Water Bill: ಬೆಂಗಳೂರು ಕಾವೇರಿ ನೀರು ಬಳಕೆದಾರರಿಗೆ ಜಲಮಂಡಳಿ ಗುಡ್ ನ್ಯೂಸ್
ಬೆಂಗಳೂರು: ದೀರ್ಘಕಾಲದಿಂದ ನೀರಿನ ಬಿಲ್ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಕಾವೇರಿ ನೀರು ಬಳಕೆದಾರರಿಗೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು (BWSSB) ಗುಡ್ ನ್ಯೂಸ್ ನೀಡಿದೆ. ಇನ್ನು ಮುಂದೆ ನೀರಿನ ಬಿಲ್ ಪಾವತಿ ಸುಲಭ ಹಾಗೂ ದಂಡ ಮೊತ್ತ ಮನ್ನಾ ಆಗಲಿದೆ. ಈ ಹಿಂದೆ ಜಿಬಿಎ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಕಟ್ಟುವವರಿಗೆ ಒಟಿಎಸ್ ಯೋಜನೆ ಜಾರಿ ಮಾಡಿದಂತೆ ಜಲಮಂಡಳಿ ವ್ಯಾಪ್ತಿಯಲ್ಲೂ 2026ರಲ್ಲಿ ಜಾರಿಗೆ ನಿರ್ಧರಿಸಲಾಗಿದೆ. ಯಾವಾಗಿನಿಂದ ಜಾರಿ, ಪಿಲ್ ಪಾವತಿ ಹೇಗೆ? ಎಂಬುದರ ಸಂಪೂರ್ಣ ವಿವರ ಇಲ್ಲಿದೆ.
ಕರ್ನಾಟಕ ರಾಜ್ಯ ನಗರಾಭಿವೃದ್ದಿ ಇಲಾಖೆಯು ಒನ್ ಟೈನ್ ಸೆಟಲ್ಮೆಂಟ್ (ಒಟಿಎಸ್) ಯೋಜನೆಗೆ ಜಾರಿಗೆ ಗ್ರೀನ್ ಸಿಗ್ನಲ್ ನೀಡಿದೆ. ಸರ್ಕಾರದ ಆದೇಶದ (ಸಂಖ್ಯೆ: ನಅಇ 151 ಎಂಎನ್ಐ 2025 (ಇ) ಅಡಿಯಲ್ಲಿ ಡಿಸೆಂಬರ್ 23ರಂದು ನಗರದಲ್ಲಿ ಬಾಕಿ ಇರುವ ನೀರಿನ ಬಿಲ್ಲಿನ ಅಸಲು ಮೊತ್ತವನ್ನು (Principal Amount) ಏಕಕಾಲದಲ್ಲಿ ಪಾವತಿಸಿದರೆ, ಬಡ್ಡಿ ಮತ್ತು ದಂಡದ ಮೊತ್ತವನ್ನು ಶೇ.100 ರಷ್ಟು ಮನ್ನಾ ಮಾಡಲು ನಿರ್ಧರಿಸಲಾಗಿದೆ. ಈ ಯೋಜನೆ ಜಾರಿಗೆ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷರಾದ ಡಾ ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.

ಯೋಜನೆಯಡಿ ಬಿಲ್ ಪಾವತಿಗೆ ನೋಂದಣಿ ಅಗತ್ಯ
ಸರ್ಕಾರದ ನಿರ್ದೇಶನದಂತೆ ಗ್ರಾಹಕ ಸ್ನೇಹಿ ನಿಯಮಾವಳಿಗಳನ್ನು ಅಳವಡಿಸಲಾಗಿದೆ. ಗ್ರಾಹಕರು ನೇರವಾಗಿ ಜಲಮಂಡಳಿಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಅಲ್ಲದೇ, ಹೊಸ ಅಪ್ ಒಂದನ್ನು ನಿರ್ಮಿಸಲಾಗುತ್ತಿದ್ದು ಇವುಗಳಲ್ಲಿ ನೋಂದಣಿ ಮಾಡಿಕೊಂಡ ಗ್ರಾಹಕರಿಗೆ ಹಣ ಪಾವತಿಸಲು ಕಾಲಾವಕಾಶ ಮತ್ತು ಅಂತಿಮ ದಿನಾಂಕವನ್ನು ತಿಳಿಸಲಾಗುತ್ತದೆ. ಶೀಘ್ರವೇ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೊಂದಿಗೆ ಮತ್ತೊಮ್ಮೆ ಚರ್ಚಿ ದಂಡ ರಹಿತ ಬಿಲ್ ಪಾವತಿಗೆ ಯೋಜನೆ ಜಾರಿಗೊಳಿಸುವ ಬಗ್ಗೆ ದಿನಾಂಕವನ್ನು ಘೋಷಿಸಲಾಗುವುದು ಎಂದು ಹೇಳಿದರು. ಈ ಮೂಲಕ ಬೆಂಗಳೂರು ಜಲಮಂಡಳಿ ವ್ಯಾಪ್ತಿಯಲ್ಲಿ ನೀರಿನ ಬಿಲ್ ಸಂಗ್ರಹ ಪ್ರಕ್ರಿಯೆಗೆ ಚುರುಕು ನೀಡಲು ಹಾಗೂ ಕಟ್ಟದೇ ಬಾಕಿ ಇರುವ ನೀರಿನ ಬಿಲ್ ವಸೂಲಿಗೆ ಸೂಕ್ತ ಕ್ರಮ ಜರುಗಿಸುತ್ತಿದೆ.
ಒಟಿಎಸ್ ಯೋಜನೆಯಡಿ ಗ್ರಾಹಕರಿಗೆ ಬಿಲ್ ಪಾವತಿಸಿ
ಮೂರು ತಿಂಗಳಲ್ಲಿ ಬಿಲ್ ಪಾವತಿಸುವ ಸುವರ್ಣಾವಕಾಶವನ್ನು ಜಲಮಂಡಳಿ ನೀಡಿದೆ. ಯೋಜನೆಯಡಿ 2026 ಜನವರಿ, ಫೆಬ್ರವರಿ ಮತ್ತು ಮಾರ್ಚ್ ತಿಂಗಳುಗಳಲ್ಲಿ ಮಾತ್ರ ಚಾಲ್ತಿಯಲ್ಲಿರುತ್ತದೆ. ಈ ಅವಧಿಯಲ್ಲಿ ಪೂರ್ಣ ಅಸಲು ಪಾವತಿಸಿದರೆ, ಅವರ ಖಾತೆಯನ್ನು 'ಕ್ಲಿಯರ್' ಮಾಡಲಾಗುತ್ತದೆ ಎಂದರು.
ನೆರೆಯ ರಾಜ್ಯದ ಹೈದರಾಬಾದ್ನಲ್ಲಿ ಈ ಯೋಜನೆ ಎರಡು ಬಾರಿ ಯಶಸ್ವಿಯಾಗಿದೆ. ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅದೇ ಮಾದರಿಯನ್ನು ಇದೀಗ ಬೆಂಗಳೂರಿನಲ್ಲಿ ಅಳವಡಿಸಿಕೊಳ್ಳಲಾಗುತ್ತಿದೆ. ಗ್ರಾಹಕರು ಬಿಲ್ನ ಅಸಲು ಮೊತ್ತವನ್ನು ಪಾವತಿಸುತ್ತಿದ್ದಂತೆಯೇ, ತಂತ್ರಾಂಶದಲ್ಲಿ ಬಡ್ಡಿ ಮತ್ತು ದಂಡದ ಮೊತ್ತ ಸ್ವಯಂಚಾಲಿತವಾಗಿ ಮನ್ನಾ ಆಗುವಂತೆ ಬ್ಯಾಕ್ ಎಂಡ್ನಲ್ಲಿ ವ್ಯವಸ್ಥೆ ಮಾಡಲಾಗಿದೆ.
ಸರ್ಕಾರಿ ಕಟ್ಟಡಗಳು ಮತ್ತು ವಾಣೀಜ್ಯ ಮಳಿಗೆಗಳಿಗೆ ಜಲಮಂಡಳಿಯ ವಿಶೇಷ ತಂಡವೇ ಖುದ್ದು ಭೇಟಿ ನೀಡಿ ಮಾಹಿತಿ ನೀಡಲಿದೆ. ವಸತಿ ಕಟ್ಟಡಗಳಿಗೆ ಸಂಬಂಧಿಸಿದಂತೆ ಸ್ಥಳೀಯ ಅಧಿಕಾರಿಗಳು ಸಂಪರ್ಕಿಸುತ್ತಾರೆ ಹಾಗೂ ವೆಬ್ಸೈಟ್ ಮತ್ತು ಆಪ್ ಮೂಲಕವೂ ಮುಕ್ತ ಅವಕಾಶ ಕಲ್ಪಿಸಲಾಗುವುದು ಎಂದು ಅವರು ತಿಳಿಸಿದರು.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications