Bengaluru Waste: ಬೆಂಗಳೂರಲ್ಲಿ ಮಿಶ್ರ ಕಸ ನೀಡಿದರೆ 200 ರೂ.ದಿಂದ 500 ರೂ. ದಂಡ: ತ್ಯಾಜ್ಯ ವಿಂಗಡಣೆ ಕಡ್ಡಾಯ
Bengaluru Waste: ಬೆಂಗಳೂರಿನಲ್ಲಿ ಮಿಶ್ರಕಸ ನೀಡುವವರಿಗೆ ದಂಡ ವಿಧಿಸುವುದಕ್ಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತ ಮುಂದಾಗಿದೆ. ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ (ಬೆಂ.ಘ.ನಿ.ನಿ) ಸಿಇಒ ಕರೀಗೌಡ ಅವರು ಹೇಳಿದ್ದೇನು ಎನ್ನುವ ವಿವರ ಇಲ್ಲಿದೆ.
ಬೆಂಗಳೂರಿನಲ್ಲಿ ಕಸ ನಿರ್ವಹಣೆ ವ್ಯವಸ್ಥೆಯನ್ನು ಸುಧಾರಿಸುವುದಕ್ಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿ. ಮುಂದಾಗಿದೆ. ಮನೆ - ಮನೆ ತ್ಯಾಜ್ಯ ಸಂಗ್ರಹಣೆ ಸಂದರ್ಭದಲ್ಲಿ ಮಾರ್ಷಲ್‌ಗಳು ಮತ್ತು ಲಿಂಕ್ ವರ್ಕರ್‌ಗಳು ಸಹ ಹಾಜರಿರಲಿದ್ದಾರೆ. ಹಸಿ ಮತ್ತು ಒಣ ತ್ಯಾಜ್ಯವನ್ನು ಪ್ರತ್ಯೇಕಿಸಿ ನೀಡುವ ಸಾರ್ವಜನಿಕರಿಂದ ಸ್ಥಳದಲ್ಲೇ ವಿಂಗಡಿಸಿಕೊಳ್ಳಲಾಗುತ್ತದೆ. ನಿರಂತರವಾಗಿ ಮಿಶ್ರ ತ್ಯಾಜ್ಯ ನೀಡುವವರಿಗೆ 200 ರೂಪಾಯಿಯಿಂದ 500 ರೂಪಾಯಿಯ ವರೆಗೆ ದಂಡ ವಿಧಿಸಲಾಗುತ್ತದೆ ಎಂದು ಕರೀಗೌಡ ಅವರು ಹೇಳಿದ್ದಾರೆ.

ಬೆಂಗಳೂರಿನಲ್ಲಿ ತ್ಯಾಜ್ಯ ಸಂಗ್ರಹಣೆಯ ಕ್ರಮಬದ್ಧ ವ್ಯವಸ್ಥೆ ಮಾಡಲಾಗುತ್ತಿದೆ. ಪ್ರತಿನಿತ್ಯ ಬೆಳಿಗ್ಗೆ 5.30 ರಿಂದ 6.30 ರವರೆಗೆ ಆಟೋ ಟಿಪ್ಪರ್‌ಗಳು ಮಸ್ಟರಿಂಗ್ ಪಾಯಿಂಟ್‌ನಲ್ಲಿ ಆರ್‌ಎಫ್‌ಐಡಿ ಮೂಲಕ ಹಾಜರಾತಿ ದಾಖಲಿಸಿ, ರಸ್ತೆ ಬದಿ ಕಸ ಸುರಿಯುವ ಸ್ಥಳಗಳಿಗೆ (ಬ್ಲಾಕ್ ಸ್ಪಾಟ್‌ಗಳು) ತೆರಳಿ ಮಿಶ್ರ ತ್ಯಾಜ್ಯ ಸಂಗ್ರಹಿಸುತ್ತವೆ. ನಂತರ ಮಿಶ್ರ ತ್ಯಾಜ್ಯವನ್ನು ಹಸಿ ಮತ್ತು ಒಣ ತ್ಯಾಜ್ಯವಾಗಿ ಪ್ರತ್ಯೇಕಿಸಿ ಕಾಂಪ್ಯಾಕ್ಟರ್‌ಗಳಿಗೆ ಹಸ್ತಾಂತರಿಸಲಾಗುತ್ತದೆ. ಅನಂತರ ಮನೆ-ಮನೆಗೆ ಭೇಟಿ ನೀಡಿ ಬೆಳಿಗ್ಗೆ 10.30 ರವರೆಗೆ ಕಸ ಸಂಗ್ರಹಣೆ ಮಾಡಲಾಗುತ್ತದೆ. ಮನೆ - ಮನೆ ಸಂಗ್ರಹಣೆ ನಂತರ ಬ್ಲಾಕ್ ಸ್ಪಾಟ್‌ಗಳ ಮರುಪರಿಶೀಲನೆ ನಡೆಸಿ ಕಸ ಬಿಸಾಡಿದರೆ ತಕ್ಷಣ ತೆರವುಗೊಳಿಸಲಾಗುತ್ತದೆ ಎಂದು ಹೇಳಿದ್ದಾರೆ.
ಪೌರಕಾರ್ಮಿಕರು ಬೆಳಿಗ್ಗೆ 6.30ಕ್ಕೆ ಹಾಜರಾತಿ ದಾಖಲಿಸಿ ವಾರ್ಡ್ ರಸ್ತೆಗಳಲ್ಲಿ ಪ್ರತಿ 750 ಮೀಟರ್ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ಪ್ರಾರಂಭಿಸುತ್ತಾರೆ. 10.30 ನಂತರ ಪ್ರಮುಖ ರಸ್ತೆಗಳಲ್ಲಿ ಸಾಮೂಹಿಕ ಸ್ವಚ್ಛತಾ ಕಾರ್ಯ ನಡೆಸಲಾಗುತ್ತದೆ. ಪ್ಲಾಸ್ಟಿಕ್ ತ್ಯಾಜ್ಯವನ್ನು ಪ್ರತ್ಯೇಕವಾಗಿ ಸಂಗ್ರಹಿಸಲಾಗುತ್ತದೆ ಎಂದಿದ್ದಾರೆ.
ರಾಜಾಜಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಸ್ತುತ ಶೇ.95 ರಷ್ಟು ತ್ಯಾಜ್ಯ ವಿಂಗಡಣೆ ಪ್ರಗತಿ ಸಾಧಿಸಿದ್ದು, ಮತ್ತಷ್ಟು ಪ್ರಗತಿ ಸಾಧಿಸುವ ಸಲುವಾಗಿ ಎಲ್ಲಾ ಸಾರ್ವಜನಿಕರು ನಮ್ಮೊಂದಿಗೆ ಸಹಕರಿಸಬೇಕೆಂದು ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ (ಬೆಂ.ಘ.ನಿ.ನಿ) ಸಿಇಒ ಕರೀಗೌಡ ಅವರು ಹೇಳಿದ್ದಾರೆ. ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯ ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ತ್ಯಾಜ್ಯ ವಿಂಗಡಣೆಯಲ್ಲಿ ಅಭೂತಪೂರ್ಣ ಸಾಧನೆಯ ಮಾಡಿರುವ ಹಿನ್ನೆಲೆಯಲ್ಲಿ ಶಾಸಕರಾದ ಸುರೇಶ್ ಕುಮಾರ್ ಅವರು ಅಧಿಕಾರಿಗಳನ್ನು ಅಭಿನಂದಿಸಿದ ನಂತರ ಅವರು ಮಾತನಾಡಿದರು.
ಇನ್ನು ಈ ಭಾಗದಲ್ಲಿ ಸಾರ್ವಜನಿಕರು ಸಹಕಾರಿಸಿದ್ದರಿಂದಲೇ ಶೇ. 95 ರಷ್ಟು ತ್ಯಾಜ್ಯ ವಿಂಗಡಣೆಯ ದೊಡ್ಡ ಸಾಧನೆ ಸಾಧ್ಯವಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಪ್ರಗತಿ ಸಾಧಿಸಲು ಸಾರ್ವಜನಿಕರು ಹಸಿ ಮತ್ತು ಒಣ ತ್ಯಾಜ್ಯವನ್ನು ಕಡ್ಡಾಯವಾಗಿ ಪ್ರತ್ಯೇಕಿಸಿ ನೀಡುವಂತೆ ಮನವಿ ಮಾಡಿದರು. ಇನ್ನು ರಾಜಾಜಿನಗರ ವ್ಯಾಪ್ತಿಯಲ್ಲಿ 7 ವಾರ್ಡ್‌ಗಳು ಒಳಗೊಂಡಿದ್ದು, ಪ್ರಾರಂಭದಲ್ಲಿ ಶೇ.61 ರಷ್ಟು ಮಾತ್ರ ತ್ಯಾಜ್ಯ ವಿಂಗಡಣೆ ಆಗುತ್ತಿತ್ತು. ಪ್ರಸ್ತುತ ತ್ಯಾಜ್ಯ ನಿರ್ವಹಣೆಗೆ 14 ಕಾಂಪ್ಯಾಕ್ಟರ್‌ಗಳು, 137 ಆಟೋ ಟಿಪ್ಪರ್‌ಗಳು, 274 ಚಾಲಕರು/ಸಹಾಯಕರು ಮತ್ತು 347 ಪೌರಕಾರ್ಮಿಕರು ನಿಯೋಜಿಸಲ್ಪಟ್ಟಿದ್ದಾರೆ ಎಂದರು.
ಜಾಗೃತಿ ಕಾರ್ಯಕ್ರಮಗಳು
ಹಸಿ ಮತ್ತು ಒಣ ತ್ಯಾಜ್ಯ ವಿಂಗಡಣೆ ಕುರಿತು ರಾಜಾಜಿನಗರ ವ್ಯಾಪ್ತಿಯಲ್ಲಿ ಜಾಥಾಗಳು, ಧ್ವನಿವರ್ಧಕ ಮೂಲಕ ಪ್ರಚಾರ ಹಾಗೂ ಸ್ವಚ್ಛ ಸರ್ವೇಕ್ಷಣ್ ಅಭಿಯಾನದ ಅಂಗವಾಗಿ ಶಾಲೆ, ಕಾಲೇಜು, ಉದ್ಯಾನವನ ಹಾಗೂ ಧಾರ್ಮಿಕ ಕೇಂದ್ರಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿಗೆ ಅಭಿನಂದನೆಗಳು. ಎಲ್ಲರೂ ಒಂದು ತಂಡವಾಗಿ ಕಾರ್ಯನಿರ್ವಹಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ತ್ಯಾಜ್ಯ ವಿಂಗಡಣೆಯಲ್ಲಿ ಅಭೂತಪೂರ್ವ ಸಾಧನೆ ಮಾಡಲಾಗಿದೆ. ಜಿಬಿಎ ವ್ಯಾಪ್ತಿಯಲ್ಲಿ ಮೊದಲ ಸ್ಥಾನ ಗಳಿಸಿರುವುದು ಹೆಮ್ಮೆಯ ವಿಷಯವಾಗಿದೆ. ಸಹಕರಿಸಿದ ಎಲ್ಲಾ ಸಾರ್ವಜನಿಕರಿಗೆ ಧನ್ಯವಾದಗಳು ಎಂದು ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಸುರೇಶ್ ಕುಮಾರ್ ಹೇಳಿದ್ದಾರೆ.
ಈ ಸಂದರ್ಭದಲ್ಲಿ ಉತ್ತರ ವಲಯ ನಗರ ಪಾಲಿಕೆ ಅಧಿಕಾರಿಗಳು, ಎಜಿಎಂ, ಮಾರ್ಷಲ್ ಮೇಲ್ವಿಚಾರಕರು, ಮಾರ್ಷಲ್‌ಗಳು, ಲಿಂಕ್ ವರ್ಕರ್‌ಗಳು ಸೇರಿದಂತೆ ಹಲವರು ಹಾಜರಿದ್ದರು.
-
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರುಗೆ ಆರ್ ಅಶೋಕ್ ತೀವ್ರ ಟೀಕೆ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ -
ಬೆಂಗಳೂರು ನಾಗರಿಕರೇ ಗಮನಿಸಿ; ಪರಿಷ್ಕೃತ ಕರಡು ಮತದಾರರ ಪಟ್ಟಿ- ಅಹವಾಲು, ಆಕ್ಷೇಪಣೆ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು









Click it and Unblock the Notifications