'ವಾರ್ಡ್ ಒನ್' ಅಭಿಯಾನ: ಬೆಂಗಳೂರಿನಲ್ಲಿ ಮಾದರಿ ವಾರ್ಡ್ ರೂಪಿಸಲು ಪ್ಲ್ಯಾನ್, ಏನೆಲ್ಲ ಸುವ್ಯವಸ್ಥೆ ಇರಲಿದೆ?

ಬೆಂಗಳೂರು: ನಾಗರಿಕ ಸೌಲಭ್ಯಗಳ ಸುಧಾರಣೆ ಮತ್ತು ಸ್ವಚ್ಛತೆಗೆ ಆದ್ಯತೆ ನೀಡುವ ಉದ್ದೇಶದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ 'ವಾರ್ಡ್ ಒನ್' ಅಭಿಯಾನ ಆರಂಭವಾಗಿದೆ. ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯ ಮಾದರಿ ವಾರ್ಡ್‌ ನಿರ್ಮಿಸಲು ಕ್ರಮ ವಹಿಸಿ ಎಂದು ತಿಳಿಸಿದರು.

ಬೆನ್ನಿಗಾನಹಳ್ಳಿಯಿಂದ ಕೆ.ಆರ್. ಪುರಂ ಮೆಟ್ರೋ ನಿಲ್ದಾಣದವರೆಗೆ ಆಯುಕ್ತ ಡಿ.ಎಸ್. ರಮೇಶ್ ಅವರು ಸ್ಥಳ ಪರಿಶೀಲನೆ ನಡೆಸಿದರು. ಬಳಿಕ , ರಸ್ತೆ ಅಭಿವೃದ್ಧಿ, ಪಾದಚಾರಿ ಮಾರ್ಗ ಹಾಗೂ ಸರ್ವೀಸ್ ರಸ್ತೆ ನಿರ್ಮಾಣ, ಒಳಚರಂಡಿ ಸ್ವಚ್ಛತೆ, ಕಲ್ವರ್ಟ್‌ಗಳಲ್ಲಿ ಹೂಳು ತೆರವು ಮತ್ತು ರಸ್ತೆ ಬದಿಯ ಸ್ವಚ್ಛತೆ ಕ್ರಮಕ್ಕೆ ಸೂಚಿಸಿದರು.

Bengaluru Ward One Campaign

ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ, ರಸ್ತೆ ಬದಿಯ ನಿರ್ಮಾಣ ತ್ಯಾಜ್ಯ ತೆರವು, ಮಳೆನೀರು ನಿಲುಗಡೆ ಸಮಸ್ಯೆ ನಿವಾರಣೆ ಹಾಗೂ ರಸ್ತೆ ಗುಂಡಿಗಳ ದುರಸ್ತಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಅಲ್ಲದೆ, ಅಕ್ಟೋಬರ್ 31ರ ಶನಿವಾರದಂದು ಮತ್ತೊಮ್ಮೆ ಸ್ಥಳ ಪರಿಶೀಲನೆ ನಡೆಸಿ, ಈಗಾಗಲೇ ಗುರುತಿಸಲಾದ ಸಮಸ್ಯೆಗಳನ್ನು ಪರಿಹರಿಸಿದ ಕುರಿತು ಮಾಹಿತಿ ಪಡೆದರು.

ಪಾದಚಾರಿ, ಸರ್ವೀಸ್ ರಸ್ತೆ ಅಭಿವೃದ್ಧಿಗೆ ಆದ್ಯತೆ

ಪಾದಚಾರಿ ಮಾರ್ಗಗಳ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವಾಗ ಸಂಚಾರಕ್ಕೆ ಯಾವುದೇ ಅಡಚಣೆಯಾಗದಂತೆ ಕ್ರಮ ವಹಿಸಬೇಕು. ಪಾದಚಾರಿ ಮಾರ್ಗ ಹಾಗೂ ಸರ್ವೀಸ್ ರಸ್ತೆ ನಿರ್ಮಾಣ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಕಾಮಗಾರಿಗಳಿಗೆ ಸಂಬಂಧಿಸಿದಂತೆ ಸ್ಥಳದಲ್ಲಿನ ಗಡಿ ಗುರುತುಗಳನ್ನು ಪರಿಶೀಲಿಸಿ, ಉಂಟಾಗಿರುವ ಗೊಂದಲಗಳನ್ನು ಬಗೆಹರಿಸಿಕೊಂಡು ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಿ ವಾರ್ಡ್‌ಗಳನ್ನು ಮಾದರಿಯಾಗಿಸಬೇಕು ಎಂದರು.

ಬ್ಲಾಕ್ ಸ್ಪಾಟ್‌ಗಳ ತೆರವು

ಎಲ್ಲೆಂದರಲ್ಲಿ ರಸ್ತೆ ಬದಿಗಳಲ್ಲಿ ಸಂಗ್ರಹವಾಗಿರುವ ಡೆಬ್ರಿಸ್, ಸಿಲ್ಟ್ ಹಾಗೂ ಇತರ ತ್ಯಾಜ್ಯಗಳನ್ನು ತೆರವುಗೊಳಿಸಬೇಕು. ಗುರುತಿಸಲಾದ ಬ್ಲಾಕ್ ಸ್ಪಾಟ್‌ಗಳನ್ನು ಸ್ವಚ್ಛಗೊಳಿಸಿ, ಮತ್ತೆ ತ್ಯಾಜ್ಯ ಸಂಗ್ರಹವಾಗದಂತೆ ಕ್ರಮ ವಹಿಸಬೇಕು. ರಸ್ತೆ ಬದಿಯಲ್ಲಿ ಕಸ ಸುರಿಯುವುದನ್ನು ತಡೆಯಲು ಮಾರ್ಷಲ್‌ಗಳಳು ನಿರಂತರ ನಿಗಾ ವಹಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಕಸ ಸುರಿಯುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಮಳೆನೀರು ನಿಲುಗಡೆ ಸಮಸ್ಯೆ ನಿವಾರಿಸಿ

ಮಳೆಗಾಲದಲ್ಲಿ ನೀರು ನಿಲ್ಲುವ ಸ್ಥಳಗಳನ್ನು ಗುರುತಿಸಿ, ಸಮಸ್ಯೆ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು. ರಸ್ತೆ ಬದಿಯ ಚರಂಡಿಗಳನ್ನು ಸ್ವಚ್ಛಗೊಳಿಸಿ, ಮಳೆನೀರು ಸರಾಗವಾಗಿ ಹರಿಯುವಂತೆ ವ್ಯವಸ್ಥೆ ಮಾಡಬೇಕು. ಕಲ್ವರ್ಟ್‌ಗಳಲ್ಲಿನ ಹೂಳನ್ನು ತೆರವುಗೊಳಿಸಿ, ಅಗತ್ಯವಿರುವ ಸ್ಥಳಗಳಲ್ಲಿ ಗ್ರೇಟಿಂಗ್ಗಳನ್ನು ಅಳವಡಿಸಬೇಕು. ಹಾನಿಗೊಳಗಾದ ಕಲ್ವರ್ಟ್ಗಳ ಪುನರ್ನಿರ್ಮಾಣ ಕಾಮಗಾರಿಗಳನ್ನು ಆರಂಭಿಸಬೇಕು.

ಸುಗಮ ಸಂಚಾರಕ್ಕೆ ವ್ಯವಸ್ಥೆ

ರಸ್ತೆ ಮಧ್ಯದಲ್ಲಿರುವ ಖಾಲಿ ಜಾಗಗಳನ್ನು ಪರಿಶೀಲಿಸಿ, ಅಗತ್ಯವಿರುವ ಸ್ಥಳಗಳಲ್ಲಿ ಸಾರ್ಜನಿಕ ಉಪಯೋಗಿ ಬಯಲು ಪ್ರದೇಶವಾಗಿ ನಿರ್ಮಾಣಕ್ಕೆ ಕಾರ್ಯಯೋಜನೆ ರೂಪಿಸಬೇಕು. ಫ್ರೀ ಲೆಫ್ಟ್ ವ್ಯವಸ್ಥೆ ಕಲ್ಪಿಸಿ, ಸಂಚಾರ ದಟ್ಟಣೆ ಕಡಿಮೆ ಮಾಡಲು ಕ್ರಮ ಕೈಗೊಳ್ಳಬೇಕು. ರಸ್ತೆ ಗುಂಡಿಗಳನ್ನು ತಕ್ಷಣ ಮುಚ್ಚಿ, ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕು. ರಸ್ತೆ ಬದಿಯಲ್ಲಿ ಅನಧಿಕೃತವಾಗಿ ನಿಲ್ಲಿಸಿರುವ ವಾಹನಗಳನ್ನು ತೆರವುಗೊಳಿಸಲು ಮಾಲೀಕರಿಗೆ ಸೂಚನೆ ನೀಡಿ, ಸೂಚನೆ ಪಾಲಿಸದವರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು ಎಂದರು.

ಬೆಸ್ಕಾಂ ಟ್ರಾನ್ಸ್ಫಾರ್ಮರ್ ಸ್ಥಳಾಂತರ

ರಸ್ತೆ ಅಭಿವೃದ್ಧಿಗೆ ಅಡ್ಡಿಯಾಗುತ್ತಿರುವ ಬೆಸ್ಕಾಂ ಟ್ರಾನ್ಸ್ಫಾರ್ಮರ್ ಅನ್ನು ಸೂಕ್ತ ಸ್ಥಳಕ್ಕೆ ಸ್ಥಳಾಂತರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಈ ಸಂಬಂಧ ಬೆಸ್ಕಾಂ ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ, ಸ್ಥಳಾಂತರಕ್ಕೆ ಇರುವ ಅಡಚಣೆಗಳನ್ನು ನಿವಾರಿಸಬೇಕು. ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಬೇಕೆಂದರು.

ರಸ್ತೆ ಬದಿಯಲ್ಲಿರುವ ಖಾಲಿ ಜಾಗಗಳನ್ನು ಪರಿಶೀಲಿಸಿ, ಅಗತ್ಯವಿರುವ ಸ್ಥಳಗಳಲ್ಲಿ ವೆಂಡಿಂಗ್ ಜೋನ್ ನಿರ್ಮಿಸಲು ಕಾರ್ಯಯೋಜನೆ ರೂಪಿಸಿ. ಲಭ್ಯವಿರುವ ಜಾಗವನ್ನು ಸಮರ್ಪಕವಾಗಿ ಬಳಸಿಕೊಂಡು, ಸಂಚಾರಕ್ಕೆ ಅಡಚಣೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಈ ಮೂಲಕ ವಾರ್ಡ್‌ಗಳನ್ನು ಮಾದರಿಯಾಗಿಸಬೇಕು. ಇನ್ನಷ್ಟು ಉತ್ತಮಗೊಳಿಸಲು ಯೋಜನೆ ರೂಪಿಸುವಂತೆ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+