Bengaluru: ಬೆಂಗಳೂರು ತ್ಯಾಜ್ಯ ನಿರ್ವಹಣೆ: ಪ್ರತಿದಿನವೂ ವರದಿ ನೀಡಿಲು ಅಧಿಕಾರಿಗಳಿಗೆ ರಾಜೇಂದ್ರ ಚೋಳನ್ ಸೂಚನೆ
Bengaluru: ಬೆಂಗಳೂರಿನಲ್ಲಿ ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ಪ್ರಾಧಿಕಾರ ವ್ಯಾಪ್ತಿಯ ಬೆಂಗಳೂರು ಕೇಂದ್ರ ನಗರ ಪಾಲಿಕೆಯಿಂದ ಮಹತ್ವದ ಸೂಚನೆಯೊಂದನ್ನು ನೀಡಲಾಗಿದೆ. ತ್ಯಾಜ್ಯ ನಿರ್ವಹಣೆಯಲ್ಲಿ ಸರಿಯಾಗಿ ಕಾರ್ಯ ನಿರ್ವಹಿಸಿದ ಅಧಿಕಾರಿಗಳು/ ಸಿಬ್ಬಂದಿಸ್ಥಳ ಬದಲಾವಣೆ ಹಾಗೂ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.
ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ರಾಜೇಂದ್ರ ಚೋಳನ್ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಏಪ್ರಿಲ್ 15ರಂದು ಘನತ್ಯಾಜ್ಯ ನಿರ್ವಹಣೆ ಕುರಿತು ಅಧಿಕಾರಿಗಳು ಹಾಗೂ ಸಿಬ್ಬಂದಿಯೊಂದಿಗೆ ಪ್ರಗತಿ ಪರಿಶೀಲನೆ ಸಭೆ ನಡೆಸಿದ ನಂತರ ಅವರು ಮಾತನಾಡಿದರು. ಕೇಂದ್ರ ನಗರ ಪಾಲಿಕೆಯು ಬೆಂಗಳೂರು ನಗರದ ಹೃದಯ ಭಾಗದಲ್ಲಿದ್ದು, ಪ್ರತಿನಿತ್ಯ ಕಸ ತೆರವು ಕಾರ್ಯವು ಸಮರ್ಪಕವಾಗಿ ನಿರ್ವಹಣೆ ಆಗಬೇಕು. ಈ ನಿಟ್ಟಿನಲ್ಲಿ ತ್ಯಾಜ್ಯ ನಿರ್ವಹಣೆ ಬಗ್ಗೆ ಪ್ರತಿದಿನವೂ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬ್ಲ್ಯಾಕ್‌ಸ್ಪಾಟ್‌ಗಳ ಪಟ್ಟಿ ಮಾಡಿ ಸ್ವಚ್ಛಗೊಳಿಸಿ
ಬೆಂಗಳೂರು ನಗರ ಪ್ರದೇಶದಲ್ಲಿ ತ್ಯಾಜ್ಯ ಬ್ಲ್ಯಾಕ್‌ಸ್ಪಾಟ್‌ಗಳು (ಎಲ್ಲೆಂದರಲ್ಲಿ ಕಸ ಎಸೆಯುವ ಪ್ರದೇಶ) ಹೆಚ್ಚಾಗಿ ಇರುವ ಸ್ಥಳಗಳನ್ನು ಗುರುತಿಸಿ ಪಟ್ಟಿ ಮಾಡಿ ಅವುಗಳನ್ನು ತೆರವುಗೊಳಿಸುವುದು ಹಾಗೂ ಈ ಬ್ಲ್ಯಾಕ್‌ಸ್ಪಾಟ್‌ಗಳನ್ನು ಶಾಶ್ವತವಾಗಿ ನಿರ್ಮೂಲನೆಗೆ ಕ್ರಮ ವಹಿಸಲು ಸೂಚನೆ ನೀಡಿದ್ದಾರೆ. ಪ್ರತಿ ಬೀದಿಗಳಿಗೆ ನಿಯೋಜನೆ ಮಾಡಿದ ಸ್ವಚ್ಛತೆ ಸಿಬ್ಬಂದಿ ವಿವರವನ್ನು ಹಾಗೂ ಅವರು ಅಲ್ಲಿ ಸರಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿರುವ ಬಗ್ಗೆ ಮೇಲುಸ್ತುವಾರಿ ಮಾಡುವಂತೆ ಡಿಜಿಎಂ ಹಾಗೂ ಎಜಿಎಂ ಗಳಿಗೆ ಸೂಚನೆ ನೀಡಿದ್ದಾರೆ. ತ್ಯಾಜ್ಯ ನಿರ್ವಹಣೆಯಲ್ಲಿ ಸರಿಯಾಗಿ ಕಾರ್ಯ ನಿರ್ವಹಿಸಿದ ಅಧಿಕಾರಿಗಳು/ ಸಿಬ್ಬಂದಿಯ ಸ್ಥಳ ಬದಲಾವಣೆ ಹಾಗೂ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುವುದಾಗಿಯೂ ಎಚ್ಚರಿಸಿದ್ದಾರೆ.
ಕೇಂದ್ರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಈಗಾಗಲೇ ಸಾಕಷ್ಟು ಬಾರಿ ಸಮರ್ಪಕವಾಗಿ ನಿರ್ವಹಣೆ ಮಾಡಲು ಸೂಚನೆ ನೀಡಿದಾಗಲೂ ಹಲವು ಅಧಿಕಾರಿಗಳು/ ಸಿಬ್ಬಂದಿಗಳು ಸರಿಯಾಗಿ ಕಾರ್ಯಹಿಸುತ್ತಿಲ್ಲ. ಅಂತಹವರನ್ನು ಸ್ಥಳ ಬದಲಾವಣೆ ಹಾಗೂ ಸಮರ್ಪಕ ಕಾರ್ಯ ನಿರ್ವಹಿಸದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ವಹಿಸುವುದಾಗಿ ತಿಳಿಸಿದ್ದಾರೆ.
Bengaluru: ಮನೆ ಕಸ ಸಂಗ್ರಹಣೆ ಮಾಡಿ
ಆಟೋ ಟಿಪ್ಪರ್‌ಗಳು ನಿಗದಿತ ವೇಳೆಯಲ್ಲಿ ಮನೆ ಮನೆಯಿಂದ ತ್ಯಾಜ್ಯ ಸಂಗ್ರಹಣೆ ಮಾಡಬೇಕು. ಹಾಗೂ ಜನರು ಆಟೋ ಟಿಪ್ಪರ್‌ಗಳಿಗೆ ಕಸ ತಂದು ಕೊಡುವಂತೆ ಜನರಿಗೆ ತಿಳಿಸಲು ಸೂಚಿಸಿದ್ದಾರೆ. ಅಲ್ಲದೆ ಮುಂದುವರಿದು ಬೆಂಗಳೂರಿನಲ್ಲಿ ಜನರು ರಸ್ತೆಗೆ ಕಸ ಹಾಕದಂತೆ ಹಾಗೂ ಮನೆ ಬಳಿ ಬರುವಾಗ ಆಟೋ ಟಿಪ್ಪರ್ ಗಳಿಗೆ ಕಸ ನೀಡುವಂತೆ ಜನಜಾಗೃತಿ ಮೂಡಿಸುವ ಕಾರ್ಯ ನಿರಂತರವಾಗಿ ನಿರ್ದೇಶನ ನೀಡುವುದಕ್ಕೂ ತಿಳಿಸಲಾಗಿದೆ.
ವಲಯ ಜಂಟಿ ಆಯುಕ್ತರಿಗೆ ಸೂಚನೆ
ವಲಯ-1 & 2 ಜಂಟಿ ಆಯುಕ್ತರುಗಳು ತ್ಯಾಜ್ಯ ನಿರ್ವಹಣೆ ಬಗ್ಗೆ ನಿರಂತರ ಸ್ಥಳ ಪರಿಶೀಲನೆ ನಡೆಸಿ ವರದಿ ನೀಡಲು ನಿರ್ದೇಶನ ನೀಡಲಾಗಿದೆ. ಈ ಸಭೆಯಲ್ಲಿ ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಗಮ ನಿಯಮಿತ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ಕರೀಗೌಡ, ಕಂದಾಯ ಹೆಚ್ಚುವರಿ ಆಯುಕ್ತರಾದ ಕೆ. ರಂಗನಾಥ್, ಜಂಟಿ ಆಯುಕ್ತರಾದ ಹೇಮಂತ್ ಶರಣ್, ಮುಖ್ಯ ಎಂಜಿನಿಯರ್ ವಿಜಯ್ ಕುಮಾರ್ ಹರಿದಾಸ್ ಸೇರಿದಂತೆ ಹಲವರು ಹಾಜರಿದ್ದರು.












Click it and Unblock the Notifications