ಜಿಬಿಎ ಕೇಂದ್ರ ಕಚೇರಿಯಲ್ಲಿ ಅಂತಿಮ ಮತದಾರರ ಪಟ್ಟಿ ಪ್ರಕಟಣೆ ಕುರಿತು ಆಯೋಜಿಸಿದ್ದ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಜಿಲ್ಲಾ ಚುನಾವಣಾಧಿಕಾರಿಗಳು- ಬೆಂಗಳೂರು ರವರ ವ್ಯಾಪ್ತಿಯ ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ ಹಾಗೂ ಬೆಂಗಳೂರು ದಕ್ಷಿಣ ಅಪರ ಜಿಲ್ಲಾ ಚುನಾವಣಾಧಿಕಾರಿಗಳ ವ್ಯಾಪ್ತಿಯಲ್ಲಿ ಒಟ್ಟು 59,08,151 ಮತದಾರರಿದ್ದು, ಅವರಲ್ಲಿ 28,67,256 ಪುರುಷರು, 30,40,221 ಮಹಿಳೆಯರು ಹಾಗೂ 674 ಇತರೆ ಮತದಾರರು ಇದ್ದಾರೆ ಎಂದಿದ್ದಾರೆ.

ಮತದಾರರ ಪಟ್ಟಿಯಲ್ಲಿ ಸೇರ್ಪಡೆ, ಮಾರ್ಪಾಡು - ಹೆಸರು ತೆಗೆದುಹಾಕುವ ಪ್ರಕ್ರಿಯೆ

ಕರಡು ಮತದಾರರ ಪಟ್ಟಿಗೆ ಹೋಲಿಸಿದಾಗ, ಅಂತಿಮ ಮತದಾರರ ಪಟ್ಟಿಯಲ್ಲಿ ಒಟ್ಟು 2,74,372 ಮತದಾರರ ಹೆಸರುಗಳನ್ನು ಹೊಸದಾಗಿ ಸೇರ್ಪಡೆಗೊಳಿಸಲಾಗಿದೆ. 1,81,053 ಮತದಾರರ ವಿವರಗಳಲ್ಲಿ ಮಾರ್ಪಾಡು ಮಾಡಲಾಗಿದ್ದು, 65,881 ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ. ಈ ಪ್ರಕ್ರಿಯೆಯ ಪರಿಣಾಮವಾಗಿ ಅಂತಿಮ ಮತದಾರರ ಪಟ್ಟಿಯಲ್ಲಿ ನಿವ್ವಳವಾಗಿ 2,08,491 ಮತದಾರರು ಹೆಚ್ಚುವರಿಯಾಗಿ ಸೇರ್ಪಡೆಯಾಗಿದ್ದಾರೆ ಎಂದು ತಿಳಿಸಿದ್ದಾರೆ.

ಅರ್ಹ ಮತದಾರರ ನೋಂದಣಿಗೆ ವಿಶೇಷ ಅಭಿಯಾನ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ, ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026ರ ಹಿಂದಿನ ಮತದಾರರ ಪಟ್ಟಿ ಹಾಗೂ ಪ್ರಸ್ತುತ ಪ್ರಕಟಿಸಿರುವ ಅಂತಿಮ ಮತದಾರರ ಪಟ್ಟಿಯನ್ನು ಪರಿಶೀಲಿಸಲು ಬೂತ್ ಮಟ್ಟದ ಅಧಿಕಾರಿಗಳಿಗೆ (ಬಿಎಲ್‌ಒ) ಸೂಚಿಸಲಾಗುವುದು. ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿಯಾಗದ ಅರ್ಹ ಮತದಾರರನ್ನು ಗುರುತಿಸಿ, ಅವರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ವಿಶೇಷ ಅಭಿಯಾನ ಕೈಗೊಳ್ಳಲು ಕ್ರಮ ವಹಿಸಲಾಗುವುದು.

ವೆಬ್‌ಸೈಟ್ ಮೂಲಕ ಮತದಾರರ ಪಟ್ಟಿ ಪರಿಶೀಲನೆ

ಸಾರ್ವಜನಿಕರು ಯಾವುದೇ ಕಚೇರಿಗೆ ಭೇಟಿ ನೀಡುವ ಅಗತ್ಯವಿಲ್ಲದೆ, ಮುಖ್ಯ ಚುನಾವಣಾಧಿಕಾರಿಗಳ ಕರ್ನಾಟಕ ವೆಬ್‌ಸೈಟ್ www.ceokarnataka.kar.nic.in ಮೂಲಕ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಪರಿಶೀಲಿಸಿ ಖಚಿತಪಡಿಸಿಕೊಳ್ಳಬಹುದು.

ನಮೂನೆ-6 ಮೂಲಕ ಹೆಸರು ಸೇರ್ಪಡೆಗೆ ಅವಕಾಶ

ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸುವ ಪ್ರಕ್ರಿಯೆ ನಿರಂತರವಾಗಿ ನಡೆಯಲಿದ್ದು, ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗದ ಅರ್ಹ ಮತದಾರರು ಅಗತ್ಯ ದಾಖಲೆಗಳೊಂದಿಗೆ ನಮೂನೆ-6 ಅನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಬಹುದು. ಅರ್ಹ ಮತದಾರರು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ವಿಶೇಷ ಆಯುಕ್ತರು ಮನವಿ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+