ಕುಡಿಯುವ ನೀರು ಅನ್ಯ ಉದ್ದೇಶಕ್ಕೆ ಬಳಕೆ ನಿಷೇಧ: ಉಲ್ಲಂಘಿಸಿದರೆ ದಂಡ ಬೀಳುತ್ತೆ ಜೋಕೆ

ಬೆಂಗಳೂರು,ಮಾರ್ಚ್‌ 08: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಳುತ್ತಿದೆ. ಹನಿ ಹನಿ ನೀರಿಗೂ ಸಹ ಜನ ಪರದಾಡುತ್ತಿದ್ದಾರೆ. ಟ್ಯಾಂಪರ್‌ ನೀರಿಗಾಗಿ ಮೂರ್ನಾಲ್ಕು ಗಂಟೆ ಕಾದು ಕುಳಿತರು ನೀರು ಸಿಗದೇ ಜನ ರೋಸಿ ಹೋಗಿದ್ದು, ಇದೀಗ ಕುಡಿಯುವ ನೀರು ಅನ್ಯ ಉದ್ದೇಶಕ್ಕೆ ಬಳಕೆ ಮಾಡುವುದನ್ನ ನಿಷೇದಿಸಲಾಗಿದೆ.

ಹೌದು, ಬೆಂಗಳೂರು ನಗರದಲ್ಲಿ ಕುಡಿಯುವ ನೀರನ್ನು ಅನ್ಯ ಉದ್ದೇಶಕ್ಕೆ ಬಳಕೆ ಮಾಡುವುದನ್ನು ನಿಷೇಧಿಸಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಆದೇಶ ಹೊರಡಿಸಿದೆ. ಸದರಿ ಆದೇಶ ಉಲ್ಲಂಘಿಸಿದ್ದಲ್ಲಿ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

Bengaluru Water Crisis Bwssb Order On Water Scarcity In Bengaluru

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಕಾಯ್ದೆ-1964ರ ಕಲಂ 33 ಮತ್ತು 34 ರ ಅನುಸಾರ ಬೆಂಗಳೂರು ನಗರದಲ್ಲಿ ಕುಡಿಯುವ ನೀರನ್ನು ವಾಹನಗಳ ಸ್ವಚ್ಚತೆಗೆ, ಕೈದೋಟಕ್ಕೆ,ಕಟ್ಟಡ ನಿರ್ಮಾಣಕ್ಕೆ, ಮನೋರಂಜಕವಾಗಿ ಕಾರಂಜಿಯಂತಹ ಆಕರ್ಷಕ ವ್ಯವಸ್ಥೆಗೆ,ಸಿನಿಮಾ ಮಂದಿರ ಮತ್ತು ಮಾಲುಗಳಲ್ಲಿನ ಕುಡಿಯುವ ನೀರಿನ ಹೊರತು ಇನ್ನಿತರೆ ಬಳಕೆಗೆ,ರಸ್ತೆ ನಿರ್ಮಾಣ ಮತ್ತು ಸ್ವಚ್ಚತೆಗೆ ಬಳಸಲು ಈ ಮೂಲಕ ನೀಷೇದಿಸಲಾಗಿದೆ ಎಂದು ಬಿಡಬ್ಲ್ಯೂಎಸ್ಎಸ್ಬಿ ಅಧ್ಯಕ್ಷರಾದ ಡಾ.ವಿ.ರಾಮ್‌ ಪ್ರಸಾತ್ ಮನೋಹರ್ ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

ಈ ನಿಷೇದ ಆದೇಶವನ್ನು ಉಲ್ಲಂಘನೆ ಮಾಡಿದಲ್ಲಿ, ಉಲ್ಲಂಘನೆ ಮಾಡುವವರ ವಿರುದ್ದ ಜಲಮಂಡಳಿಯ ಕಾಯ್ದೆ 1964 ರ ಕಲಂ 109 ರಂತೆ ರೂ. 5000/- ಗಳ ದಂಡ ವಿಧಿಸಲಾಗುವುದು. ಈ ಉಲ್ಲಂಘನೆಯು ಮರುಕಳಿಸಿದಲ್ಲಿ ದಂಡ ಮೊತ್ತ ರೂ.5000/- ಜೊತೆಗೆ ಹೆಚ್ಚುವರಿಯಾಗಿ ರೂ.500/- ಪ್ರತಿದಿನದಂತೆ ದಂಡ ಹಾಕಲಾಗುವುದು ಎಂದು ಅವರು ತಿಳಿಸಿದ್ದಾರೆ. ಸಾರ್ವಜನಿಕರು ಮೇಲ್ಕಂಡ ನಿಷೇಧಗಳನ್ನು ಯಾರಾದರು ಉಲ್ಲಂಘನೆ ಮಾಡುವುದು ಕಂಡುಬಂದಲ್ಲಿ ಕೂಡಲೇ ಮಂಡಳಿಯ ಕಾಲ್ ಸೆಂಟರ್ ಸಂಖ್ಯೆ : 1916 ಗೆ ತಿಳಿಸಬಹುದಾಗಿದೆ ಎಂದು ಅವರು ಮನವಿ ಮಾಡಿದ್ದಾರೆ.

ಬೆಂಗಳೂರು ಮಹಾನಗರದಲ್ಲಿ ಖಾಯಂ ವಾಸಿಗಳು ಹಾಗೂ ಬಂದು ಹೋಗುವವರನ್ನು ಸೇರಿಸಿ ಸುಮಾರು 1 ಕೋಟಿ 40 ಲಕ್ಷ ಜನಸಂಖ್ಯೆಯನ್ನು ಗುರುತಿಸಲಾಗಿದೆ. ಎಲ್ಲರಿಗೂ ಕುಡಿಯುವ ನೀರನ್ನು ಪೂರೈಕೆ ಮಾಡುವುದು ಅವಶ್ಯವಾಗಿರುತ್ತದೆ.

ಪ್ರಸ್ತುತ ನಗರದಲ್ಲಿ ಪ್ರತಿದಿನ ಉಷ್ಣಾಂಶ ಏರುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಮಳೆಯ ಕೊರತೆಯಿಂದ ಅಂತರ್ಜಲ ಕುಸಿದಿದ್ದು, ಬೆಂಗಳೂರು ನಗರದಲ್ಲಿ ನೀರನ್ನು ಪೋಲು ಮಾಡುವುದನ್ನು ತಡೆಗಟ್ಟಲು ಅವಶ್ಯವೆಂದು ಮನಗಂಡು ಕುಡಿಯುವ ನೀರನ್ನು ಸಾರ್ವಜನಿಕರು ಮಿತವಾಗಿ ಬಳಸುವಂತೆ ಆಗತ್ಯಪಡಿಸಲಾಗಿದೆ. ಈ ಹಿನ್ನಲೆಯಲ್ಲಿ ಸಾರ್ವಜನಿಕ ಹಿತದೃಷ್ಠಿಯಿಂದ ಈ ಆದೇಶ ಹೊರಡಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.

ಟ್ಯಾಂಕರ್ ನೀರಿನ ದರ ವಿವರ ಇಲ್ಲಿದೆ

* 6 ಸಾವಿರ ಲೀಟರ್ ಟ್ಯಾಂಕರ್​ಗೆ 600 ರೂ. ದರ ನಿಗದಿ. ಇದು 5 ಕಿಲೋ ಮೀಟರ್ ಒಳಗಡೆಗೆ ಮಾತ್ರ ಅನ್ವಯವಾಗಲಿದೆ.

* 6 ಸಾವಿರ ಲೀಟರ್ ಟ್ಯಾಂಕರ್ ಗೆ 750 ರೂ. ದರ ನಿಗದಿ. ಇದು 10 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಅನ್ವಯವಾಗಲಿದೆ.

* 8 ಸಾವಿರ ಲೀಟರ್ ಟ್ಯಾಂಕರ್​ಗೆ 700 ರೂ. ದರ ನಿಗದಿ‌‌ ಮಾಡಲಾಗಿದ್ದು, ಇದು 5 ಕಿಲೋ ಮೀಟರ್ ಒಳಗೆ ಅನ್ವಯವಾಗಲಿದೆ.

* 8 ಸಾವಿರ ಲೀಟರ್​ಗೆ 850 ರೂ. ದರ ನಿಗದಿ ಮಾಡಲಾಗಿದ್ದು, 10 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಈ ದರ ಪಡೆಯಬಹುದಾಗಿದೆ.

* 5 ಕಿಲೋ ಮೀಟರ್ ವ್ಯಾಪ್ತಿಗೆ 1,200 ಲೀಟರ್ ಟ್ಯಾಂಕರ್​​ಗೆ 1000 ರೂ. ದರ ನಿಗದಿ ಮಾಡಲಾಗಿದೆ.

* 1200 ಲೀಟರ್ ಟ್ಯಾಂಕರ್​​​ಗೆ 1200 ರೂ. ದರ ಫಿಕ್ಸ್ ಮಾಡಲಾಗಿದ್ದು 10 ಕಿಲೋ ಮೀಟರ್ ವ್ಯಾಪ್ತಿಗೆ ಅನ್ವಯವಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+